ಕಾರ್ಯಸಾಧ್ಯವಾದ ಪರ್ಯಾಯವನ್ನು ರೂಪಿಸಲು ಸಮಾನ ಮನಸ್ಕರೊಂದಿಗೆ ಹೊಂದಾಣಿಕೆ: ಖರ್ಗೆ
Team Udayavani, Feb 25, 2023, 2:41 PM IST
ನವದೆಹಲಿ : 2024ರ ಲೋಕಸಭೆ ಚುನಾವಣೆಯಲ್ಲಿ ‘ಜನವಿರೋಧಿ’ ಬಿಜೆಪಿ ಸರ್ಕಾರವನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಕಾರ್ಯಸಾಧ್ಯವಾದ ಪರ್ಯಾಯವನ್ನು ರೂಪಿಸಲು ಕಾಂಗ್ರೆಸ್ ಎದುರು ನೋಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ.
ಕಾಂಗ್ರೆಸ್ ನ 85ನೇ ಸರ್ವಸದಸ್ಯರ ಅಧಿವೇಶನದಲ್ಲಿ ಮಾತನಾಡಿದ ಖರ್ಗೆ, ದೇಶವು ಸಾಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲಿನ ನಿರಂತರ ದಾಳಿ, ಚೀನಾ ಗಡಿಯಲ್ಲಿ ರಾಷ್ಟ್ರೀಯ ಭದ್ರತೆಯ ಸಮಸ್ಯೆಗಳು, ಸಾರ್ವಕಾಲಿಕ ಅಧಿಕ ಹಣದುಬ್ಬರ ಮತ್ತು ದಾಖಲೆಯ ನಿರುದ್ಯೋಗದಂತಹ ಸವಾಲುಗಳನ್ನು ಎದುರಿಸುತ್ತಿದೆ ಎಂದರು.
ಈಗ ಇರುವ ಕಠಿಣ ಪರಿಸ್ಥಿತಿಗಳಲ್ಲಿ, ಸಮರ್ಥ ಮತ್ತು ನಿರ್ಣಾಯಕ ನಾಯಕತ್ವವನ್ನು ನೀಡಬಲ್ಲ ಏಕೈಕ ಪಕ್ಷ ಕಾಂಗ್ರೆಸ್.2004ರಿಂದ 2014ರವರೆಗೆ ಸಮಾನ ಮನಸ್ಕ ಪಕ್ಷಗಳೊಂದಿಗೆ ಕಾಂಗ್ರೆಸ್ ನೇತೃತ್ವದ ಮೈತ್ರಿ ದೇಶದ ಜನತೆಗೆ ಸೇವೆ ಸಲ್ಲಿಸಿದೆ” ಎಂದರು
ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ದೆಹಲಿಯಲ್ಲಿ ಕುಳಿತಿರುವವರ ಡಿಎನ್‌ಎ ಬಡವರ ವಿರೋಧಿ. ಏಕೆಂದರೆ ಅವರು ಪ್ರಜಾಪ್ರಭುತ್ವವನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದರು. ದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ವಿರುದ್ಧ ಜನಾಂದೋಲನಕ್ಕೆ ಕರೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿ, ತಮ್ಮನ್ನು “ಪ್ರಧಾನ ಸೇವಕ” ಎಂದು ಕರೆದುಕೊಳ್ಳುವವರು ತಮ್ಮ “ಸ್ನೇಹಿತರ” ಹಿತಾಸಕ್ತಿಗಳನ್ನು ಪೂರೈಸುತ್ತಿದ್ದಾರೆ ಎಂದು ಆರೋಪಿಸಿದರು. ಭಾರತದಲ್ಲಿ “ಪ್ರಜಾಪ್ರಭುತ್ವವನ್ನು ನಾಶಮಾಡುವ ಪಿತೂರಿ” ನಡೆಯುತ್ತಿದೆ, ಆದರೆ ಕಾಂಗ್ರೆಸ್ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.