ಲಾರಿ ಢಿಕ್ಕಿಯಾಗಿ ಬಸ್ ಪಲ್ಟಿ: ಚಾಲಕನಿಗೆ ಗಾಯ
Team Udayavani, Mar 18, 2023, 5:28 AM IST
ಕುಂದಾಪುರ: ಇಲ್ಲಿನ ಬಸ್ ಡಿಪ್ಪೋದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸಂತೆ ಮಾರುಕಟ್ಟೆ ಬಳಿಯ ಹೆದ್ದಾರಿಯಲ್ಲಿ ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಲಾರಿ ಹಿಂಬದಿಯಿಂದ ಬಂದು ಢಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ ಬೆಳಗ್ಗಿನ ಜಾವ ಸಂಭವಿಸಿದೆ.
ಬಸ್ ಪಲ್ಟಿಯಾದ ಪರಿಣಾಮ ಚಾಲಕ ಭಾಸ್ಕರ್ ಎನ್. ನಾಯ್ಕ ಅವರು ಗಾಯಗೊಂಡಿದ್ದು, ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಬಸ್ ಆಗ ತಾನೇ ಬರುತ್ತಿದ್ದ ಕಾರಣ ಪ್ರಯಾಣಿಕರು ಇರಲಿಲ್ಲ. ಮಾತ್ರವಲ್ಲದೆ ಬೆಳಗ್ಗಿನ ಜಾವ ಆಗಿದ್ದರಿಂದ ಹೆದ್ದಾರಿಯಲ್ಲಿ ವಾಹನ ದಟ್ಟಣೆಯೂ ಕಡಿಮೆ ಇದ್ದುದರಿಂದ ಹೆಚ್ಚಿನ ಅನಾಹುತ ಸಂಭವಿಸಲಿಲ್ಲ.
ರಾಷ್ಟ್ರೀಯ ಹೆದ್ದಾರಿಯ ಸಂತೆ ಮಾರುಕಟ್ಟೆ ಬಳಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ತೆರಳಲು ಉಡುಪಿ ಕಡೆಯಿಂದ ಬರುವಂತಹ ಬಸ್‌ಗಳನ್ನು ತಿರುಗಿಸಲು ಚಾಲಕರು ಪ್ರಯಾಸಪಡುವಂತಾಗಿದೆ. ಇದಲ್ಲದೆ ಹೆದ್ದಾರಿಯು ಆಗಾಗ್ಗೆ ಬ್ಲಾಕ್ ಆಗುತ್ತಿದ್ದು, ಸವಾರರು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಲಾರಿ ಚಾಲಕ ಈರಪ್ಪ ಆರ್. ಹಡಗಲಿ ಅವರ ವಿರುದ್ಧ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಂಬರ್ಗ್ರೀಸ್ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Shiroor: ಡಿವೈಡರ್ಗೆ ಕಾರು ಢಿಕ್ಕಿ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.