ದೆಹಲಿಯಲ್ಲಿ ಕಳೆದ 24ಗಂಟೆಯಲ್ಲಿ 89 ಕೋವಿಡ್ ಪ್ರಕರಣ ಪತ್ತೆ, 11 ಮಂದಿ ಸಾವು
ಕಳೆದ 24 ಗಂಟೆಯಲ್ಲಿ 173 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಕೋವಿಡ್ ನಿಂದ 24,925 ಮಂದಿ ಸಾವನ್ನಪ್ಪಿದ್ದಾರೆ.
Team Udayavani, Jun 21, 2021, 4:23 PM IST
ನವದೆಹಲಿ:ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕಳೆದ 24ಗಂಟೆಯಲ್ಲಿ 89 ನೂತನ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 11 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಇದು ಈ ವರ್ಷ ದಾಖಲಾದ ಅತೀ ಕಡಿಮೆ ಪ್ರಮಾಣದ ಪ್ರಕರಣವಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ: ಸಚಿವೆ ಶಶಿಕಲಾ ಜೊಲ್ಲೆ
ರಾಜಧಾನಿಯಲ್ಲಿ ಪಾಸಿಟಿವಿಟಿ ದರ ಕೂಡಾ ಶೇ.0.16ಕ್ಕೆ ಇಳಿಕೆಯಾಗಿದೆ. ಪ್ರಸ್ತುತ ದೆಹಲಿಯಲ್ಲಿ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ 1,996ಕ್ಕೆ ಇಳಿಕೆಯಾಗಿದೆ. ಚೇತರಿಕೆ ಪ್ರಮಾಣ ಶೇ.98.12ರಷ್ಟಿದ್ದು, ಕಳೆದ 24 ಗಂಟೆಯಲ್ಲಿ 173 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಕೋವಿಡ್ ನಿಂದ 24,925 ಮಂದಿ ಸಾವನ್ನಪ್ಪಿದ್ದಾರೆ.
ದೇಶಾದ್ಯಂತ ಕೋವಿಡ್ 19 ಸೋಂಕು ಪ್ರಕರಣ ಗಮನಾರ್ಹವಾಗಿ ಇಳಿಕೆಯಾಗುತ್ತಿದ್ದು, ಕಳೆದ 88 ದಿನಗಳ ನಂತರ ಇದೇ ಮೊದಲ ಬಾರಿಗೆ 53,256 ಕೋವಿಡ್ 19 ಪ್ರಕರಣ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಜೂನ್ 21) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಭಾರತದ ವಾರದ ಪಾಸಿಟಿವಿಟಿ ದರ ಪ್ರಸ್ತುತ ಶೇ.3.32ರಷ್ಟಿದೆ. ಅಲ್ಲದೇ ದಿನದ ಪಾಸಿಟಿವಿಟಿ ದರ ಶೇ.3.83ರಷ್ಟಿದೆ. ಶನಿವಾರ ಮತ್ತು ಭಾನುವಾರ ಕೋವಿಡ್ ನಿಂದ 1,422 ಮಂದಿ ಸಾವನ್ನಪ್ಪಿದ್ದರು. ಕೋವಿಡ್ ಸೋಂಕು ಪ್ರಕರಣ ಇಳಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ನಿರ್ಬಂಧ ಸಡಿಲಗೊಳಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.