ಮದ್ರಸಾ ಅಧ್ಯಾಪಕನಿಗೆ 53 ವರ್ಷ ಕಠಿಣ ಸಜೆ, ದಂಡ
ಇಬ್ಬರು ವಿದ್ಯಾರ್ಥಿಗಳಿಗೆ ಸಲಿಂಗರತಿ ಕಿರುಕುಳ ನೀಡಿದ ಪ್ರಕರಣ
Team Udayavani, Apr 1, 2023, 7:22 AM IST
ಕಾಸರಗೋಡು: ಇಬ್ಬರು ಮದ್ರಸಾ ವಿದ್ಯಾರ್ಥಿಗಳಿಗೆ ಸಲಿಂಗರತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಮದ್ರಸಾ ಅಧ್ಯಾಪಕ ಬಂಟ್ವಾಳದ ವಿಟ್ಲ ಪಟ್ನೂರು ಗ್ರಾಮದ ಬದ್ರಕಡಂಬು ನಿವಾಸಿ ಅಬ್ದುಲ್ ಹನೀಫ್ ಮದನಿ (44) ಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ಪ್ರಥಮ) ಫೋಕ್ಸೋ ಕಾನೂನು ಹಾಗೂ ಇತರ ಸೆಕ್ಷನ್‌ನಡಿ ಒಟ್ಟು 53 ವರ್ಷ ಕಠಿನ ಸಜೆ ಮತ್ತು 3.25 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ದಂಡ ಪಾವತಿಸದಿದ್ದಲ್ಲಿ ಮೂರೂವರೆ ವರ್ಷ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ. ಫೋಕ್ಸೋದ ಎರಡು ಸೆಕ್ಷನ್‌ಗಳಡಿ ನ್ಯಾಯಾಲಯ ತಲಾ 20 ವರ್ಷ ಸಜೆ, ಐಪಿಸಿಯ ಎರಡು ಸೆಕ್ಷನ್‌ಗಳಡಿ 13 ವರ್ಷ ಸಹಿತ ಒಟ್ಟು 53 ವರ್ಷ ಸಜೆ ವಿಧಿಸಿದೆ. ದಂಡದ ಹಣವನ್ನು ಇಬ್ಬರು ಬಾಲಕರಿಗೆ ನೀಡುವಂತೆಯೂ ತೀರ್ಪಿನಲ್ಲಿ ತಿಳಿಸಿದೆ. ಶಿಕ್ಷೆಯನ್ನು ಒಟ್ಟಿಗೆ ಅನುಭವಿಸಿದರೆ ಸಾಕೆಂದು ತೀರ್ಪಿನಲ್ಲಿ ತಿಳಿಸಿದೆ.
ಅಂಬಲತ್ತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 2016 ರಲ್ಲಿ ಹಲವು ದಿನಗಳಲ್ಲಿ 10 ಮತ್ತು 11 ವರ್ಷದ ಇಬ್ಬರು ಮದ್ರಸಾ ವಿದ್ಯಾರ್ಥಿಗಳಿಗೆ ಸಲಿಂಗರತಿ ಕಿರುಕುಳ ನೀಡಿರುವುದಾಗಿ ನೀಡಲಾದ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದರು. ಇದೇ ರೀತಿಯ ಇನ್ನೊಂದು ಪ್ರಕರಣವೊಂದರಲ್ಲಿ ಎರಡು ವರ್ಷಗಳ ಹಿಂದೆ ಈತನಿಗೆ ನ್ಯಾಯಾಲಯ 20 ವರ್ಷ ಸಜೆ ವಿಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.