Maharashtra 10 ದಿನ ಕಳೆದರೂ ಬಗೆಹರಿಯದ ಸಿಎಂ ಆಯ್ಕೆ ಕಗ್ಗಂಟು; ಅಜಿತ್ ಪವಾರ್ ದೆಹಲಿಗೆ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 230 ಸ್ಥಾನಗಳಲ್ಲಿ ಜಯಗಳಿಸಿತ್ತು.
Team Udayavani, Dec 2, 2024, 3:15 PM IST
ಮುಂಬೈ:ಮಹಾರಾಷ್ಟ್ರದ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಕಳೆದ ಹತ್ತು ದಿನಗಳಿಂದ ಮುಂದುವರಿದಿದ್ದು, ಏತನ್ಮಧ್ಯೆ ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂಧೆ ಅನಾರೋಗ್ಯದ ನೆಪವೊಡ್ಡಿ ಸೋಮವಾರ (ಡಿ.02) ಎಲ್ಲಾ ಸಭೆಗಳನ್ನು ರದ್ದು ಮಾಡಿದ್ದಾರೆ. ಮತ್ತೊಂದೆಡೆ ಸರ್ಕಾರ ರಚನೆ ಕಸರತ್ತಿಗಾಗಿ ಎನ್ ಸಿಪಿ ಮುಖಂಡ ಅಜಿತ್ ಪವಾರ್ ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಜತೆ ಚರ್ಚಿಸಲು ಮುಂದಾಗಿರುವುದಾಗಿ ವರದಿ ತಿಳಿಸಿದೆ.
ಏಕನಾಥ ಶಿಂಧೆ ಖಾತೆ ಹಂಚಿಕೆ ಅಂತಿಮಗೊಳಿಸುವ ನಿಟ್ಟಿನಲ್ಲಿ ಮಹಾಯುತಿ ಮುಖಂಡರ ಸಭೆಗೆ ಹಾಜರಾಗಬೇಕಿತ್ತು. ಆದರೆ ಗಂಟಲು ಬೇನೆ ಮತ್ತು ಜ್ವರದಿಂದ ಬಳಲುತ್ತಿರುವ ಶಿಂಧೆ ತಮ್ಮ ಹುಟ್ಟೂರಾದ ಸತಾರಾದಲ್ಲೇ ಇದ್ದು, ಮುಂಬೈಗೆ ಆಗಮಿಸಿಲ್ಲ. ಹೀಗಾಗಿ ಮಂಗಳವಾರ (ನ.03) ಸಭೆ ನಿಗದಿಪಡಿಸಲಾಗಿದೆ ಎಂದು ವರದಿ ವಿವರಿಸಿದೆ.
ಶಿವಸೇನಾ ಮೂಲದ ಪ್ರಕಾರ, ಮಹಾಯುತಿ ಮುಖಂಡರು ಇಂದು ಯಾವುದೇ ಸಭೆಯನ್ನು ನಿಗದಿಪಡಿಸಿಲ್ಲವಾಗಿತ್ತು ಎಂದು ತಿಳಿಸಿದೆ. ಮಹಾಯುತಿಯಲ್ಲಿ ಶಿಂಧೆ ಬಣದ ಶಿವಸೇನಾ, ಅಜಿತ್ ಪವಾರ ಬಣದ ಎನ್ ಸಿಪಿ ಹಾಗೂ ಬಿಜೆಪಿ ಸೇರಿದೆ.
ಮಹಾಯುತಿ ಮೈತ್ರಿ 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 230 ಸ್ಥಾನಗಳಲ್ಲಿ ಜಯಗಳಿಸಿತ್ತು. ಫಲಿತಾಂಶದಲ್ಲಿ ಬಿಜೆಪಿ 132 ಸ್ಥಾನ, ಶಿವಸೇನಾ 57 ಹಾಗೂ ಎನ್ ಸಿಪಿ 42 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಬಿಜೆಪಿ ಅತೀ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದ್ದರಿಂದ ದೇವೇಂದ್ರ ಫಡ್ನವೀಸ್ ಅವರೇ ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಸಂಭವ ಇದ್ದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.