Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!
ಶಾಸಕರ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
Team Udayavani, Oct 4, 2024, 5:18 PM IST
ಮುಂಬೈ: ಬುಡಕಟ್ಟು ಮೀಸಲಾತಿಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್, ಎನ್ ಸಿಪಿ ಪಕ್ಷದ ನರಹರಿ ಜೀರ್ವಾಲ್ ಸಚಿವಾಲಯದ 3ನೇ ಮಹಡಿಯಿಂದ ಹಾರಿದ ಘಟನೆ ಶುಕ್ರವಾರ (ಅ.04) ನಡೆದಿದೆ.
ಮಹಾರಾಷ್ಟ್ರ ಸಚಿವಾಲಯದಲ್ಲಿ ಧಂಗಾರ್ ಸಮುದಾಯಕ್ಕೆ ಪರಿಶಿಷ್ಟ ಪಂಗಡದಡಿ ಮೀಸಲಾತಿ ಕಲ್ಪಿಸಬೇಕೆಂದು ಡೆಪ್ಯುಟಿ ಸ್ಪೀಕರ್ ನರಹರಿ ಸೇರಿದಂತೆ ಹಲವು ಬುಡಕಟ್ಟು ಶಾಸಕರು ಆಗ್ರಹಿಸಿ ಕಟ್ಟಡದ 3ನೇ ಮಹಡಿಯಿಂದ ಹಾರಿದ್ದರು. ಆದರೆ ಅವರಿಗೆ ಯಾವುದೇ ಜೀವಹಾನಿ ಸಂಭವಿಸಿಲ್ಲ. ಅದಕ್ಕೆ ಕಾರಣ ಸುರಕ್ಷತೆಗಾಗಿ ಕಟ್ಟಿದ್ದ ನೆಟ್ ನೊಳಗೆ (ಬಲೆ) ಬಿದ್ದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಬಲೆ (ನೆಟ್) ಮೇಲೆ ಹಾರಿದ ಶಾಸಕರನ್ನು ಕಂಡ ಅಧಿಕಾರಿಗಳು ಅವರ ಬಳಿ ಬಂದು ನಿಧಾನಕ್ಕೆ ಕೆಳಗಿಳಿಸಿದ್ದರು. ಇದರೊಂದಿಗೆ ಶಾಸಕರ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#WATCH | NCP leader Ajit Pawar faction MLA and deputy speaker Narhari Jhirwal jumped from the third floor of Maharashtra’s Mantralaya and got stuck on the safety net. Police present at the spot. Details awaited pic.twitter.com/nYoN0E8F16
— ANI (@ANI) October 4, 2024
ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದ ಮಹಾರಾಷ್ಟ್ರ ಸರ್ಕಾರ ಇತ್ತೀಚೆಗೆ ಧಂಗಾರ್ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡಲು ಸಿದ್ಧತೆ ನಡೆಸಿತ್ತು. ಜೀರ್ವಾಲ್ ಹಿರಿಯ ಬುಡಕಟ್ಟು ಶಾಸಕರಾಗಿದ್ದು, ಅವರು ದಿಂಡೋರಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಎಸ್ ಟಿ ಸ್ಥಾನಮಾನದ ವಿಚಾರದಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಜೀರ್ವಾಲ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಪತ್ನಿ ಮುಂದೆ ʼಅಂಕಲ್ʼ ಎಂದು ಕರೆದಿದ್ದಕ್ಕೆ ಅಂಗಡಿಯಾತನನ್ನು ಥಳಿಸಿದ ವ್ಯಕ್ತಿ
Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…
Kerala: ಸರಣಿ ಅಪಘಾತ… ಅಪಾಯದಿಂದ ಪಾರಾದ ಕೇರಳ ಸಿಎಂ: ವಿಡಿಯೋ ವೈರಲ್
Challenge; ಪೆಟ್ರೋಲ್ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!
Video Viral; ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!: ಮಹಿಳೆಯೊಂದಿಗೆ ಅಸಭ್ಯ ವರ್ತನೆ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.