ಬ್ಯಾಂಕ್ ಮ್ಯಾನೇಜರ್ ಗೆ ಚೂರಿಯಿಂದ ಇರಿದು ಹತ್ಯೆಗೈದ ಮಾಜಿ ಬ್ಯಾಂಕ್ ಮ್ಯಾನೇಜರ್!
ಪರಾರಿಯಾದ ಆರೋಪಿ ಬಂಧನಕ್ಕಾಗಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
Team Udayavani, Jul 30, 2021, 3:52 PM IST
ಮಹಾರಾಷ್ಟ್ರ:ಖಾಸಗಿ ಬ್ಯಾಂಕ್ ನ ಮಹಿಳಾ ಅಧಿಕಾರಿಯನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ಪಾಲ್ಗಾಟ್ ಜಿಲ್ಲೆಯಲ್ಲಿ ನಡೆದಿದೆ. ಈ ಬ್ಯಾಂಕ್ ನ ಮಾಜಿ ಬ್ಯಾಂಕ್ ಮ್ಯಾನೇಜರ್ ಈ ಕೃತ್ಯ ಎಸಗಿದ್ದು, ಘಟನೆಯಲ್ಲಿ ಮತ್ತೊಬ್ಬ ಮಹಿಳಾ ಸಹೋದ್ಯೋಗಿ ಗಾಯಗೊಂಡಿರುವುದಾಗಿ ಪೊಲೀಸರು ಶುಕ್ರವಾರ(ಜುಲೈ 30) ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತಕ್ಕೆ ಮತ್ತೊಂದು ಪದಕದ ಭರವಸೆ: ಸೆಮಿ ಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ.ಸಿಂಧು
ಈ ಘಟನೆ ವಿರಾರ್ ನ ಐಸಿಐಸಿಐ ಬ್ಯಾಂಕ್ ಶಾಖೆಯಲ್ಲಿ ಗುರುವಾರ ಬೆಳಗ್ಗೆ ನಡೆದಿರುವುದಾಗಿ ವರದಿ ತಿಳಿಸಿದೆ. ಈ ಸಮಯಲ್ಲಿ ಇಬ್ಬರು ಮಾತ್ರ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇಬ್ಬರು ಆರೋಪಿಗಳಲ್ಲಿ ಅನಿಲ್ ದುಬೆ ಎಂಬಾತನ್ನು ಬಂಧಿಸಲಾಗಿದೆ. ದುಬೆ ಇದೇ ಐಸಿಐಸಿಐ ಬ್ಯಾಂಕ್ ಶಾಖೆಯ ಮಾಜಿ ಮ್ಯಾನೇಜರ್ ಎಂದು ವಿರಾರ್ ಪೊಲೀಸ್ ಇನ್ಸ್ ಪೆಕ್ಟರ್ ಸುರೇಶ್ ವಾರ್ಡೆ ತಿಳಿಸಿದ್ದಾರೆ.
ದುಬೆ ಹಾಗೂ ಮತ್ತೊಬ್ಬ ಆರೋಪಿ ಬ್ಯಾಂಕ್ ನೊಳಗೆ ಬಂದು ಅಸಿಸ್ಟೆಂಟ್ ಮ್ಯಾನೇಜರ್ ಯೋಗಿತಾ ವರ್ತಕ್ ಮತ್ತು ಕ್ಯಾಶಿಯರ್ ಶ್ರದ್ಧಾ ದೇವ್ರುಖಾರ್ ಗೆ ಚೂರಿ ತೋರಿಸಿ ಬೆದರಿಕೆ ಹಾಕಿದ್ದರು. ಅಲ್ಲದೇ ನಗದು ಮತ್ತು ಚಿನ್ನಾಭರಣ ಕೊಡುವಂತೆ ಒತ್ತಾಯಿಸಿದಾಗ, ಇಬ್ಬರು ಅಲಾರಾಂ ಒತ್ತಿ ದರೋಡೆ ತಡೆಯಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳು ಯೋಗಿತಾ ಮತ್ತು ಶ್ರದ್ಧಾಗೆ ಚೂರಿಯಿಂದ ಇರಿದು ಪರಾರಿಯಾಗಿದ್ದರು ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ವಿಷಯ ತಿಳಿದ ಪೊಲೀಸರು ಆರೋಪಿ ದುಬೆಯನ್ನು ಬೆನ್ನಟ್ಟಿ ಸೆರೆಹಿಡಿದಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿರುವುದಾಗಿ ಸುರೇಶ್ ವಾರ್ಡೆ ಮಾಹಿತಿ ನೀಡಿದ್ದಾರೆ. ಯೋಗಿತಾ ಅವರು ಬ್ಯಾಂಕ್ ನೊಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಶ್ರದ್ಧಾ ಗಂಭೀರವಾಗಿ ಗಾಯಗೊಂಡಿರುವುದನ್ನು ಸ್ಥಳೀಯರು ಗಮನಿಸಿ, ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಯೋಗಿತಾ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು.
ಶ್ರದ್ಧಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯೋಗಿತಾ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸುರೇಶ್ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ಪರಾರಿಯಾದ ಆರೋಪಿ ಬಂಧನಕ್ಕಾಗಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.