ಸೋಂಕಿನ ನಡುವೆ ಲಸಿಕೆ ಜಗಳ : ಮಹಾ ಸಚಿವರಿಗೆ ಕೇಂದ್ರ ತರಾಟೆ
Team Udayavani, Apr 8, 2021, 2:15 AM IST
ಮುಂಬಯಿ/ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಸೋಂಕಿನ ಸಮಸ್ಯೆಯ ನಡುವೆಯೇ ಕೇಂದ್ರ ಮತ್ತು ಕೆಲವು ರಾಜ್ಯಗಳ ನಡುವೆ “ಲಸಿಕೆ ಜಗಳ’ ಶುರುವಾಗಿದೆ. “ಲಸಿಕೆ ಕೊರತೆ ಯಾಗಿದೆ. ಹೆಚ್ಚುವರಿ ಡೋಸ್ ನೀಡಿ’ ಎಂದು ಮಹಾರಾಷ್ಟ್ರ, ಆಂಧ್ರಪ್ರದೇಶ ರಾಜ್ಯಗಳು ಮನವಿ ಮಾಡಿಕೊಂಡಿವೆ. ಎರಡು ರಾಜ್ಯಗಳ ಧೋರಣೆ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಹರ್ಷ ವರ್ಧನ್ ಕಟುವಾಗಿ ಆಕ್ಷೇಪ ಮಾಡಿದ್ದಾರೆ.
ಲಸಿಕೆ ನೀಡಿಕೆಯಲ್ಲಿ ಮತ್ತು ಕೊರೊನಾ ನಿಯಂತ್ರಣ ದಲ್ಲಿ ಕೆಲವು ರಾಜ್ಯಗಳು ನಿಗದಿತ ಗುರಿ ಸಾಧಿಸಿಲ್ಲ. ಈ ವೈಫಲ್ಯ ಮುಚ್ಚಿಕೊಳ್ಳಲು ಲಸಿಕೆಯ ಕೊರತೆ ಉಂಟಾಗಿದೆ ಎಂದು ಪುಕಾರು ಹುಟ್ಟಿಸಲಾಗುತ್ತಿದೆ. ಲಸಿಕೆ ಕೊರತೆ ಉಂಟಾಗಿದೆ ಎಂಬ ಅಂಶವೇ ಅಧಾರ ರಹಿತ ಎಂದು ಸಚಿವ ಹರ್ಷವರ್ಧನ್ ಬುಧವಾರ ತಿಳಿಸಿದ್ದಾರೆ.
“ಮಹಾರಾಷ್ಟ್ರದಲ್ಲಿ ಸರಿಯಾದ ರೀತಿಯಲ್ಲಿ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗುತ್ತಿಲ್ಲ. ಹೀಗಾಗಿಯೇ ಅಲ್ಲಿನ ಆರೋಗ್ಯ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ’ ಎಂದು ಕೇಂದ್ರ ಆರೋಗ್ಯ ಸಚಿವರು ಆರೋಪಿಸಿದ್ದಾರೆ. ಇಂಥ ಹೇಳಿಕೆ ಮೂಲಕ ರಾಜ್ಯವನ್ನು ಮತ್ತಷ್ಟು ಅಪಾಯದ ಸ್ಥಿತಿಯತ್ತ ಕೊಂಡೊಯ್ಯಲಾಗುತ್ತಿದೆ ಎಂದು ಟೀಕಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಆರೋಗ್ಯ ಕಾರ್ಯಕರ್ತರಿಗೇ ಪೂರ್ಣ ಪ್ರಮಾಣದಲ್ಲಿ ಲಸಿಕೆ ನೀಡಲಾಗಿಲ್ಲ ಎಂದಿದ್ದಾರೆ.
ಕರ್ನಾಟಕದಲ್ಲಿ ಸುಧಾರಣೆ ಬೇಕು: ಕರ್ನಾಟಕ, ರಾಜಸ್ಥಾನ ಮತ್ತು ಗುಜರಾತ್‌ಗಳಲ್ಲಿ ಕೊರೊನಾ ಪತ್ತೆ ಮಾಡುವ ಪರೀಕ್ಷೆಗಳ ಗುಣಮಟ್ಟ ಮತ್ತಷ್ಟು ಬಲಗೊಳ್ಳಬೇಕು. ಪಂಜಾಬ್‌ನಲ್ಲಿಯೂ ಕೂಡ ಸೋಂಕಿನಿಂದ ಸಾವಿನ ಪ್ರಮಾಣ ಸುಧಾರಣೆಯಾಗ ಬೇಕಾಗಿದೆ ಎಂದು ಹೇಳಿದ್ದಾರೆ ಹರ್ಷವರ್ಧನ್.
ಅಗತ್ಯ ಇರುವವರಿಗೆ ಮೊದಲು: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಹೇಳಿಕೆ ನೀಡಿದ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸಲಹೆಗೂ ಕೇಂದ್ರ ಸಚಿವರು ಆಕ್ಷೇಪಿಸಿದ್ದಾರೆ. ಅಗತ್ಯ ಇರುವ ಗುಂಪುಗಳಿಗೆ ಮೊದಲು ಲಸಿಕೆ ನೀಡುವುದೇ ಕೇಂದ್ರದ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ಸಾವಿನ ಪ್ರಮಾಣ ತಗ್ಗಿಸುವುದೇ ಲಸಿಕೆ ನೀಡಿಕೆ ಉದ್ದೇಶ ಎಂದಿದ್ದಾರೆ ಹರ್ಷವರ್ಧನ್.
ಮಹಾರಾಷ್ಟ್ರ ಸಚಿವರು ಹೇಳಿದ್ದೇನು?: ಮಹಾರಾಷ್ಟ್ರದಲ್ಲಿ 14 ಲಕ್ಷ ಡೋಸ್‌ಗಳು ಮಾತ್ರ ಉಳಿದಿವೆ. ಅವುಗಳನ್ನು ಇನ್ನು ಮೂರು ದಿನಗಳಿಗೆ ಮಾತ್ರ ಬಳಕೆ ಮಾಡಬಹುದು ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದರು. ಹೀಗಾಗಿ ರಾಜ್ಯದಲ್ಲಿನ ಲಸಿಕಾ ಕೇಂದ್ರಗಳನ್ನು ಮುಚ್ಚುವ ಅನಿವಾರ್ಯ ಸ್ಥಿತಿ ಉಂಟಾಗಿದೆ. ಕೇಂದ್ರಕ್ಕೆ ಲಸಿಕೆ ಗಾಗಿ ಬರುವ ಜನರನ್ನು ವಾಪಸ್ ಕಳುಹಿಸಬೇಕಾಗಿದೆ ಎಂದು ಹೇಳಿಕೆ ನೀಡಿದ್ದರು. ಬೃಹನ್ಮುಂಬಯಿ ಪಾಲಿಕೆ ಮೇಯರ್ ಕೂಡ ಲಸಿಕೆ ಕೊರತೆ ಬಗ್ಗೆ ಮಾತನಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurugram: 10 ನಿಮಿಷದಲ್ಲಿ ಮನೆಬಾಗಿಲಿಗೆ ಆ್ಯಂಬುಲೆನ್ಸ್: ಬ್ಲಿಂಕಿಟ್ ಹೊಸ ಸೇವೆ
RSS: 85 ವರ್ಷಗಳ ಹಿಂದೆ ಅಂಬೇಡ್ಕರ್ ನಮ್ಮ ಶಾಖೆಗೆ ಬಂದಿದ್ದರು
Kerala ಶಬರಿಮಲೆಗೆ ಕಾಡಿನ ದಾರಿಯಲ್ಲಿ ಬರುವವರಿಗಿದ್ದ ಪಾಸ್ ರದ್ದು: ಮಂಡಳಿ
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Priyank Kharge ರಾಜೀನಾಮೆ ಆಗ್ರಹಿಸಿ ನಾಳೆ ಬೃಹತ್ ಹೋರಾಟ: ಆರ್. ಅಶೋಕ್
Gurugram: 10 ನಿಮಿಷದಲ್ಲಿ ಮನೆಬಾಗಿಲಿಗೆ ಆ್ಯಂಬುಲೆನ್ಸ್: ಬ್ಲಿಂಕಿಟ್ ಹೊಸ ಸೇವೆ
6 ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ತನಿಖಾಸ್ತ್ರ ; 3 ತಿಂಗಳಲ್ಲಿ ವರದಿಗೆ ಸೂಚನೆ
Congress; ಇಂದಿನಿಂದ ಜೈ ಬಾಪು, ಜೈ ಭೀಮ ಅಭಿಯಾನ
Priyank Kharge ಬೆಂಬಲಕ್ಕೆ ಸಂಪುಟ ; ಬಿಜೆಪಿಗೆ ತಿರುಗೇಟು ನೀಡಲು ಸಿಎಂ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.