ಮಾ.1ರಿಂದ 10 ದಿನಗಳ ಕಾಲ ಮಹಾರಾಷ್ಟ್ರ ವಿಧಾನಸಭೆ ಬಜೆಟ್ ಅಧಿವೇಶನ
Team Udayavani, Feb 25, 2021, 7:43 PM IST
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನವು ಮಾರ್ಚ್ 1ರಿಂದ 10ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಬ್ ಗುರುವಾರ ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ, ಕೊರೊನಾ ವೈರಸ್ ಹೆಸರು ಹೇಳಿ ಸರ್ಕಾರವು ಬಜೆಟ್ ಅಧಿವೇಶನದ ಅವಧಿಯನ್ನು ಕಡಿತಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಅನಿಲ್ ಪರಬ್, “ಅಧಿವೇಶನ ಕಡಿತಗೊಳಿಸಲು ಪ್ರಯತ್ನಿಸಿರುವುದು ನಾವಲ್ಲ. ಅಧಿವೇಶನ ಒಂದೇ ದಿನ ನಡೆದರೆ ಸಾಕು ಎಂದು ಹೇಳಿರುವುದು ಪ್ರತಿಪಕ್ಷಗಳು’ ಎಂದು ತಿರುಗೇಟು ನೀಡಿದ್ದಾರೆ.
ಮಾ.1ರಂದು ರಾಜ್ಯಪಾಲರ ಭಾಷಣದ ಮೂಲಕ ಅಧಿವೇಶನ ಆರಂಭವಾಗಲಿದೆ. ಮಾ.8ರಂದು ಬಜೆಟ್ ಮಂಡಿಸಲಾಗುತ್ತದೆ. ಕೆಲವು ವಿಧೇಯಕಗಳನ್ನೂ ಮಂಡಿಸಲು ನಿರ್ಧರಿಸಲಾಗಿದೆ. ಪ್ರತಿಪಕ್ಷಗಳು ಒಂದೇ ದಿನ ಅಧಿವೇಶನ ನಡೆಸುವಂತೆ ಕೇಳಿಕೊಂಡವು. ಆದರೆ, ನಾವು 10 ದಿನ ನಡೆಸಲು ನಿರ್ಧರಿಸಿದ್ದೇವೆ ಎಂದೂ ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ:ಮುಂಬೈಯಲ್ಲಿ ಕೋವಿಡ್ ಭೀತಿ : ಫೆ.26 ರಿಂದ ಅನಿರ್ಧಿಷ್ಟ ಕಾಲ ಓವಲ್ ಮೈದಾನ ಬಂದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.