ಗಾಂಧಿ ಕುರಿತ ಸಾಕ್ಷ್ಯಚಿತ್ರ ಬಿಡುಗಡೆಗೆ ಮುಂದಾದ ನಿರ್ಮಾಪಕರು
Team Udayavani, Jun 10, 2020, 8:47 PM IST
ಜೋಹಾನ್ಸ್‌ಬರ್ಗ್: ಆಫ್ರಿಕನ್-ಅಮೆರಿಕನ್ ಪ್ರಜೆ ಜಾರ್ಜ್ ಫ್ಲಾಯ್ಡ ಅವರ ಸಾವಿನ ಹಿನ್ನೆಲೆಯಲ್ಲಿ ಉಂಟಾಗಿರುವ ವ್ಯಾಪಕ ಆಕ್ರೋಶದ ನಡುವೆ, ಮಹಾತ್ಮ ಗಾಂಧಿಯವರ ಕುರಿತಾದ ನೂತನ ಸಾಕ್ಷ್ಯಚಿತ್ರವನ್ನು ಅವಧಿಗೂ ಮೊದಲೇ ಬಿಡುಗಡೆ ಮಾಡಲು ಚಿತ್ರದ ನಿರ್ಮಾಪಕರು ಮುಂದಾಗಿದ್ದಾರೆ.
ಗಾಂಧಿಯವರು ಪ್ರತಿಪಾದಿಸಿದ ಅಹಿಂಸಾತತ್ವ, ಅವರ ಬೋಧನೆಗಳ ಪ್ರಸ್ತುತತೆಯನ್ನು ಈ ಸಂದರ್ಭದಲ್ಲಿ ಒತ್ತಿ ಹೇಳುವುದುಇದರ ಮೂಲ ಉದ್ದೇಶ.
ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಚಿತ್ರ ನಿರ್ಮಾಪಕ ಅನಂತ ಸಿಂಗ್ ಅವರ ಕಂಪನಿ ವಿಡಿಯೋವಿಷನ್,”ಅಹಿಂಸಾ ಗಾಂಧಿ; ದಿ ಪವರ್ ಆಫ್ ದಿ ಪವರ್‌ಲೆಸ್’ ಸಾಕ್ಷ್ಯಚಿತ್ರವನ್ನು ನಿರ್ಮಿಸುತ್ತಿದೆ. ರಮೇಶ್ ಶರ್ಮಾ ಅವರು ಇದಕ್ಕೆ ಚಿತ್ರಕಥೆ ಬರೆದಿದ್ದಾರೆ.
ಗಾಂಧಿಯವರ 150ನೇ ಜನ್ಮದಿನಾಚರಣೆಯ ನೆನಪಿಗಾಗಿ ಈ ಚಿತ್ರ ನಿರ್ಮಿಸಲಾಗುತ್ತಿದೆ. ಈ ಚಿತ್ರವನ್ನು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶಿಸಲು ಉದ್ದೇಶಿಸಲಾಗಿತ್ತು. ಆದರೆ, ಕೋವಿಡ್-19 ಹಿನ್ನೆಲೆಯಲ್ಲಿ ಚಿತ್ರೋತ್ಸವಗಳನ್ನು ಮುಂದೂಡಲಾಗುತ್ತಿದೆ. ಕೆಲವನ್ನು ರದ್ದುಗೊಳಿಸಲಾಗುತ್ತಿದೆ. ಹೀಗಾಗಿ, ದೂರದರ್ಶನ ಜಾಲಗಳಲ್ಲಿ ಈ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಮಾತುಕತೆಗಳು ನಡೆಯುತ್ತಿವೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.