ಕಾಬೂಲ್: ಮೃತ ದೇಹ ನೇತು ಹಾಕಿ ಕಾಪ್ಟರ್ ಹಾರಾಟ ನಡೆಸಿದ ತಾಲಿಬಾನ್ ಉಗ್ರರು?
ಆ ವ್ಯಕ್ತಿಯನ್ನು ಕೊಂದ ಬಳಿಕವೇ ಹಗ್ಗ ಕಟ್ಟಿ ಹಾರಾಟ ನಡೆಸಲಾಗಿದೆ ಎಂದು ಹೇಳಿದೆ.
Team Udayavani, Sep 1, 2021, 10:27 AM IST
ಕಾಬೂಲ್: ತಾಲಿಬಾನ್ ಉಗ್ರರು ಅಮೆರಿಕ ಯೋಧರು ಬಿಟ್ಟು ಹೋಗಿರುವ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್‌ಗೆ ಮೃತ ದೇಹವನ್ನು ನೇತು ಹಾಕಿಕೊಂಡು ಹಾರಾಟ ನಡೆಸಿದ್ದಾರೆ. ಈ ಬಗೆಗಿನ ವಿಡಿಯೋ ಬೆಳಕಿಗೆ ಬಂದಿದ್ದು, ವೈರಲ್ ಆಗಿದೆ. ಅಫ್ಘಾನಿಸ್ತಾನದ್ದು ಎಂದು ಹೇಳಲಾಗಿರುವ ಈ ವಿಡಿಯೋವನ್ನು ಪಾಶ್ಚಿಮಾತ್ಯ ರಾಷ್ಟ್ರಗಳ ಮಾಧ್ಯಮ ಸಂಸ್ಥೆಗಳು ಪ್ರಕಟಿಸಿವೆ.
ಇದನ್ನೂ ಓದಿ:ಪಂಜ್‌ಶೀರ್‌ನಲ್ಲಿ ಕದನ: 8 ಸಾವು; ತಾಲಿಬಾನಿಗಳ ಕೈಗೆ ಸಿಗದು ಯುದ್ಧ ವಿಮಾನ
ಕಂದಹಾರ್ ಪ್ರಾಂತ್ಯ ವ್ಯಾಪ್ತಿಯಲ್ಲಿಕಾಪ್ಟರ್ ಹಾರಾಟ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹಾರುತ್ತಿರುವ ಹೆಲಿಕಾಲಿಪ್ಟರ್ ಕೆಳಗೆ ವ್ಯಕ್ತಿಯೊಬ್ಬ ನೇತಾಡುತ್ತಿದ್ದು, ಈ ವ್ಯಕ್ತಿ ಸಾವನ್ನಪ್ಪಿದ್ದಾನೆಯೇ ಅಥವಾ ಇಲ್ಲವೇ ಎಂಬುದು ಖಚಿತವಾಗಿ ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.
ಈ ವಿಡಿಯೋವನ್ನು ಯಾವಾಗ ಚಿತ್ರೀಕರಿಸಲಾಗಿದೆ ಎಂಬ ಮಾಹಿತಿಯೂ ಸ್ಪಷ್ಟವಾಗಿಲ್ಲ. ಆದರೆ ವರದಿಗಳ ಪ್ರಕಾರ ತಾಲಿಬಾನ್ ಉಗ್ರರ ಅಟ್ಟಹಾಸ ಅಫ್ಘಾನಿಸ್ತಾನದಲ್ಲಿ ಮಿತಿ ಮೀರಿದ್ದು, ಆ ವ್ಯಕ್ತಿಯನ್ನು ಕೊಂದ ಬಳಿಕವೇ ಹಗ್ಗ ಕಟ್ಟಿ ಹಾರಾಟ ನಡೆಸಲಾಗಿದೆ ಎಂದು ಹೇಳಿದೆ.
If this is what it looks like… the Taliban hanging somebody from an American Blackhawk… I could vomit. Joe Biden is responsible.
— Liz Wheeler (@Liz_Wheeler) August 30, 2021
ತಾಲಿಬಾನ್ ಉಗ್ರರ ಜತೆ ಮಾಡಿಕೊಂಡಿದ್ದ ಒಪ್ಪಂದದಂತೆ ಆಗಸ್ಟ್ 31ರಂದು ಅಮೆರಿಕ ಸೇನೆ ಸಂಪೂರ್ಣವಾಗಿ ಅಫ್ಘಾನಿಸ್ತಾನದಿಂದ ನಿರ್ಗಮಿಸಿದೆ. ಅಮೆರಿಕ ಸೇನೆ ವಾಪಸ್ ಆದ ಬೆನ್ನಲ್ಲೇ ಉಗ್ರರು ಸಂಭ್ರಮ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.