12 ವರ್ಷಗಳಿಂದ ಮೃತ ತಾಯಿ ಹೆಸರಲ್ಲಿ ಸಾಲ ಪಡೆದ ಭೂಪ !

ಲೋಕಾಯುಕ್ತ ತನಿಖೆಯಿಂದ ಪ್ರಕರಣ ಬಯಲು, ದೂರು ದಾಖಲು

Team Udayavani, Oct 4, 2021, 6:52 PM IST

2000

ಲಕ್ಷ್ಮಮ್ಮ-ಮೊಗಣ್ಣೇಗೌಡ

ಹುಣಸೂರು: ಮರಣ ಹೊಂದಿದ ತಾಯಿಯ ಹೆಸರನ್ನು ದುರ್ಬಳಕೆ ಮಾಡಿಕೊಂಡ ಮಗನೇ ತನ್ನ ಪತ್ನಿಯ ಹೆಸರಿನಲ್ಲಿ ತಾಯಿಯ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಹಕಾರ ಸಂಘದಲ್ಲಿ ಕಳೆದ 12 ವರ್ಷಗಳಿಂದ ಸತತವಾಗಿ ಸಾಲ ಸೌಲಭ್ಯ ಪಡೆದುಕೊಂಡು ಇದೀಗ ಸಿಕ್ಕಿಬಿದ್ದಿರುವ ಘಟನೆ ತಾಲೂಕಿನ ರತ್ನಪುರಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ನಡೆದಿದೆ.

ತಾಲೂಕಿನ ಬಿಳಿಕೆರೆ ಹೋಬಳಿಯ ಉಯಿಗೊಂಡನಹಳ್ಳಿಯ ದೇಶೇಗೌಡ-ಲಕ್ಷ್ಮಮ್ಮ ದಂಪತಿಯ ಎರಡನೇ ಪುತ್ರ ಪಿ.ಡಿ.ಲಿಂಗರಾಜೇಗೌಡ ಹಾಗೂ ಪತ್ನಿ ಲಕ್ಷ್ಮಮ್ಮ ಆರೋಪಿಗಳಾಗಿದ್ದು, ದಂಪತಿ ವಂಚನೆ ವಿರುದ್ದ ಲೋಕಾಯುಕ್ತದ ನಿರ್ದೇಶನದಂತೆ ಸಹಕಾರ ಸಂಘದ ಸಿ.ಇ.ಓ.ರಮೇಶ್ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಗಿರುವುದೇನು?
ಆರೋಪಿ ಲಿಂಗರಾಜೇಗೌಡನ ತಾಯಿ ಹಾಗೂ ಪತ್ನಿಯ ಹೆಸರು ಲಕ್ಷ್ಮಮ್ಮ ಒಂದೇ ಆಗಿದ್ದು, ಈ ಹೆಸರನ್ನೇ ದುರ್ಬಳಕೆ ಮಾಡಿಕೊಂಡು ಸಾಲ ಪಡೆದುಕೊಂಡು ವಂಚಿಸಿದ್ದಾನೆ. ಉಯಿಗೊಂಡನಹಳ್ಳಿಯ ದೇಶೇಗೌಡ-ಲಕ್ಷ್ಮಮ್ಮ ದಂಪತಿಗೆ 5 ಗಂಡು, 3 ಹೆಣ್ಣು ಸೇರಿದಂತೆ 8ಮಕ್ಕಳಿದ್ದು, . ತಾಯಿ ಲಕ್ಷ್ಮಮ್ಮ 1986ರಲ್ಲಿ ಮೃತಪಟ್ಟಿದ್ದರು. ತಾಯಿ ಲಕ್ಷ್ಮಮ್ಮರ ಹೆಸರಿನಲ್ಲಿ ಉಯಿಗೊಂಡನಹಳ್ಳಿ ಗ್ರಾಮದ ಸರ್ವೇ ನಂಬರ್ 38/117ರಲ್ಲಿ 1.05 ಎಕರೆ ಭೂಮಿಯನ್ನು ಹೊಂದಿದ್ದರು. ಪಿ.ಡಿ.ಲಿಂಗರಾಜೇಗೌಡರ ಪತ್ನಿಯ ಹೆಸರೂ ಲಕ್ಷ್ಮಮ್ಮ ಆಗಿದ್ದು, 2006ರಲ್ಲಿ ಲಿಂಗರಾಜೇಗೌಡ ಪಕ್ಕದ ರತ್ನಪುರಿಯ ಪ್ರಾಥಮಿಕ ಪತ್ತಿನ ಸಹಕಾರ ಸಂಘದಲ್ಲಿ ಪತ್ನಿ ಲಕ್ಷ್ಮಮ್ಮರನ್ನು ತೋರಿಸಿ ತಾಯಿ ಲಕ್ಷ್ಮಮ್ಮನವರ ಹೆಸರಿನಲ್ಲಿ ಸದಸ್ಯತ್ವ ಪಡೆಯಲಾಗಿತ್ತು.

ಪತ್ನಿಯಿಂದ ಹೆಬ್ಬೆಟ್ಟು ಸಹಿ ಹಾಕಿಸಿ ದಾಖಲೆಗಳನ್ನು ಸೃಷ್ಟಿಸಿಕೊಂಡು, ಕುಟುಂಬಕ್ಕೆ ಸೇರಬೇಕಿದ್ದ ಜಮೀನನ್ನು ಅಡಮಾನವಿಟ್ಟು ಸತತ 12ವರ್ಷಗಳ ಕಾಲ ಸಾಲ ಸೌಲಭ್ಯ, ಹಾಗೂ 2007ರಲ್ಲಿ 10ಸಾವಿರ ಹಾಗೂ 2013ರಲ್ಲಿ 21ಸಾವಿರ ಹಾಗೂ 2018ರಲ್ಲಿ 49ಸಾವಿರ ರೂ.ಸಾಲ ಮನ್ನಾದ ಸೌಲಭ್ಯವನ್ನು ಪಡೆದುಕೊಳ್ಳಲಾಗಿದೆ. ಈ ನಡುವೆ ಅಣ್ಣತಮ್ಮಂದಿರು ತಮ್ಮ ಜೀವನೋಪಾಯಕ್ಕಾಗಿ ಬೇರೆ ಊರಿಗೆ ತೆರಳಿದ್ದರೂ, ಊರಿನಲ್ಲಿ ತಮ್ಮ ಮೊಗಣ್ಣೇಗೌಡ ಮಾತ್ರ ಇದ್ದರು.

ತಮ್ಮನಿಂದಲೇ ಅಕ್ರಮ ಬಯಲು
ಅಣ್ಣನಿಗೆ ಸಾಲಸೌಲಭ್ಯ ಸಿಗುತ್ತಿರುವುದನ್ನು ಕಂಡು ಅನುಮಾನ ಬಂದ ಸಹೋದರ ಮೊಗಣ್ಣೇಗೌಡರು ಸಹಕಾರ ಸಂಘದಲ್ಲಿ ವಿಚಾರಿಸಿದಾಗ ಅಣ್ಣನೇ ಮೋಸ ಮಾಡಿರುವ ಬಗ್ಗೆ ತಿಳಿದು ದೂರು ಸಲ್ಲಿಸುತ್ತಾರೆ.

ಸತ್ಯ ನುಡಿದ ಆಧಾರ್ ಕಾರ್ಡ್
ಈ ಸಂಬಂಧ 2020ರಲ್ಲಿ ಮೊಗಣ್ಣೇಗೌಡ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ತಮ್ಮ ಮೃತ ತಾಯಿಯ ಹೆಸರಿನಲ್ಲಿ ಸಹೋದರನೇ ಸಾಲ ಪಡೆದು ವಂಚಿಸಿದ್ದು, ನ್ಯಾಯ ಕಲ್ಪಿಸಬೇಕೆಂದು ದೂರು ಸಲ್ಲಿಸಿದ್ದರು. ನಿಬಂಧಕ ಅಧಿಕಾರಿಗಳು ತನಿಖೆ ನಡೆಸಿದ ವೇಳೆ ಆಧಾರ್‌ಕಾರ್ಡ್ ಪರಿಶೀಲಿಸಿದಾಗ ಆಧಾರಕಾರ್ಡ್ ಮತ್ತು ಪಡಿತರ ಚೀಟಿಯಲ್ಲಿ ಲಕ್ಷ್ಮಮ್ಮ ಕೋಂ ಲಿಂಗರಾಜೇಗೌಡ ಎಂದು ನಮೂದಾಗಿರುವುದು ಬೆಳಕಿಗೆ ಬಂದಿತು. ಸಾಲ ನೀಡುವಾಗ ಸಂಘದ ಸಿಇಓ ದಾಖಲಾತಿಗಳನ್ನು ನಿಖರವಾಗಿ ಪರಿಶೀಲಿಸದೆ ಸಾಲ ಮಂಜೂರು ಮಾಡಿರುವುದು ಕಂಡು ಬಂದಿದೆ. ಸದರಿ ಪ್ರಕರಣದಲ್ಲಿ ಸರಕಾರದ ಸಾಲಮನ್ನಾ,ಬಡ್ಡಿಮನ್ನಾ ಕ್ಲೇಯ್ಮ್ ಗಳನ್ನು ಬಡ್ಡಿಸಮೇತ ವೈಯಕ್ತಿಕವಾಗಿ ವಸೂಲು ಮಾಡಿ ¸ಸರಕಾರಕ್ಕೆ ಮರುಪಾವತಿಸಲು ಸಂಘದ ಅಧ್ಯಕ್ಷರಿಗೆ ತಿಳಿಸಿದೆ. ಇದಲ್ಲದೇ ಸಂಘಕ್ಕೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೋಸ ಮಾಡಿರುವ ಲಕ್ಷ್ಮಮ್ಮ-ಲಿಂಗರಾಜೇಗೌಡ ದಂಪತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸೂಚಿಸಿದ್ದರೂ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಹಿಂಜರಿದಾಗ ಲೋಕಾಯುಕ್ತಕ್ಕೆ ಮೊರೆ ಹೋಗಿ ದೂರು ದಾಖಲಿಸಿಕೊಳ್ಳುವಂತೆ ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್‌ಗೆ ಸೂಚಿಸಿ, ಇದೀಗ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸರಕಾರದ ಹಣ ವಾಪಸ್ ಪಡೆಯಲಾಗುವುದು
ಸಹಕಾರ ಸಂಘಗಳಲ್ಲಿ ಅಧಿಕಾರಿಗಳು ಬೇಜವಾಬ್ದಾರಿ ವರ್ತನೆ ತೊರೆಯಬೇಕಿದೆ. ಸದರಿ ಪ್ರಕರಣದಲ್ಲಿ ಸರ್ಕಾರಕ್ಕೆ ಸಲ್ಲಬೇಕಿರುವ ಹಣವನ್ನು ಸಂಪೂರ್ಣವಾಗಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯು ವೈಯಕ್ತಿಕವಾಗಿ ವಸೂಲು ಮಾಡಿ ಕಟ್ಟಲು ಆದೇಶಿಸಲಾಗಿದೆ. ಸಂಘಕ್ಕೆ ಮೋಸ ಮಾಡಿರುವ ದಂಪತಿಯ ವಿರುದ್ಧ ಕಾನೂನುಕ್ರಮ ಜರುಗಿಸಲಾಗುವುದೆಂದು ಹುಣಸೂರು ಉಪ ಸಹಾಯಕ ನಿಬಂಧಕ ಭರತ್ ಕುಮಾರ್ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.