ವರುಣನ ಆರ್ಭಟ: ಮಂಗಳೂರು ವಿ.ವಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಿಕೆ !
Team Udayavani, Sep 20, 2020, 2:49 PM IST
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದರಿಂದ 21-9-2020 ರಂದು ನಿಗದಿಯಾಗಿದ್ದ ಎಲ್ಲಾ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸೆ. 21 ರ ಸೋಮವಾರ ನಿಗದಿಯಾಗಿದ್ದ ಪರೀಕ್ಷೆಗಳು ಮಾತ್ರ ಮುಂದೂಡಿಕೆಯಾಗಿದ್ದು, ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲಿ ನಿಗದಿಪಡಿಸಲಾಗುವುದು. ಉಳಿದಂತೆ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿಶ್ವವಿದ್ಯಾನಿಲಯ ತಿಳಿಸಿದೆ.
ಉಡುಪಿ, ಮಂಗಳೂರು, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಕಳೆದೆರೆಡು ದಿನಗಳಿಂದ ವಿಪರೀತ ಮಳೆಯಾಗುತ್ತಿದೆ, ಹಲವೆಡೆ ಗುಡ್ಡಕುಸಿತ, ರಸ್ತೆ ಬಿರುಕು ಮುಂತಾದ ಘಟನೆಗಳು ಸಂಭವಿಸುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಸೋಮವಾರ ನಿಗದಿಯಾಗಿದ್ದ ಪರೀಕ್ಷೆಗಳು ಮಾತ್ರ ಮುಂದೂಡಿಕೆಯಾಗಿದ್ದು, ಉಳಿದ ಪರೀಕ್ಷೆಗಳ ದಿನಾಂಕದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಪರಿಸ್ಥಿತಿ ಅವಲೋಕಿಸಿದ ನಂತರ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಮಂಗಳೂರು ವಿಶ್ವವಿದ್ಯಾನಿಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.