ಮಂಗಳೂರು ವಿಮಾನ ನಿಲ್ದಾಣ; ಕಸ್ಟಮ್ಸ್ ಅಧಿಕಾರಿಗಳಿಂದ 1 ಕೆಜಿ 625 ಗ್ರಾಂ ಚಿನ್ನ ವಶ
ಗುದನಾಳದಲ್ಲಿ ಅಡಗಿಸಿಟ್ಟು ಸಾಗಾಟ ; 6 ಲಕ್ಷ ರೂ. ಮೌಲ್ಯದ ವಿದೇಶಿ ನೋಟುಗಳೂ ವಶಕ್ಕೆ
Team Udayavani, Feb 20, 2023, 2:02 PM IST
ಮಂಗಳೂರು : ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಫೆಬ್ರವರಿಯಲ್ಲಿ ಭಾರಿ ಚಿನ್ನ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದ್ದು,1 ಕೆಜಿ 625 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.
ಫೆ.01ರಿಂದ 15ರ ವರೆಗೆ ನಡೆಸಿದ ಕಾರ್ಯಾಚರಣೆಗಳಲ್ಲಿ ಅಧಿಕಾರಿಗಳು ದುಬೈ ಮತ್ತು ಬಹ್ರೇನ್ ನಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಈ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ವಶಪಡಿಸಿಕೊಳ್ಳಲಾದ ಚಿನ್ನದ ಮಾರುಕಟ್ಟೆ ಮೌಲ್ಯ 91ಲಕ್ಷದ 35 ಸಾವಿರದ 850 ರೂ.ಆಗಿದೆ. ಚಿನ್ನ ಮಾತ್ರವಲ್ಲದೆ ಭಾರತೀಯ ರೂಪಾಯಿ 6ಲಕ್ಷದ 54 ಸಾವಿರದ 750ರೂ. ಮೌಲ್ಯದ ವಿದೇಶಿ ನೋಟುಗಳನ್ನು ಓರ್ವ ಪ್ರಯಾಣಿಕನಿಂದ ವಶಕ್ಕೆ ಪಡೆಯಲಾಗಿದೆ.
ಚಿನ್ನವನ್ನು ಪೇಸ್ಟ್ ರೂಪದಲ್ಲಿ ಘನ ಗಮ್‌ನೊಂದಿಗೆ ಬೆರೆಸಿ ಅಂಡಾಕಾರದ ಪ್ಯಾಕೆಟ್‌ಗಳಾಗಿ ಮಾಡಿ ಗುದನಾಳದಲ್ಲಿ ಮರೆಮಾಚಿ, ಟ್ರಾಲಿ ಬ್ಯಾಗ್ ನ ಹ್ಯಾಂಡಲ್ ನಲ್ಲಿ ಮರೆಮಾಚಿದ್ದು, ರಟ್ಟಿನ ಪೆಟ್ಟಿಗೆಯಲ್ಲಿ ಪೇಸ್ಟ್ ರೂಪದಲ್ಲಿ ಮರೆಮಾಚಿದ್ದು ಸೇರಿ ವಿವಿಧ ರೂಪದಲ್ಲಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
Hampi: ಹಂಪಿ ಉತ್ಸವಕ್ಕೆ ಮಹೂರ್ತ ಫಿಕ್ಸ್! ಫೆ.28 ರಿಂದ 3 ದಿನ ಉತ್ಸವ ಆಚರಣೆ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Kasturiranganವರದಿ: ಕೇರಳ ಹೊರತು ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿವರದಿ ನೀಡಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mulki ರೈಲು ನಿಲ್ದಾಣಕ್ಕೆ ನಗರ ಪಂಚಾಯತ್ ಮೂಲ ಸೌಕರ್ಯ
ಪತಿ-ಪತ್ನಿ ಜಗಳದಲ್ಲಿ ಬಾವಿಗೆ ಹಾರಿದ ಪತಿ… ರಕ್ಷಣೆಗೆ ಹೋದ ನಾಲ್ವರು ಸೇರಿ 5 ಮಂದಿ ದುರ್ಮರಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.