Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ರಾಜಕೀಯಕ್ಕೆ ಎಳೆದು ತರಬೇಕಿತ್ತಾ?; ಸ್ವಾಭಿಮಾನಿ ಸಮಾವೇಶದಲ್ಲಿ ಸಿಎಂ ಪ್ರಶ್ನೆ
Team Udayavani, Oct 5, 2024, 7:36 PM IST
ರಾಯಚೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿ ವಿಪಕ್ಷದ ಬಿಜೆಪಿ-ಜೆಡಿಎಸ್ ನಾಯಕರು ಸುಖಾ ಸುಮ್ಮನೆ ನನ್ನ ಮೇಲೆ ಆರೋಪ ಮಾಡುವುದು ಮಾತ್ರವಲ್ಲದೇ ಈ ಪ್ರಕರಣದಲ್ಲಿ ನನ್ನ ಪತ್ನಿ ಹೆಸರು ಎಳೆದು ತರುತ್ತಿದ್ದಾರೆ. ಆದರೆ ನನ್ನ ಪತ್ನಿ ಯಾವತ್ತೂ ಮನೆಯಿಂದ ಆಚೆ ಬಂದು ರಾಜಕಾರಣದ ಕಡೆ ಮುಖವೂ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಬಿಜೆಪಿಯವರು ದ್ವೇಷ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸುತ್ತೀರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಜನರಲ್ಲಿ ಪ್ರಶ್ನಿಸಿದರು.
ಎರಡನೇ ಬಾರಿ ಸಿಎಂ ಆಗಿದ್ದಕ್ಕೆ ಬಿಜೆಪಿಗೆ ಹೊಟ್ಟೆಕಿಚ್ಚು
ಜಿಲ್ಲೆಯ ಮಾನ್ವಿಯಲ್ಲಿ ಶನಿವಾರ ₹458.42. ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಶೋಷಿತ, ದಮನಿತ, ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಶ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿ ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳು, ಹತ್ತಾರು ಭಾಗ್ಯಗಳ ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ರಾಜಕೀಯಕ್ಕೆ ಎಳೆದು ತರಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು? ಎಂದು ಪ್ರಶ್ನಿಸಿದರು.
ಬಿಜೆಪಿ-ಜೆಡಿಎಸ್ ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ಧರಾಗಿ. ಕಾರಣವೇ ಇಲ್ಲದೇ ರಾಜೀನಾಮೆ ಕೊಡಿ, ರಾಜೀನಾಮೆ ಕೊಡಿ ಎನ್ನುತ್ತಿದ್ದಾರೆ. ನನಗೂ ಬೇಸರ ಆಗಿದೆ, ಸಾಕಾಗಿದೆ. ಆದರೆ, ನಿಮಗಾಗಿ ನಾನು ಹೋರಾಟ ಮುಂದುವರಿಸಿದ್ದೇನೆ. ನಾನು ಅವರ ಬೆದರಿಕೆಗಳಿಗೆ ಜಗ್ಗೋನೂ ಅಲ್ಲ, ಬಗ್ಗೋನೂ ಅಲ್ಲ. ಇಲ್ಲಿಯೇ ಇದ್ದು ಹೋರಾಟ ಮುಂದುವರಿಸುತ್ತೇನೆ ಎಂದು ಹೇಳಿದರು.
ಅಭಿವೃದ್ಧಿ ವಿಚಾರದಲ್ಲಿ ನಾವೇ ಮುಂದು:
ಇನ್ನು ರಾಜ್ಯದ ಅಭಿವೃದ್ಧಿ ವಿಷಯಕ್ಕೆ ಬಂದರೆ ನಾವೇ ಹೆಚ್ಚು ಕೆಲಸಗಳ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಪರವಾಗಿದೆ. ವಿರೋಧ ಪಕ್ಷಗಳು ಸುಮ್ಮನೇ ಆರೋಪ ಮಾಡುತ್ತಾರೆ. ಸರ್ಕಾರದ ಬಳಿ ದುಡ್ಡು ಇಲ್ಲ ಅಂದರೆ ನಮಗೆ 1,695 ಕೋಟಿ ರೂ.ಹಾಕಿ ರಸ್ತೆ ನಿರ್ಮಿಸಲಾಗುತ್ತಿತ್ತಾ ? ಇದನ್ನೆಲ್ಲ ಸಹಿಸಿಕೊಳ್ಳಲು ಆಗದೇ ನನ್ನ ಮೇಲೆ ಹಾಗೂ ನಮ್ಮ ಸರಕಾರದ ಮೇಲೆ ಸುಳ್ಳು ಆರೋಪಿಸಲು ಶುರು ಮಾಡಿದ್ದಾರೆ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.
ಈ ಸ್ವಾಭಿಮಾನ ಸಮಾವೇಶಕ್ಕೆ ರವಿ ಬೋಸರಾಜು ಮತ್ತು ಅವರ ತಂಡ ಬಹಳ ಶ್ರಮಪಟ್ಟಿದೆ. ಬೋಸರಾಜು ಮತ್ತು ಇತರೆ ಶಾಸಕರಿಗೆ ನನ್ನ ಧನ್ಯವಾದಗಳು. ರಾಜ್ಯದಲ್ಲಿ ದೇವರಾಜ್ ಅರಸು ಬಿಟ್ಟರೇ ನಾನು ಮಾತ್ರ ಐದು ವರ್ಷ ಪೂರ್ಣಗೊಳಿಸಿದ್ದೇನೆ. ಅಷ್ಟೇ ಅಲ್ಲ ರಾಜ್ಯವು ಮುಕ್ತ ರಾಜ್ಯ ಆಗಬೇಕು ಅಂತ ಅನ್ನಭಾಗ್ಯ ಯೋಜನೆ ಮಾಡಿದೆ. ಬಡವರಿಗೆ ಅನುಕೂಲವಾಗಲು ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಸಮಾಜದ ಎಲ್ಲಾ ಜಾತಿ, ಧರ್ಮಗಳ ಬಡವರ ಪರವಾಗಿ ನಾನು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇನೆ. ಹಿಂದುಳಿದ ವರ್ಗಕ್ಕೆ ಸೇರಿದ ನಾನು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದನ್ನು ಬಿಜೆಪಿ – ಜೆಡಿಎಸ್ ನವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ.
– ಮುಖ್ಯಮಂತ್ರಿ @siddaramaiah #ಸ್ವಾಭಿಮಾನಿಸಮಾವೇಶ pic.twitter.com/0xOrcHyAG5— CM of Karnataka (@CMofKarnataka) October 5, 2024
ಎಚ್.ಡಿ.ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ
ಕೊಟ್ಟ ಕುದುರೆ ಏರಲಾರದ ಎಚ್.ಡಿ. ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ಜನರಿಗೆ ಸಹಾಯ, ಅಭಿವೃದ್ಧಿ ಮಾಡುವ ಅವಕಾಶವೂ ಇತ್ತು. ಅಧಿಕಾರ, ಅವಕಾಶ ಇದ್ದಾಗ ಜನಪರ ಕೆಲಸ ಮಾಡದ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಈಗ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸುಳ್ಳು ಮತ್ತು ಅಪಪ್ರಚಾರ ಮಾಡುತ್ತಿದ್ದಾರೆ.
ರಾಜ್ಯದ ಬೊಕ್ಕಸ ಖಾಲಿ, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದಾಗಲೂ ಜನರ ಕೆಲಸ ಮಾಡಲಿಲ್ಲ. ಬಿಜೆಪಿ ಸ್ವಂತ ಶಕ್ತಿ ಮೇಲೆ ಇವತ್ತಿನವರೆಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಏನಿದ್ದರೂ ಆಪರೇಷನ್ ಕಮಲದ ಮೂಲಕ ಮಾತ್ರ ಬಿಜೆಪಿ ಅಧಿಕಾರ ಹಿಡಿದಿದೆ. ಹೀಗಾಗಿ ಅವರಿಗೆ ಜನರ ಅಭಿವೃದ್ಧಿ ಬೇಕಾಗಿಲ್ಲ. ಬೈಪಾಸ್ ಹಾದಿಯಲ್ಲೇ ಅಧಿಕಾರ ಹಿಡಿಯಲು ಕಾದು ಕುಳಿತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.