ಚನ್ನಣ್ಣನವರ್, ಸೆಂಟ್ರಲ್ ಜೈಲ್ ಎಸ್ ಪಿ ಸೇರಿ ಹಲವು ಐಪಿಎಸ್ ಗಳ ವರ್ಗಾವಣೆ
Team Udayavani, Jan 27, 2022, 6:01 PM IST
ಬೆಂಗಳೂರು: ಸಿಐಡಿ ಎಸ್ ಪಿ ರವಿ ಡಿ ಚನ್ನಣ್ಣನವರ್ , ಬೆಂಗಳೂರು ಸೆಂಟ್ರಲ್ ಜೈಲ್ ಎಸ್ ಪಿ ಟಿ.ಪಿ.ಶಿವಕುಮಾರ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ಗುರುವಾರ ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಪ್ರಮುಖವಾಗಿ ಖಡಕ್ ಅಧಿಕಾರಿ ಎನಿಸಿಕೊಂಡು ಮತ್ತು ವಾಗ್ಮಿಯಾಗಿ ಹೆಸರು ಗಳಿಸಿದ್ದ ಚನ್ನಣ್ಣನವರ್ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿದ್ದವು.
ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದರು.ಈಗ ಎಸ್ ಪಿ ಅವರನ್ನು ವರ್ಗಾವಣೆ ಮಾಡಿ ಸರಕಾರ ಬಿಸಿ ಮುಟ್ಟಿಸಿದೆ.
ಚನ್ನಣ್ಣನವರ್ ಅವರನ್ನು ಮುಂದಿನ ಆದೇಶದ ವರೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿಯನ್ನಾಗಿ ನೇಮಕ ಮಾಡಲಾಗಿದೆ.
ಟಿ.ಪಿ.ಶಿವಕುಮಾರ್ ಅವರನ್ನು ಚಾಮರಾಜನಗರ ಎಸ್ ಪಿ ಆಗಿ ನೇಮಕ ಮಾಡಲಾಗಿದೆ. ಚಾಮರಾಜನಗರ ಎಸ್ ಪಿ ಯಾಗಿದ್ದ ದಿವ್ಯಸಾರ ಥಾಮಸ್ ಅವರನ್ನು ಪೊಲೀಸ್ ಅಕಾಡೆಮಿ ಉಪ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ಸಿಐಡಿ ಯಲ್ಲಿದ್ದ ಡಾ. ಭೀಮಾಶಂಕರ ಗುಳೇದ್ ಅವರನ್ನು ಬೆಂಗಳೂರು ಪೂರ್ವ ಡಿಸಿಪಿ ಯಾಗಿ ವರ್ಗಾವಣೆ ಮಾಡಲಾಗಿದೆ.
ಡೆಕ್ಕಾ ಕಿಶೋರ್ ಬಾಬು ಅವರನ್ನು ಬೀದರ್ ಎಸ್ಪಿ ಆಗಿ ನೇಮಿಸಿದ್ದು, ಬೀದರ್ ಎಸ್ಪಿ ಆಗಿದ್ದ ಡಿ.ಎಲ್. ನಾಗೇಶ್ ಅವರನ್ನು ಸಿಐಡಿ ಎಸ್‌ಪಿಯಾಗಿ ವರ್ಗಾಯಿಸಲಾಗಿದೆ.
ಮೈಸೂರು ಎಸಿಬಿ ಯಲ್ಲಿದ್ದ ಅರುಣಾಂಗ್ಶು ಗಿರಿ ಅವರನ್ನು ಕೊಪ್ಪಳ ಎಸ್ ಪಿ ಯಾಗಿ, ಎಸಿಬಿಯಲ್ಲಿದ್ದ ಅಬ್ದುಲ್ ಅಹಾದ್ ರನ್ನು ಕೆ ಎಸ್‌ಆರ್‌ಟಿಸಿ ನಿರ್ದೇಶಕರನ್ನಾಗಿ, ಕೊಪ್ಪಳ ಎಸ್ ಪಿ ಯಾಗಿದ್ದ ಟಿ. ಶ್ರೀಧರ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್‌ಪಿಯಾಗಿ ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.