Work From Homeಗೆ ಕತ್ತರಿ: ಟಿಸಿಎಸ್ ನಲ್ಲಿ ಮಹಿಳಾ ಉದ್ಯೋಗಿಗಳ ಸಾಮೂಹಿಕ ರಾಜೀನಾಮೆ!
2023ರ ಆರ್ಥಿಕ ವರ್ಷದಲ್ಲಿ ಕಂಪನಿಯಲ್ಲಿ ಶೇ.38ರಷ್ಟು ಮಹಿಳಾ ಉದ್ಯೋಗಿಗಳಿದ್ದಾರೆ
Team Udayavani, Jun 13, 2023, 12:58 PM IST
ನವದೆಹಲಿ: ಭಾರತದ ಅತೀ ದೊಡ್ಡ ಐಟಿ ಕಂಪನಿಗಳಲ್ಲಿ ಒಂದಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಕಂಪನಿ ಅನಿರೀಕ್ಷಿತ ಬೆಳವಣಿಗೆಗೆ ಸಾಕ್ಷಿಯಾಗಿದೆ. ಜಗತ್ತಿನಾದ್ಯಂತ ಕೋವಿಡ್ 19 ಸೋಂಕು ತಲೆದೋರಿದ ಮೂರು ವರ್ಷಗಳ ಬಳಿಕ ಟಿಸಿಎಸ್ ವರ್ಕ್ ಫ್ರಂ ಹೋಮ್ ಅನ್ನು ರದ್ದುಗೊಳಿಸಿದ್ದು, ಇದರ ಪರಿಣಾಮ ಮಹಿಳಾ ಉದ್ಯೋಗಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿರುವ ಘಟನೆ ಹೆಚ್ಚಳವಾಗಿದೆ.
ಇದನ್ನೂ ಓದಿ:Dalal Street: ಬಾಂಬೆ ಷೇರುಪೇಟೆ- ಎಂಆರ್ ಎಫ್ ಭಾರತದ ಅತೀ ದುಬಾರಿ ಷೇರು…
ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಯಾವುದೇ ಲಿಂಗತಾರತಮ್ಯವಿಲ್ಲದೇ ಕಂಪನಿಯಲ್ಲಿ ಮಹಿಳೆಯರಿಗೆ ಹಲವಾರು ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಏತನ್ಮಧ್ಯೆ ವರ್ಕ್ ಫ್ರಂ ಹೋಮ್ (WFH) ನಿಯಮವನ್ನು ರದ್ದುಗೊಳಿಸಿದ್ದರಿಂದ ಮಹಿಳಾ ಉದ್ಯೋಗಿಗಳು ಹೆಚ್ಚಿನ ಪ್ರಮಾಣದಲ್ಲಿ ರಾಜೀನಾಮೆ ಕೊಡಲು ಕಾರಣವಾಗಿದೆ ಎಂದು ಕಂಪನಿ ತಿಳಿಸಿದೆ.
ಟಿಸಿಎಸ್ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಮಿಲಿಂದ್ ಲಕ್ಕಡ್ ಅವರ ಮಾಹಿತಿ ಪ್ರಕಾರ, ವರ್ಕ್ ಫ್ರಂ ಹೋಮ್ ಅವಕಾಶವನ್ನು ನಿಲ್ಲಿಸಿದ ನಂತರ ಮಹಿಳಾ ಉದ್ಯೋಗಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸಾಮಾನ್ಯವಾಗಿ ಟಿಸಿಎಸ್ ನಲ್ಲಿ ರಾಜೀನಾಮೆ ವಿಚಾರದಲ್ಲಿ ಮಹಿಳೆಯರಿಗಿಂತ ಪುರುಷರ ಸಂಖ್ಯೆ ಹೆಚ್ಚು, ಆದರೆ ಇದೀಗ ಪುರುಷರನ್ನು ಮೀರಿ ಮಹಿಳೆಯರೇ ಅತ್ಯಧಿಕ ಸಂಖ್ಯೆಯಲ್ಲಿ ಕಂಪನಿಗೆ ರಾಜೀನಾಮೆ ನೀಡಿರುವುದಾಗಿ ಮಿಲಿಂದ್ ವಿವರಿಸಿದ್ದಾರೆ.
ಟಿಸಿಎಸ್ ನಲ್ಲಿ 6,00,000 ಲಕ್ಷಕ್ಕೂ ಅಧಿಕ ಜನರು ಉದ್ಯೋಗಿಗಳಿದ್ದಾರೆ. ಇದರಲ್ಲಿ ಶೇ.35ರಷ್ಟು ಮಹಿಳೆಯರು. 2023ರ ಆರ್ಥಿಕ ವರ್ಷದಲ್ಲಿ ಕಂಪನಿಯಲ್ಲಿ ಶೇ.38ರಷ್ಟು ಮಹಿಳಾ ಉದ್ಯೋಗಿಗಳಿದ್ದಾರೆ. ಇದರಲ್ಲಿ ಶೇ.3ರಷ್ಟು ಉನ್ನತ ಹುದ್ದೆಯಲ್ಲಿದ್ದಾರೆ. ಕಳೆದ ವರ್ಷ ಟಿಸಿಎಸ್ ಶೇ.20ರಷ್ಟು ಮಹಿಳಾ ಉದ್ಯೋಗಿಗಳನ್ನು ಕಳೆದುಕೊಂಡಿದೆ ಎಂದು ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.