ಗುಜರಾತ್ ನ ಒಎನ್ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ
Team Udayavani, Sep 24, 2020, 11:16 AM IST
ಸೂರತ್ : ದೇಶದ ಪ್ರಮುಖ ಬಂದರುಗಳಲ್ಲಿ ಒಂದಾದ ಸೂರತ್’ನ ಹಾಜಿರಾದಲ್ಲಿನ ತೈಲ ಮತ್ತು ನೈಸರ್ಗಿಕ ಅನಿಲ ಘಟಕದಲ್ಲಿ ಗುರುವಾರ ನಸುಕಿನ ವೇಳೆ ಭಾರಿ ಸ್ಫೋಟ ಸಂಭವಿಸಿದ್ದು ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಚಿಮ್ಮಿದೆ ಇದನ್ನು ಕಂಡ ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ.
ದಕ್ಷಿಣ ಗುಜರಾತಿನ ಸೂರತ್‍ನ ಹಜೀರಾ ಬಂದರಿನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ಸರಣಿ ಸ್ಫೋಟ ಸಂಭವಿಸಿದ್ದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಘಟನೆಯ ಕುರಿತು ಯಾವುದೇ ರೀತಿಯ ಸಾವು ನೋವು ಸಂಭವಿಸಿಲ್ಲ ಎಂದು ಕಂಪೆನಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಸ್ಪೋಟದ ತೀವ್ರತೆಗೆ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದು ಬೆಂಕಿಯ ಕೆನ್ನಾಲಿಗೆ ಸುಮಾರು ಕಿಲೋಮೀಟರ್ ದೂರದವರೆಗೆ ಕಾಣಿಸಿದೆ ಅಲ್ಲದೆ ಗ್ಯಾಸ್ ವಾಸನೆಯು ಸುಮಾರು ದೂರದ ವರೆಗೆ ವ್ಯಾಪಿಸಿದ್ದು ಸುರಕ್ಷಾ ಕ್ರಮವಾಗಿ ಸುತ್ತ ಮುತ್ತಲಿನ ಕೈಗಾರಿಕೆಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದ್ದು ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ ಠಾಣೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ!
#WATCH Gujarat: A fire breaks out at an Oil and Natural Gas Corporation (ONGC) plant in Surat. Fire tenders present at the spot. More details awaited. pic.twitter.com/6xPKHW5PrR
— ANI (@ANI) September 23, 2020
ಸರಣಿ ಸ್ಪೋಟದಿಂದ ಉಂಟಾದ ಬೆಂಕಿಯ ವಿಡಿಯೋಗಳನ್ನು ಅಲ್ಲಿನ ಸ್ಥಳೀಯರು ರೆಕಾರ್ಡ್ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.