Bangladesh: ಶೇಖ್ ಹಸೀನಾ ರಾಜೀನಾಮೆ ಬಳಿಕ 500ಕ್ಕೂ ಅಧಿಕ ಕೈದಿಗಳು ಜೈಲಿನಿಂದ ಪರಾರಿ!
ಭಾರತ ಗಡಿ ಭಾಗದಲ್ಲಿ ಬಿಗು ಭದ್ರತೆಯನ್ನು ಕೈಗೊಂಡಿದೆ.
Team Udayavani, Aug 6, 2024, 12:43 PM IST
ಢಾಕಾ: ತೀವ್ರ ಹಿಂಸಾಚಾರದ ನಡುವೆ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ ನಂತರ ಶೇರ್ಪುರ್ ಜೈಲಿನಿಂದ ಭಾರೀ ಪ್ರಮಾಣದಲ್ಲಿ ಕೈದಿಗಳು ಪರಾರಿಯಾಗಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.
ಸೋಮವಾರ (ಆಗಸ್ಟ್ 05) ಮಧ್ಯಾಹ್ನ ಈ ಘಟನೆ ನಡೆದಿದ್ದು, ಕನಿಷ್ಠ 518 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಜೀ ನ್ಯೂಸ್ ವರದಿ ಪ್ರಕಾರ, ಹಲವರು ಶಸ್ತ್ರಸ್ತ್ರಾ ಸಹಿತ ಎಸ್ಕೇಪ್ ಆಗಿರುವುದಾಗಿ ವಿವರಿಸಿದೆ.
ಭಾರತ-ಬಾಂಗ್ಲಾದೇಶ ಗಡಿಯಿಂದ ಸುಮಾರು 100 ಕಿಲೋ ಮೀಟರ್ ದೂರದಲ್ಲಿರುವ ಶೇರ್ಪುರ್ ಸೆಂಟ್ರಲ್ ಜೈಲಿನಿಂದ ಕೈದಿಗಳು ಪರಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತ ಗಡಿ ಭಾಗದಲ್ಲಿ ಬಿಗು ಭದ್ರತೆಯನ್ನು ಕೈಗೊಂಡಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಗಡಿಯಲ್ಲಿ ಗಡಿ ಭದ್ರತಾ ಪಡೆ(BSF)ಯನ್ನು ಹೆಚ್ಚಿಸಲಾಗಿದೆ. ಪರಾರಿಯಾದ ಕೈದಿಗಳಲ್ಲಿ 20 ಮಂದಿ ಭಯೋತ್ಪಾದಕ ಸಂಘಟನೆಗೆ ಸೇರಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Sagara: ಭಟ್ಕಳ ದಿಂದ ಬೆಂಗಳೂರಿಗೆ ಹೊರಟಿದ್ದ ಸಾರಿಗೆ ಬಸ್ ಬೆಂಕಿಗಾಹುತಿ… ತಪ್ಪಿದ ದುರಂತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.