ಪಂಜಾಬ್ ಗೆ ಸೋಲುಣಿಸಿದ ಕೊಹ್ಲಿ ಪಡೆ ಪ್ಲೇ ಆಫ್ ನತ್ತ
Team Udayavani, Oct 3, 2021, 8:32 PM IST
ಶಾರ್ಜಾ: ಐಪಿಎಲ್ ನ ರವಿವಾರದ ಹಗಲು ಪಂದ್ಯದಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡ ಪಂಬಾಬ್ ಕಿಂಗ್ಸ್ ವಿರುದ್ಧ 6 ರನ್ ಗಳ ರೋಚಕ ಜಯ ಸಾಧಿಸಿ ಪ್ಲೇ ಆಫ್ ಬಹುತೇಕ ಖಚಿತಗೊಳಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಹ್ಲಿ ಪಡೆ 20 ಓವರ್ ಗಳಲ್ಲಿ7 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ಕೊಹ್ಲಿ 25, ಪಡಿಕ್ಕಲ್ 40, ವಿಲಿಯರ್ಸ್ 23, ಅರ್ಧಶತಕ ಸಿಡಿಸಿದ ಮ್ಯಾಕ್ಸ್ ವೆಲ್ 57 ರನ್ ಗಳ ಕೊಡುಗೆ ಸಲ್ಲಿಸಿದರು. ಪಂಜಾಬ್ ಪರ ಮಾಕ್ರಮ್ ಮತ್ತು ಹೆನ್ರಿಕ್ಸ್ ತಲಾ 3 ವಿಕೆಟ್ ಪಡೆದರು.
ಗುರಿ ಬೆನ್ನಟ್ಟಿದ ರಾಹುಲ್ ಪಡೆ ಉತ್ತಮ ಆರಂಭ ಮಾಡಿದರೂ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 158 ರನ್ ಗಳನ್ನು ಮಾತ್ರ ಗಳಿಸಿ ಸೋಲಿಗೆ ಶರಣಾಯಿತು. ರಾಹುಲ್ 39 ಮತ್ತು ಮಾಯಾಂಕ್ ಅಗರವಾಲ್ 57 ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರಾದರೂ ಆರ್ ಸಿ ಬಿ ಬೌಲಿಂಗ್ ಎದುರು ಉಳಿದ ಆಟಗಾರರಿಗೆ ಜಯ ತಂದು ಕೊಡುವುದು ಸಾಧ್ಯವಾಗಲಿಲ್ಲ.ಆರ್ ಸಿ ಬಿ ಪರ ಚಹಲ್ 3 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಪ್ಲೇ ಆಫ್ ಪ್ರವೇಶದ ಕ್ಷೀಣ ಅವಕಾಶ ಹೊಂದಿದ್ದ ಕೆ.ಎಲ್ .ರಾಹುಲ್ ನಾಯಕತ್ವದ ಪಂಬಾಬ್ ಕಿಂಗ್ಸ್ ಗೆ ಈ ಸೋಲು ಭಾರೀ ಹೊಡೆತ ನೀಡಿದೆ.
ಅಹ್ಮದಾಬಾದ್‌ನಲ್ಲಿ ನಡೆದ ಮೊದಲ ಮುಖಾ ಮುಖಿಯಲ್ಲಿ ಪಂಜಾಬ್ ಪಡೆ ಆರ್‌ಸಿಬಿ ವಿರುದ್ಧ 34 ರನ್ ಗಳ ಗೆಲುವು ಸಾಧಿಸಿತ್ತು. ಅನಂತರ ಆರ್‌ಸಿಬಿ ಉತ್ತಮ ಪ್ರದರ್ಶನ ಕಾಯ್ದುಕೊಂಡು ಬಂದು ಅಂಕಪಟ್ಟಿಯಲ್ಲಿ 3ನೇ ಸ್ಥಾನವನ್ನು ಗಟ್ಟಿಗೊಳಿಸಿದೆ. ಪಂಜಾಬ್ ವಿರುದ್ಧ ಸೇಡು ತೀರಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.