![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Apr 24, 2023, 7:47 AM IST
ಮಂಗಳೂರು: ಜಿಲ್ಲೆಯಲ್ಲಿ ಮೇ 3ರಂದು ನಡೆಯುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವರು ಎಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾ| ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದ.ಕ, ಉಡುಪಿ ಜಿಲ್ಲೆಗಳ ಕಾರ್ಯಕರ್ತರನ್ನು ಉದ್ದೇಶಿಸಿ ಮೂಲ್ಕಿಯಲ್ಲಿ ನಡೆಯುವ ಸಮಾವೇಶದಲ್ಲಿ ಅವರು ಮಾತನಾಡುವ ನಿರೀಕ್ಷೆ ಇದೆ ಎಂದು ಹೇಳಿದರು.
ಪ್ರತೀ ದಿನ ಮೂರು ರ್ಯಾಲಿಯಂತೆ ರಾಜ್ಯದಲ್ಲಿ ಮೋದಿಯವರು 21 ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುತ್ತೂರಿನ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಎಲ್ಲವೂ ಅಂತಿಮಗೊಳ್ಳಬೇಕಿದೆ ಎಂದರು.
ಕಾಂಗ್ರೆಸ್ ಪರ ದೇಶದ್ರೋಹಿಯ ಪ್ರಚಾರ
ಕಾಂಗ್ರೆಸ್ ಪಕ್ಷ ರಾಜ್ಯದ ಚುನಾವಣೆಗೆ ಘೋಷಿಸಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಮ್ರಾನ್ ಪ್ರತಾಪ್ ಘಡಿ ಎಂಬವರಿದ್ದು, ಇವರೊಬ್ಬ ಮತೀಯ ಹಿಂಸಾವಾದಿ. ಸಿಎಎ ವಿರುದ್ಧ ಗಲಭೆ ಹಿಂಸಾಚಾರ ನಡೆಸಿದ್ದಕ್ಕೆ 1.04 ಕೋಟಿ ರೂ. ದಂಡ ಪಾವತಿಸಿದ್ದು, ಹಲವು ಪ್ರಕರಣಗಳು ಇವರ ವಿರುದ್ಧ ದಾಖಲಾಗಿವೆ. ಅಲ್ಲದೆ ಡಾನ್ ಅತೀಕ್ ಅಹ್ಮದ್‌ನನ್ನು ಗುರು ಎಂದು ಹಾಡಿ ಹೊಗಳಿದ್ದವರಿಂದ ಪ್ರಚಾರ ಮಾಡಿಸಲು ಮುಂದಾಗಿರುವುದು ಕನ್ನಡಿಗರಿಗೆ ಮಾಡುವ ಅಪಮಾನ ಎಂದು ಖಂಡಿಸಿದರು.
ಜಿಲ್ಲಾ ವಕ್ತಾರ ಜಗದೀಶ್ ಶೇಣವ, ಬಿಜೆಪಿ ರಾಜ್ಯ ಮಾಧ್ಯಮ ಸಂಚಾಲಕ ರತನ್‌ರಮೇಶ್ ಪೂಜಾರಿ, ಸಾಮಾಜಿಕ ಜಾಲತಾಣ ಪ್ರಕೋಷ್ಠದ ಅಜಿತ್ ಉಳ್ಳಾಲ ಹಾಜರಿದ್ದರು.
ಎ. 26: ಬಂಟ್ವಾಳಕ್ಕೆ ಯೋಗಿ ಆದಿತ್ಯನಾಥ್?
ಬಂಟ್ವಾಳ, ಎ. 23: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರತಿ ಕ್ಷೇತ್ರಕ್ಕೆ ಆಯಾಯ ಪಕ್ಷಗಳ ಸ್ಟಾರ್ ಪ್ರಚಾರಕರನ್ನು ಕರೆ ತರುವ ಪ್ರಯತ್ನ ನಡೆದಿದ್ದು, ಬಂಟ್ವಾಳಕೆR ಬಿಜೆಪಿ ಪರ ಪ್ರಚಾರಕ್ಕೆ ಎ. 26ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸುವ ಸಾಧ್ಯತೆ ಇದೆೆ.
ಈ ವೇಳೆ ಬಂಟ್ವಾಳ, ಬೈಂದೂರು ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಇನ್ನೂ ದಿನಾಂಕ ಹಾಗೂ ಕ್ಷೇತ್ರಗಳ ವಿವರ ಅಂತಿಮಗೊಳ್ಳಬೇಕಿದೆ.
ಯೋಗಿ ಆದಿತ್ಯನಾಥ್ ಅವರು ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ವಿವಿಧ ಕ್ಷೇತ್ರಗಳಿಗೆ ತೆರಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಹೆಲಿಪ್ಯಾಡ್ ನಿರ್ಮಿಸುವ ಕುರಿತೂ ಚಿಂತನೆ ನಡೆದಿದೆ. ಶೀಘ್ರ ಸ್ಥಳ ಹಾಗೂ ದಿನಾಂಕ ನಿಗದಿಯಾಗಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆೆ.
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
You seem to have an Ad Blocker on.
To continue reading, please turn it off or whitelist Udayavani.