ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಚಿವ ಬಿ.ಸಿ.ನಾಗೇಶ್
Team Udayavani, Oct 27, 2021, 5:21 PM IST
ಭಾಲ್ಕಿ : ”ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಒತ್ತು ಕೊಡುವುದರ ಜತೆಗೆ ಮೂಲ ಸೌಕರ್ಯಗಳನ್ನು ಹೆಚ್ಚಿಸುವಲ್ಲಿ ಕ್ರಮ ವಹಿಸಲಾಗುವುದು” ಎಂದು ಬುಧವಾರ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ”ರಾಜ್ಯದ ಇತರೆ ಪ್ರದೇಶಗಳಿಗೆ ಹೋಲಿಸಿದರೆ ಈ ಕಡೆ ಶಿಕ್ಷಕರ ಹುದ್ದೆಗಳು ಖಾಲಿ ಇರುವುದು ನಿಜ. ಹಾಗಾಗಿ ಈ ಭಾಗಕ್ಕೆ ವಿಶೇಷ ಒತ್ತು ನೀಡಲಾಗುವುದು. ಈ ಭಾಗದಿಂದಲೂ ಹೆಚ್ಚಿನ ಅಭ್ಯರ್ಥಿಗಳು ಶಿಕ್ಷಕರಾಗಿ ಹೊರ ಬರಬೇಕು. ಇದಕ್ಕಾಗಿ ಪದವಿ ಹಂತದಲ್ಲಿ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿಗಳನ್ನು ಸಹ ನೀಡಲಾಗುತ್ತಿದೆ” ಎಂದು ತಿಳಿಸಿದರು.
”ಕೋವಿಡ್ ನಿಯಂತ್ರಣ ಹಿನ್ನಲೆ ೧ ರಿಂದ ೫ರವರೆಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ. ಮೊದಲ ದಿನಕ್ಕಿಂತ ಈಗ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಾಗುತ್ತಿದೆ. ಶಾಲೆಯಿಂದ ದೂರ ಉಳಿದ ಮಕ್ಕಳನ್ನು ಮರಳಿ ಕರೆತರುವ ಜವಾಬ್ದಾರಿಯನ್ನು ಶಿಕ್ಷಕರಿಗೆ ವಹಿಸಲಾಗಿದೆ. ಇನ್ನೂ ಆರಂಭದಲ್ಲಿ ಸೇತು ಬಂಧು ಕಾರ್ಯಕ್ರಮ ಹೆಚ್ಚು ನಡೆಸುವುದು, ಕಲಿಕೆಯಲ್ಲಿ ಹಿಂದುಳಿದ ಪ್ರತಿ ಮಗುವಿನಲ್ಲಿ ಶಕ್ತಿ ತುಂಬುವ ನಿಟ್ಟಿನಲ್ಲಿ ಶಿಕ್ಷಕರು ಕೆಲಸ ಮಾಡಬೇಕು. ಈ ಸಂಬಂಧ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ” ಎಂದು ಹೇಳಿದರು.
”ಕೋವಿಡ್ ಸೋಂಕಿನಿಂದ ಮೃತಪಟ್ಟ ಎಲ್ಲ ಶಿಕ್ಷಕರಿಗೆ ಸರ್ಕಾರದಿಂದ ಪರಿಹಾರ ಸಿಗುವುದಿಲ್ಲ. ಕೋವಿಡ್‌ಗೆ ಸಂಬಂಧಿತ ಕರ್ತವ್ಯಕ್ಕೆ ಹಾಜರಾದಲ್ಲಿ ಸಾವನ್ನಪಿದ ಶಿಕ್ಷರಿಗೆ ಪರಿಹಾರ ನೀಡಲಾಗುವುದು” ಎಂದು ಪ್ರಶ್ನೆಯೊಂದಿಗೆ ಉತ್ತರಿಸಿದರು.
ಎಂಎಲ್‌ಸಿ ಶಶೀಲ್ ನಮೋಶಿ, ಮಾಜಿ ಶಾಸಕ ಪ್ರಕಾಶ ಖಂಡ್ರೆ ಜತೆಯಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.