ವಿಧಾನ-ಕದನ 2023: ಟಿಕೆಟ್‌ ಸಿಗದೆ ಮನೆಯೊಂದು ಎರಡು ಬಾಗಿಲು!


Team Udayavani, Apr 24, 2023, 7:49 AM IST

bjp cong

ಟಿಕೆಟ್‌ ಹಂಚಿಕೆ ಪ್ರಕ್ರಿಯೆ ಹಲವು ಕಡೆ ಪಕ್ಷವನ್ನು ಮಾತ್ರ ಒಡೆದಿಲ್ಲ, ಮನೆಯನ್ನೂ ಒಡೆದಿದೆ! ಒಂದೇ ಕುಟುಂಬದ ನಡುವೆ ರಾಜಕೀಯ ವೈಮನಸ್ಸು ತಾರಕಕ್ಕೇರಿ ಅಣ್ಣನ ವಿರುದ್ಧ ತಮ್ಮ, ಅಣ್ಣನ ವಿರುದ್ಧ ತಂಗಿ, ಮಾವನ ವಿರುದ್ಧ ಅಳಿಯ…
ಹೀಗೆ ಈ ಬಾರಿ ಕುಟುಂಬಗಳ ಸದಸ್ಯರ ನಡುವೆ ಚುನಾವಣ ಕಣದಲ್ಲಿ ಫೈಟ್‌ ಕಾಣಿಸಿಕೊಂಡಿದೆ.

ವೀರಣ್ಣ ಚರಂತಿಮಠಗೆ ಸೋದರ ಮಲ್ಲು ಮುಳ್ಳು
ಬಾಗಲಕೋಟೆ: ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಡಾ|ವೀರಣ್ಣ ಚರಂತಿಮಠ ವಿರುದ್ಧ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಚುನಾವಣೆ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಎ.17ರಂದು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿಯೂ ಹೇಳಿದ್ದಾರೆ. ಚರಂತಿಮಠ ಕುಟುಂಬದ ವೀರಣ್ಣ ಚರಂತಿಮಠ ಹಿರಿಯರಾಗಿದ್ದು, ಒಟ್ಟು ಮೂವರು ಸಹೋದರರು, ಇಬ್ಬರು ಸಹೋದರಿಯರಿದ್ದಾರೆ. ಕೊನೆಯ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅಣ್ಣನ ವಿರುದ್ಧವೇ ಬಹಿರಂಗ ಸಮರಕ್ಕೆ ನಿಂತಿದ್ದಾರೆ. ಇದೇ ಮಲ್ಲಿಕಾರ್ಜುನ ಚರಂತಿಮಠ ಹಿಂದೆ ನಾಲ್ಕೈದು ಚುನಾವಣೆಯಲ್ಲಿ ಅಣ್ಣನ ಗೆಲುವಿಗಾಗಿ ಹಳ್ಳಿ ಹಳ್ಳಿಗೆ ತಿರುಗಾಡಿ ಪ್ರಚಾರ ಮಾಡಿದ್ದರು. ನಮ್ಮಣ್ಣ ಬಿಜೆಪಿ ಹಾಗೂ ಬಾಗಲಕೋಟೆಯ ಪ್ರತಿಷ್ಠಿತ ಬಿವಿವಿ ಸಂಘವನ್ನು ತಮ್ಮ ಸ್ವಂತ ಆಸ್ತಿಯಂತೆ ಬಳಸಿಕೊಳ್ಳುತ್ತಿದ್ದಾರೆ. ಅವರಿಗಾಗಿ ದುಡಿದ ಕಾರ್ಯಕರ್ತರನ್ನು ಕಾಲ ಕಸ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಮೇಟಿಗೆ ಅಳಿಯ ಕಗ್ಗಂಟು
ಬಾಗಲಕೋಟೆ: ಕಾಂಗ್ರೆಸ್‌ನಲ್ಲೂ ಮಾವ-ಅಳಿಯ ಪರಸ್ಪರ ಎದುರಾಳಿಗಳಾಗಿ ರಾಜಕೀಯ ಅಖಾಡಕ್ಕಿಳಿಲು ಸಜ್ಜಾಗಿದ್ದಾರೆ. ಕಾಂಗ್ರೆಸ್‌ನಿಂದ ಬಾಗಲಕೋಟೆ ಕ್ಷೇತ್ರಕ್ಕೆ ಮಾಜಿ ಸಚಿವ ಎಚ್‌.ವೈ.ಮೇಟಿಗೆ ಟಿಕೆಟ್‌ ನೀಡಿದ್ದು, ಟಿಕೆಟ್‌ಗಾಗಿ ಪ್ರಬಲ ಆಕಾಂಕ್ಷಿಯಾಗಿದ್ದ, ಸಂಬಂಧದಲ್ಲಿ ಮೇಟಿ ಅವರ ಅಳಿಯ ಡಾ| ದೇವರಾಜ ಪಾಟೀಲ ಜೆಡಿಎಸ್‌ ಸೇರ್ಪಡೆಗೊಂಡಿದ್ದು ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. 2008ರಿಂದ ಪಕ್ಷ ಹಾಗೂ ಮೇಟಿ ಅವರಿಗಾಗಿ ದುಡಿದ್ದು, ಎರಡು ಬಾರಿ ಟಿಕೆಟ್‌ ಕೊಟ್ಟು ಕಸಿದುಕೊಂಡಿದ್ದಾರೆ. ನಾನು ರಾಜಕೀಯ ಗುರುಗಳೆಂದೇ ಭಾವಿಸಿದವರೇ ನನಗೆ ಅನ್ಯಾಯ ಮಾಡಿದ್ದಾರೆ. ಸ್ವಾಭಿಮಾನಿ ಕಾರ್ಯಕರ್ತರೊಂದಿಗೆ ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆಂದು ಮೇಟಿ ಅವರ ಅಳಿಯ ಡಾ|ಪಾಟೀಲ ಹೇಳಿಕೊಂಡಿದ್ದಾರೆ.

ಆನಂದ ಸಿಂಗ್‌ ಸೋದರಿ ಕಾಂಗ್ರೆಸ್‌ ಸೇರ್ಪಡೆ
ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಜಯನಗರ (ಹೊಸಪೇಟೆ) ಸಾಮಾನ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಆನಂದ ಸಿಂಗ್‌ ಪುತ್ರ ಸಿದ್ಧಾರ್ಥ್ ಸಿಂಗ್‌ ಸೋದರತ್ತೆ ರಾಣಿಸಂಯುಕ್ತ ಕಾಂಗ್ರೆಸ್‌ ಪಕ್ಷ ಸೇರಿದ್ದಾರೆ. ವಿಜಯನಗರದ ಹಾಲಿ ಶಾಸಕ ಆನಂದ್‌ಸಿಂಗ್‌ ಅವರ ಸಹೋದರಿಯಾಗಿರುವ ರಾಣಿಸಂಯುಕ್ತ, ಕಳೆದ ಹಲವು ವರ್ಷಗಳಿಂದ ಬಿಜೆಪಿಯಲ್ಲಿದ್ದು ವಿಜಯನಗರ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಸಹೋದರ ಹಾಲಿ ಶಾಸಕ ಆನಂದ್‌ಸಿಂಗ್‌ ಬದಲಿಗೆ ಪುತ್ರ ಸಿದ್ಧಾರ್ಥ್ ಸಿಂಗ್‌ಗೆ ಟಿಕೆಟ್‌ ನೀಡಿರುವುದಕ್ಕೆ ಪಕ್ಷದ ಮೇಲಿನ ಬೇಸರವನ್ನು ಬಹಿರಂಗವಾಗಿಯೇ ಹೊರಹಾಕಿ ಇದೀಗ ಕಾಂಗ್ರೆಸ್‌ ಸೇರಿದ್ದಾರೆ. ರಾಣಿ ಸಂಯುಕ್ತ ರಾಜಕೀಯ ಕುಟುಂಬದಿಂದ ಬಂದಿದ್ದಾರೆ. ಕುಟುಂಬದ ಹಿರಿಯರು ವಿಜಯನಗರ ಕ್ಷೇತ್ರದ ಶಾಸಕರಾಗಿದ್ದರು. ಅಲ್ಲದೇ, ಪತಿ ಕೆ.ಬಿ.ಶ್ರೀನಿವಾಸ ರೆಡ್ಡಿ ಸಹ ಬಿಜೆಪಿ ಕಾರ್ಯಕರ್ತರಾಗಿದ್ದು, 2018ರಲ್ಲಿ ನಡೆದ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪ ರ್ಧಿಸಿ ಕೇವಲ 321 ಮತಗಳಿಂದ ಪರಾಭವಗೊಂಡಿದ್ದರು.

ಗುತ್ತೇದಾರ ಸೋದರ ಬಂಡಾಯ
ಕಲಬುರಗಿ: ಆರು ಸಲ ಗೆದ್ದಿರುವ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಕಳೆದ ಚುನಾವಣೆ ಸಂದರ್ಭದಲ್ಲೇ ಮುಂದಿನ ಸಲ ಕ್ಷೇತ್ರ ಬಿಟ್ಟು ಕೊಡುವುದಾಗಿ ಹೇಳಿದ್ದರಂತೆ. ಆದರೆ ಈ ಸಲವೂ ಕ್ಷೇತ್ರ ಬಿಟ್ಟು ಕೊಡದೆ ಅಫ‌ಜಲಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರಿಂದ ಇವರ ಕಿರಿಯ ಸಹೋದರ ನಿತಿನ್‌ ಗುತ್ತೇದಾರ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕಿದ್ದಾರೆ. ಎರಡು ಅವಧಿಯ ಜಿ.ಪಂ. ಸದಸ್ಯರಾಗಿ, ಜಿ.ಪಂ. ಉಪಾಧ್ಯಕ್ಷ, ಅಧ್ಯಕ್ಷರಾಗಿರುವ ಸೇವೆ ಸಲ್ಲಿಸಿರುವ ನಿತಿನ್‌ ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಎಲ್ಲ ಆಯಾಮಗಳ ಅನುಭವ ಹೊಂದಿದ್ದಾರೆ. ಸಹೋದರ ಶಾಸಕರಿದ್ದರೂ ಅಫ‌ಜಲಪುರ ಕ್ಷೇತ್ರದ ಮೇಲೆ ನಿತಿನ್‌ ಗುತ್ತೇದಾರ ಹಿಡಿತ ಹೊಂದಿರುವುದು ಇವರ ಚಾಣಾಕ್ಷತನಕ್ಕೆ ಹಿಡಿದ ಕನ್ನಡಿಯಾಗಿದೆ. ತಮ್ಮ ಜಿ.ಪಂ. ಎರಡು ಚುನಾವಣೆಯಲ್ಲದೇ ಸಹೋದರ ಮಾಲೀಕಯ್ಯ ಗುತ್ತೇದಾರ ಅವರ ಮೂರು ಚುನಾವಣೆ ಜತೆಗೆ ಎರಡು ಲೋಕಸಭಾ ಚುನಾವಣೆಯನ್ನು ಮುಂಚೂಣಿಯಾಗಿ ನಿರ್ವಹಿಸಿದ್ದಾರೆ. ಕಳೆದ ನಾಲ್ಕು ವರ್ಷದುದ್ದಕ್ಕೂ ಬಿಜೆಪಿ ಪಕ್ಷದ ವಿವಿಧ ಸಂಘಟನ ಕಾರ್ಯಕ್ರಮಗಳ ನೇತೃತ್ವ ವಹಿಸಿ ಯಶಸ್ವಿಯಾಗಿಸಿದ್ದಾರೆ. ಒಂದೇ ಅವಧಿಯಲ್ಲಿ ಜಿ.ಪಂ. ಉಪಾಧ್ಯಕ್ಷ ಹಾಗೂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

“ಕೈ” ಹಿಡಿದ ನಡಹಳ್ಳಿ ಸೋದರ ಶಾಂತಗೌಡ ಪಾಟೀಲ
ಮುದ್ದೇಬಿಹಾಳ: ಬಿಜೆಪಿ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಕಿರಿಯ ಸಹೋದರ ಶಾಂತಗೌಡ ಪಾಟೀಲ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. 2013ರ ಚುನಾವಣೆಯಲ್ಲಿ ಮುದ್ದೇಬಿಹಾಳ ಮತಕ್ಷೇತ್ರಕ್ಕೆ ಕಾಂಗ್ರೆಸ್‌ನ ಅಭ್ಯರ್ಥಿಯಾಗಿದ್ದ ನಾಡಗೌಡ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪ ರ್ಧಿಸಿ 18,859 ಮತ ಪಡೆದು 3ನೇ ಸ್ಥಾನ ಗಳಿಸಿದ್ದರು. ಅದಕ್ಕೂ ಮುನ್ನ ಸಹೋದರನ ಸಮಾಜಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದರು. 2018ರ ಚುನಾವಣೆಯಲ್ಲಿ ಎ.ಎಸ್‌.ಪಾಟೀಲ ಮುದ್ದೇಬಿಹಾಳ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಂದಾಗ ಅವರ ಪರ ಕೆಲಸ ಮಾಡಿದರು. ಆರಂಭದ 2-3 ವರ್ಷ ಸಹೋದರನ ಎಲ್ಲ ಅಭಿವೃದ್ಧಿ ಪರ ಚಟುವಟಿಕೆಗಳ ಅನುಷ್ಠಾನದ ಜವಾಬ್ದಾರಿ ಹೊತ್ತಿದ್ದ ಇವರು ಇತ್ತೀಚಿನ ದಿನಗಳಲ್ಲಿ ಸಹೋದರನಿಂದ ಮುನಿಸಿಕೊಂಡು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸಮ್ಮುಖ ಕಾಂಗ್ರೆಸ್‌ ಸೇರಿ ನಾಡಗೌಡ ಪರ ಪ್ರಚಾರ ನಡೆಸುತ್ತಿದ್ದಾರೆ.

ನಾಡಗೌಡ ಸೋದರ ಗಂಗಾಧರರಾವ್‌ ಬಿಜೆಪಿ ಸೇರ್ಪಡೆ
ಮುದ್ದೇಬಿಹಾಳ: ಕಾಂಗ್ರೆಸ್‌ನ ಮಾಜಿ ಸಚಿವ ಅಪ್ಪಾಜಿ ನಾಡಗೌಡರ ಕಿರಿಯ ಸಹೋದರ ಗಂಗಾಧರರಾವ್‌ (ಮುನ್ನಾಧಣಿ) ನಾಡಗೌಡ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ದೇಸಗತಿ ಮನೆತನದ ಬಲದಿನ್ನಿ ನಾಡಗೌಡರ ಕುಟುಂಬಕ್ಕೆ ಸೇರಿದ ಇವರು ದಶಕಗಳ ಹಿಂದೆಯೇ ಸಹೋದರನಿಂದ ಮುನಿಸಿಕೊಂಡು ಸ್ವತಂತ್ರವಾಗಿ ರಾಜಕೀಯ ಅಸ್ತಿತ್ವ ಗಳಿಸಿಕೊಳ್ಳಲು ಮುಂದಾಗಿದ್ದರು. 2011-16ರ ಅವ ಧಿಯಲ್ಲಿ ವಿಜಯಪುರ ಜಿ.ಪಂ. ಸದಸ್ಯರಾಗಿದ್ದಾಗ ಒಂದು ವರ್ಷದ ಅವ ಧಿಗೆ ಜಿ.ಪಂ.ನ ಹಂಗಾಮಿ ಅಧ್ಯಕ್ಷರಾಗಿದ್ದರು. 2018ರ ಚುನಾವಣೆಯಲ್ಲಿ ಮುದ್ದೇಬಿಹಾಳ ಮತಕ್ಷೇತ್ರಕ್ಕೆ ಕಾಂಗ್ರೆಸ್‌ನ ಅಭ್ಯರ್ಥಿಯಾಗಿದ್ದ ಸಹೋದರ ನಾಡಗೌಡರ ವಿರುದ್ಧವೇ ಪಕ್ಷೇತರರಾಗಿ ಸ್ಪ ರ್ಧಿಸಿದ್ದರು. ಇತ್ತೀಚೆಗೆ ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ಸಮ್ಮುಖ ಸ್ಥಳೀಯ ಬಿಜೆಪಿ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾಗಿ ನಡಹಳ್ಳಿ ಪರ ಪ್ರಚಾರ ನಡೆಸುತ್ತಿದ್ದಾರೆ.

ರೋಣದಲ್ಲಿ ಹಳಿ ತಪ್ಪಿದ ಬಂಡಿ
ಗದಗ: ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿ ಹಾಗೂ ಸಹೋದರ ಸಿದ್ದಪ್ಪ ಬಂಡಿ ನಡುವಿನ ವೈಮನಸ್ಸು ಹಾಗೂ ಮುಸುಕಿನ ಗುದ್ದಾಟ ಬಹಿರಂಗಗೊಂಡಿದೆ. ಪರಿಣಾಮ ಸಹೋದರ ಸಿದ್ದಪ್ಪ ಬಂಡಿ ಕಮಲ ಬಿಟ್ಟು ಕೈ ಹಿಡಿದಿದ್ದಾರೆ.

ರೋಣ ಮತಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಹಾಲಿ ಶಾಸಕ ಕಳಕಪ್ಪ ಬಂಡಿ ಸೇರಿದಂತೆ ಪತ್ನಿ ಸಂಯುಕ್ತಾ ಬಂಡಿ ಹಾಗೂ ಸಹೋದರ ಸಿದ್ದಪ್ಪ ಬಂಡಿ ಪ್ರಯತ್ನ ನಡೆಸಿದ್ದರು. ಕಳಕಪ್ಪ ಬಂಡಿ ಅವರಿಗೆ ಬಿಜೆಪಿ ಟಿಕೆಟ್‌ ತಪ್ಪುವ ಮಾತುಗಳು ಕೇಳಿಬಂದಿದ್ದವು. ಕೊನೆಯ ಕ್ಷಣದಲ್ಲಿ ಬಿಜೆಪಿಯ ಮೂರನೇ ಪಟ್ಟಿಯಲ್ಲಿ ಕಳಕಪ್ಪ ಬಂಡಿ ಅವರ ಹೆಸರು ಘೋಷಣೆಯಾಗುತ್ತಿದ್ದಂತೆಯೆ ಬೇಸರ ವ್ಯಕ್ತಪಡಿಸಿದ ಸಿದ್ದಪ್ಪ ಬಂಡಿ ಕಾಂಗ್ರೆಸ್‌ ಪರ ಪ್ರಚಾರಕ್ಕಿಳಿದಿದ್ದರು. ಶುಕ್ರವಾರ ಅ ಧಿಕೃತವಾಗಿ ಕಾಂಗ್ರೆಸ್‌ ಅಭ್ಯರ್ಥಿ ಜಿ.ಎಸ್‌. ಪಾಟೀಲ ನೇತƒತ್ವದಲ್ಲಿ ಸೇರ್ಪಡೆಗೊಂಡು ಸಹೋದರನಿಗೆ ಸಡ್ಡು ಹೊಡೆದಿದ್ದಾರೆ.

ಸೋದರ ಕಳಕಪ್ಪ ನಡವಳಿಕೆ ಸುಧಾರಿಸುವಂತೆ ಅನೇಕ ಬಾರಿ ತಿಳಿವಳಿಕೆ ನೀಡಿದ್ದರೂ ಸುಧಾರಿಕೊಳ್ಳಲಿಲ್ಲ. ಜಿಎಸ್‌. ಪಾಟೀಲ ಅವರು ಕಾರ್ಯಕರ್ತರನ್ನು ಗೌರವಯುತವಾಗಿ ಕಾಣವುದು, ಪ್ರತಿಯೊಬ್ಬರ ಸಮಸ್ಯೆಗಳನ್ನು ಆಲಿಸುವುದನ್ನು ಗಮನಿಸಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದೇನೆ ಎಂದು ಸಿದ್ದಪ್ಪ ಬಂಡಿ ಹೇಳುತ್ತಾರೆ.

ಟಾಪ್ ನ್ಯೂಸ್

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

Satish Jaraki

Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.