ವಿಧಾನ-ಕದನ 2023: ಚಾಮರಾಜನಗರ ಜಿಲ್ಲೆಯಲ್ಲಿ ಕಾಂಗ್ರೆಸ್-BJP ನಡುವೆ ಪ್ರಬಲ ಪೈಪೋಟಿ
Team Udayavani, Apr 28, 2023, 7:59 AM IST
ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 4 ವಿಧಾನಸಭಾ ಕ್ಷೇತ್ರಗಳಿವೆ. ಚಾಮರಾಜನಗರ, ಗುಂಡ್ಲು ಪೇಟೆ, ಕೊಳ್ಳೇಗಾಲ ಮತ್ತು ಹನೂರು.
ಈ ಪೈಕಿ ಕೊಳ್ಳೇ ಗಾಲ ಎಸ್‌ಸಿ ಮೀಸಲು ಕ್ಷೇತ್ರವಾದರೆ, ಉಳಿದವು ಸಾಮಾನ್ಯ ಕ್ಷೇತ್ರಗಳು. ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇ ಗಾಲ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿಯಿದೆ. ಹನೂರು ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತ್ರಿಕೋನ ಪೈಪೋಟಿ ಏರ್ಪಟ್ಟಿದೆ. ಕಳೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 2 ಕಾಂಗ್ರೆಸ್, 1 ಬಿಜೆಪಿ 1 ಬಿಎಸ್‌ಪಿ ಬಲಾಬಲ ಇತ್ತು.
ಚಾಮರಾಜನಗರ
ಇಲ್ಲಿ ಬಿಜೆಪಿಯಿಂದ ಇದೇ ಪ್ರಥಮ ಬಾರಿಗೆ ಸಚಿವ ವಿ. ಸೋಮಣ್ಣ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಳೆದ ಮೂರು ಬಾರಿಯಿಂದ ಆಯ್ಕೆಯಾಗಿರುವ ಮಾಜಿ ಸಚಿವ ಸಿ. ಪುಟ್ಟರಂಗಶೆಟ್ಟಿ, ಬಿಎಸ್‌ಪಿಯಿಂದ ಹ.ರಾ ಮಹೇಶ್, ಜೆಡಿಎಸ್‌ನಿಂದ ಆಲೂರು ಮಲ್ಲು ಸ್ಪರ್ಧಿಸಿದ್ದಾರೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ. ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಲಿಂಗಾಯತ ಸಮಾಜಕ್ಕೆ ಸೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಪ್ಪಾರ ಸಮು ದಾಯದವರು. ಬಿಎಸ್‌ಪಿ ಅಭ್ಯರ್ಥಿ ಪರಿಶಿಷ್ಟ ಜಾತಿ ಬಲಗೈ ಸಮುದಾಯದವರು. ಈ ಕ್ಷೇತ್ರದಲ್ಲಿ ಲಿಂಗಾಯತ, ಎಸ್‌ಸಿ, ಉಪ್ಪಾರ, ನಾಯಕ, ಕುರುಬ ಸಮುದಾಯದ ಮತಗಳು ಅನುಕ್ರಮವಾಗಿ ಪ್ರಾಬಲ್ಯ ಸಾಧಿಸಿವೆ.
ಸಚಿವ ವಿ.ಸೋಮಣ್ಣ ಅವರು ಚಾಮರಾಜನಗರ ಕ್ಷೇತ್ರ ಒಂದರಿಂದಲೇ ಸ್ಪರ್ಧಿಸಲು ಟಿಕೆಟ್ ಕೋರಿದ್ದರು. ಆದರೆ ಪಕ್ಷ ವರುಣಾದಲ್ಲೂ ಸ್ಪರ್ಧಿಸಲು ಸೂಚಿಸಿದ್ದರಿಂದ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತಾಯಿತು. ಕಳೆದ ಮೂರು ಅವಧಿಯಿಂದಲೂ ಕಾಂಗ್ರೆಸ್ ವಶದಲ್ಲಿರುವ ಈ ಕ್ಷೇತ್ರವನ್ನು ತನ್ನ ತೆಕ್ಕೆಗೆ ಪಡೆಯಲು ಬಿಜೆಪಿ ತೀವ್ರ ಪ್ರಯತ್ನ ನಡೆಸಿದೆ. ಕ್ಷೇತ್ರದಲ್ಲಿ ಹಿಂದಿನಿಂದಲೂ ಹಿಡಿತ ಸಾಧಿಸಿರುವ ಕಾಂಗ್ರೆಸ್ ಕ್ಷೇತ್ರ ಕೈತಪ್ಪಿ ಹೋಗದಂತೆ ರಕ್ಷಿಸಿಕೊಳ್ಳಲು ಹೋರಾಟ ನಡೆಸಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದರೆ, ಅಹಿಂದ ಮತಗಳ ಹೆಚ್ಚಿನ ಪಾಲು ಕಾಂಗ್ರೆಸ್ ತೆಕ್ಕೆಗೆ ಬೀಳಲಿದೆ. ಈ ನಡುವೆ ಬಿಎಸ್‌ಪಿ ಅಭ್ಯರ್ಥಿಯ ಸ್ಪರ್ಧೆ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಅವರಿಗೆ ತೊಡರುಗಾಲಾಗಿದೆ.
ಗುಂಡ್ಲುಪೇಟೆ
ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ಸಿ.ಎಸ್. ನಿರಂಜನ ಕುಮಾರ್ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರ ಪುತ್ರ ಎಚ್. ಎಂ. ಗಣೇಶ್ ಪ್ರಸಾದ್ ಕಣದಲ್ಲಿದ್ದಾರೆ. ಗಣೇಶ್ ಅವರಿಗೆ ಇದು ಮೊದಲ ಚುನಾವಣೆ. ಬಿಜೆಪಿಯಿಂದ ಟಿಕೆಟ್ ಬಯಸಿದ್ದ ಚಾಮುಲ್ ನಿರ್ದೇಶಕ ಎಂ.ಪಿ. ಸುನೀಲ್ ಬಂಡಾಯವಾಗಿ ಸ್ಪರ್ಧಿಸಿದ್ದಾರೆ. ಜೆಡಿಎಸ್‌ನಿಂದ ಕಡಬೂರು ಮಂಜುನಾಥ್ ಕಣಕ್ಕಿಳಿದಿದ್ದಾರೆ. ಈ ನಾಲ್ಕೂ ಅಭ್ಯರ್ಥಿಗಳು ಲಿಂಗಾಯತರು.
ಕ್ಷೇತ್ರದಲ್ಲಿ ಲಿಂಗಾಯತ ಎಸ್‌ಸಿ, ನಾಯಕರು, ಉಪ್ಪಾರ ಸಮಾಜದವರ ಮತಗಳು ಅನುಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿವೆ. ಶಾಸಕ ನಿರಂಜನ್ ಅವರಿಗೆ ಪಕ್ಷೇತರ ಅಭ್ಯರ್ಥಿ ಎಂ.ಪಿ. ಸುನೀಲ್ ಅವರ ಬಂಡಾಯದ ಬಿಸಿ ತಗುಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಇರುವ ಈ ಕ್ಷೇತ್ರದಲ್ಲಿ ಮೊದಲ ಸ್ಥಾನದಲ್ಲಿರುವ ಲಿಂಗಾಯತ ಮತಗಳು ಈ ಎರಡೂ ಪಕ್ಷಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಂಚಿಕೆಯಾಗಲಿವೆ. ಎಸ್‌ಸಿ, ನಾಯಕ, ಹಿಂದುಳಿದ ವರ್ಗಗಳ ಮತಗಳು ಇಲ್ಲಿ ನಿರ್ಣಾಯಕವಾಗಿವೆ. ತಂದೆ ಹೆಸ ರಲ್ಲಿ ಗಣೇಶ್ ಪ್ರಸಾದ್ ಮತ ಕೇಳಿದ್ದರೆ, ಶಾಸಕರಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ನೋಡಿ ಮತ ಕೊಡಿ ಎಂದು ನಿರಂಜನ ಕುಮಾರ್ ಕೇಳುತ್ತಿದ್ದಾರೆ.
ಕೊಳ್ಳೇಗಾಲ
ಬಿಜೆಪಿಯಿಂದ ಹಾಲಿ ಶಾಸಕ ಎನ್. ಮಹೇಶ್, ಕಾಂಗ್ರೆಸ್‌ನಿಂದ ಎ.ಆರ್. ಕೃಷ್ಣಮೂರ್ತಿ ಕಣದಲ್ಲಿದ್ದಾರೆ. ಜೆಡಿಎಸ್‌ನಿಂದ ನಿವೃತ್ತ ಪೊಲೀಸ್ ಅಧಿಕಾರಿ ಪುಟ್ಟಸ್ವಾಮಿ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಪಕ್ಷೇತರರಾಗಿ ಕಿನಕಹಳ್ಳಿ ರಾಚಯ್ಯ ಸ್ಪರ್ಧಿಸಿದ್ದಾರೆ. ಈ ನಾಲ್ವರು ಅಭ್ಯರ್ಥಿಗಳೂ ಎಸ್.ಸಿ. ಸಮುದಾಯದವರು. ಈ ಕ್ಷೇತ್ರದಲ್ಲಿ ಕಳೆದ ಬಾರಿ ಬಿಎಸ್‌ಪಿಯಿಂದ ಹಾಲಿ ಶಾಸಕ ಎನ್. ಮಹೇಶ್ ಗೆದ್ದಿದ್ದರು. ಬದಲಾದ ಸನ್ನಿವೇಶದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿ, ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಎನ್. ಮಹೇಶ್ ಅವರಿಗೆ ಟಕ್ಕರ್ ಕೊಡಬೇಕೆಂಬ ಉದ್ದೇಶದಿಂದ ಬಿಎಸ್‌ಪಿ ಈ ಬಾರಿ ತನ್ನ ಅಭ್ಯರ್ಥಿ (ರೇಖಾ ಕಮಲ್) ನಾಮಪತ್ರ ವಾಪಸ್ ಪಡೆದು ಕಾಂಗ್ರೆಸ್‌ಗೆ ತನ್ನ ಬೆಂಬಲ ಘೋಷಿಸಿದೆ. ಹೀಗಾಗಿ ಈ ಬಾರಿ ಎನ್. ಮಹೇಶ್, ಭಾರೀ ಪೈಪೋಟಿ ಎದುರಿಸಬೇಕಾಗಿದೆ.
ಕ್ಷೇತ್ರದಲ್ಲಿ ಎಸ್‌ಸಿ, ಲಿಂಗಾಯತ, ಉಪ್ಪಾರ, ನಾಯಕ ಮತದಾರರು ಅನುಕ್ರಮವಾಗಿ ಪ್ರಬಲರಾಗಿದ್ದಾರೆ. ಕಳೆದ ಬಾರಿ ಮಹೇಶ್ ಅವರಿಗೆ ದಲಿತ ಮತಗಳು, ಬಿಎಸ್‌ಪಿಯಲ್ಲಿದ್ದರೂ ನಿರ್ಣಾಯಕವಾಗಿದ್ದ ಲಿಂಗಾಯತ ಮತಗಳ ಬಲದಿಂದ ಗೆದ್ದಿದ್ದರು. ಈ ಬಾರಿ ದಲಿತ ಮತಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ಗೆ ಹಾಗೂ ಲಿಂಗಾಯತ ಮತಗಳ ಹೆಚ್ಚಿನ ಪಾಲು ಬಿಜೆಪಿಗೆ ಹೋಗಲಿವೆ. ನಾಯಕ ಮತ್ತು ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ಮತಗಳು ನಿರ್ಣಾಯಕವಾಗಿವೆ.
ಹನೂರು
ಕಾಂಗ್ರೆಸ್‌ನಿಂದ ಹಾಲಿ ಶಾಸಕ ಆರ್. ನರೇಂದ್ರ (ಒಕ್ಕಲಿಗ), ಬಿಜೆಪಿಯಿಂದ ಡಾ. ಪ್ರೀತನ್ ನಾಗಪ್ಪ, (ಲಿಂಗಾಯತ), ಜೆಡಿಎಸ್‌ನಿಂದ ಎಂ.ಆರ್. ಮಂಜುನಾಥ್ (ಕುರುಬ ಸಮಾಜ) ಬಿಎಸ್‌ಪಿಯಿಂದ ಶಾಗ್ಯ ಮಹೇಶ್ (ಆದಿ ಜಾಂಬವ) ಸ್ಪರ್ಧಿಸಿದ್ದಾರೆ. ಜಿಲ್ಲೆಯ ಉಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿಯಿದ್ದರೆ, ಇದೊಂದು ಕ್ಷೇತ್ರದಲ್ಲಿ ಜೆಡಿಎಸ್ ಸೇರಿ ತ್ರಿಕೋನ ಸ್ಪರ್ಧೆ ಇರುವುದು ವಿಶೇಷ. ಕ್ಷೇತ್ರದಲ್ಲಿ ಶಾಸಕ ನರೇಂದ್ರ ಮೂರು ಬಾರಿ ಗೆದ್ದು ಹ್ಯಾಟ್ರಿಕ್ ಸಾಧಿಸಿದ್ದಾರೆ. ಈ ಬಾರಿಯಾದರೂ ಕ್ಷೇತ್ರವನ್ನು ತಮ್ಮ ವಶ ಮಾಡಿಕೊಳ್ಳಲು ಬಿಜೆಪಿ ಹೋರಾಟ ನಡೆಸಿದೆ. ಜೆಡಿಎಸ್ ಅಭ್ಯರ್ಥಿ ಮಂಜುನಾಥ್ ಸಹ ಗೆಲುವಿಗಾಗಿ ಶತಪ್ರಯತ್ನ ನಡೆಸಿದ್ದಾರೆ.
ಕ್ಷೇತ್ರದಲ್ಲಿ ಲಿಂಗಾಯತ, ಎಸ್‌ಸಿ, ಅಲ್ಪಸಂಖ್ಯಾಕ, ಕುರುಬ ಮತ್ತು ಹಿಂದುಳಿದ ವರ್ಗಗಳ ಮತಗಳು ಅನುಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿವೆ. ಲಿಂಗಾಯತ ಮತಗಳನ್ನು ಬಿಜೆಪಿ ಹೆಚ್ಚಿನ ಸಂಖ್ಯೆಯಲ್ಲಿ ಸೆಳೆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಎಸ್‌ಸಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾಕರ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಲಿವೆ. ಒಟ್ಟಾರೆ ಮೂರು ಪಕ್ಷಗಳ ನಡುವೆ ಗೆಲುವಿಗಾಗಿ ತೀವ್ರ ಪೈಪೋಟಿ ಇದೆ.
~ ಕೆ.ಎಸ್. ಬನಶಂಕರ ಆರಾಧ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.