ವಿಧಾನ-ಕದನ 2023: ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳಲ್ಲೂ ಸಮಬಲದ ಹೋರಾಟ


Team Udayavani, Apr 28, 2023, 8:24 AM IST

bjp cong

ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆಯಿದೆ. ಬಿಜೆಪಿಯಿಂದ ಹಾಲಿ ಶಾಸಕರಿಗೆ ಟಿಕೆಟ್‌ ನೀಡಿದ್ದರೆ, ಕಾಂಗ್ರೆಸ್‌ ಹೊಸ ಮುಖಕ್ಕೆ ಮಣೆ ಹಾಕಿದೆ. ಎರಡು ಕ್ಷೇತ್ರಗಳಲ್ಲೂ ಜೆಡಿಎಸ್‌ ಸ್ಪರ್ಧೆಗೆ ಇಳಿದಿದೆ.

ಮಡಿಕೇರಿ
ಬಹಳ ವರ್ಷಗಳ ಕಾಲ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಧಿಕಾರ ನಡೆಸಿದ್ದರೂ 2004ರಿಂದೀಚೆಗೆ ಅಧಿಕಾರಕ್ಕೆ ಏರಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ. 2004ರಲ್ಲಿ ಕೆ.ಜಿ. ಬೋಪಯ್ಯ ಜಯ ಗಳಿಸಿದರು. ಅನಂತರದ ಚುನಾವಣೆಗಳಲ್ಲಿ ಅಪ್ಪಚ್ಚು ರಂಜನ್‌ ಜಯ ಗಳಿಸುತ್ತಾ ಬಂದಿದ್ದಾರೆ. 2023ರಲ್ಲೂ ಬಿಜೆಪಿ ಅವರಿಗೆ ಟಿಕೆಟ್‌ ನೀಡಿದೆ. ಕಾಂಗ್ರೆಸ್‌ ಇಲ್ಲಿ ಡಾ| ಮಂಥರ್‌ ಗೌಡ ಅವರನ್ನು ಕಣಕ್ಕೆ ಇಳಿಸಿದೆ. ಮಂಥರ್‌ ಗೌಡ ಈ ಹಿಂದೆ ವಿಧಾನಪರಿಷತ್‌ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಜೆಡಿಎಸ್‌ನಿಂದ ಕಣಕ್ಕೆ ಇಳಿದಿರುವ ಎನ್‌.ಎಂ. ಮುತ್ತಪ್ಪ ಪ್ರಬಲ ಸ್ಪರ್ಧೆ ನೀಡಲಿದ್ದಾರೆ. ಇವರ ಮತಗಳಿಗೆ ಆಧಾರದಲ್ಲಿ ಜಯ ಯಾರಿಗೆ ಎಂಬುದು ನಿರ್ಧಾರವಾಗಲಿದೆ. ಅರೆಭಾಷಿಕ ಗೌಡ ಹಾಗೂ ಒಕ್ಕಲಿಗ ಗೌಡ ಸಮುದಾಯವರು ಈ ಕ್ಷೇತ್ರದಲ್ಲಿ ಹೆಚ್ಚಿದ್ದಾರೆ. ಕೊಡವ ಸಮುದಾಯವರು ಇದ್ದಾರೆ. ಮೂರು ಪಕ್ಷಗಳಿಂದ ಪ್ರಚಾರ ಚುರುಕುಗೊಂಡಿದೆ. ಬಿಜೆಪಿ ಕ್ಷೇತ್ರ ಉಳಿಸಿಕೊಳ್ಳಲು ಹಾಗೂ ಕಾಂಗ್ರೆಸ್‌ ಕ್ಷೇತ್ರದಲ್ಲಿ ಅಧಿಕಾರ ಪಡೆಯಲು ಹೋರಾಡುತ್ತಿವೆ.

ವಿರಾಜಪೇಟೆ
ಈ ಕ್ಷೇತ್ರದಲ್ಲೂ ಕಾಂಗ್ರೆಸ್‌ ಬಹುಕಾಲ ಆಡಳಿತ ನಡೆಸಿದ್ದರೂ 2004ರ ಅನಂತರದಲ್ಲಿ ಜಯ ಕಾಣಲಿಲ್ಲ. 2008ರಲ್ಲಿ ಮಡಿಕೇರಿ ಬಿಟ್ಟು ವಿರಾಜಪೇಟೆಯಿಂದ ಸ್ಪರ್ಧಿಸಿ ಜಯ ಸಾಧಿಸಿದ ಕೆ.ಜಿ. ಬೋಪಯ್ಯ 2023ರ ಚುನಾವಣೆಯಲ್ಲೂ ಬಿಜೆಪಿಯಿಂದ ಸ್ಪರ್ಧೆಗೆ ಇಳಿದಿದ್ದಾರೆ. ಕಾಂಗ್ರೆಸ್‌ ಕಾನೂನು ಘಟಕದ ಅಧ್ಯಕ್ಷ ಹಾಗೂ ಹಿರಿಯ ವಕೀಲರಾಗಿದ್ದ ದಿ| ಎ.ಕೆ. ಸುಬ್ಬಯ್ಯ ಅವರ ಪುತ್ರ ಎ.ಎಸ್‌. ಪೊನ್ನಣ್ಣ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಜೆಡಿಎಸ್‌ನಿಂದ ಮನ್ಸೂರ್‌ ಅಲಿ ಕಣದಲ್ಲಿದ್ದಾರೆ. ಪೊನ್ನಣ್ಣ ಮತ್ತು ಬೋಪಯ್ಯ ಅವರ ನಡುವೆ ನೇರ ಹಣಾಹಣಿಯಿದೆ. ಜಾತಿ ಲೆಕ್ಕಾಚಾರಗಳು ಜೋರಾಗಿವೆ. ಕೊಡವ ಹಾಗೂ ಗೌಡ ಸಮುದಾಯದ ಮತಗಳು ಹೆಚ್ಚಿವೆ. ಅಲ್ಪಸಂಖ್ಯಾಕರ ಮತಗಳು ಇದ್ದರೂ ಫ‌ಲಿತಾಂಶದ ಮೇಲೆ ಪರಿಣಾಮ ಬೀರುವಷ್ಟಿಲ್ಲ. ಅಧಿಕಾರದ ಚುಕ್ಕಾಣೆ ಹಿಡಿಯಲು ಕಾಂಗ್ರೆಸ್‌ ಎಲ್ಲ ಪ್ರಯತ್ನ ನಡೆಸುತ್ತಿದ್ದು, ಬಿಜೆಪಿ ಅಧಿಕಾರ ಮುಂದುವರಿಸಲು ತಂತ್ರ ರೂಪಿಸುತ್ತಿದೆ.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.