ತಲೆಗೆ 50 ಲಕ್ಷ ಇನಾಮು ಹೊಂದಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕನ ಹತ್ಯೆ
Team Udayavani, Nov 14, 2021, 5:13 PM IST
ಮುಂಬಯಿ : ತಲೆಗೆ 50 ಲಕ್ಷ ರೂ. ಇನಾಮು ಹೊಂದಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕನೊಬ್ಬನನ್ನು ಶನಿವಾರ ಮಹಾರಾಷ್ಟ್ರದ ಗಡ್ಚಿರೋಲಿ ಎನ್ಕೌಂಟರ್ನಲ್ಲಿ ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹತರಾದ 26 ನಕ್ಸಲರಲ್ಲಿ ಮಿಲಿಂದ್ ತೇಲ್ತುಂಬ್ಡೆ ಎಂಬ ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಸೇರಿದ್ದಾನೆ ಎಂದು ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮುಂಬೈನಿಂದ 900 ಕಿ.ಮೀ ದೂರದಲ್ಲಿರುವ ಜಿಲ್ಲೆಯ ಮರ್ಡಿಂತೋಲಾ ಅರಣ್ಯ ಪ್ರದೇಶದ ಕೊರ್ಚಿಯಲ್ಲಿ ಸಿ-60 ಪೊಲೀಸ್ ಕಮಾಂಡೋ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಕಾಳಗ ನಡೆದಿತ್ತು, 26 ನಕ್ಸಲರನ್ನು ಹೊಡೆದುರುಳಿಸಲಾಗಿತ್ತು.
ಎನ್ಕೌಂಟರ್ನಲ್ಲಿ ಹತ್ಯೆಗೀಡಾದ ಬಂಡುಕೋರರಲ್ಲಿ 20 ಪುರುಷರು ಮತ್ತು ಆರು ಮಹಿಳೆಯರು ಸೇರಿದ್ದಾರೆ. ಆ ಪೈಕಿ ತೇಲ್ತುಂಬ್ಡೆಯ ಓರ್ವ ಪುರುಷ ಮತ್ತು ಮಹಿಳಾ ಅಂಗರಕ್ಷಕರು ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಸಂಘಟನೆಯ ಉನ್ನತ ಕಾರ್ಯಕರ್ತ ಮಿಲಿಂದ್ ತೇಲ್ತುಂಬ್ಡೆ ಯನ್ನು ‘ಅಪಾಯಕಾರಿ ಮಾವೋವಾದಿ’ ಎಂದು ಹೆಸರಿಸಲಾಗಿತ್ತು, ಮತ್ತು ಆತ ತಲೆಮರೆಸಿಕೊಂಡಿದ್ದ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.