ಸಚಿವ ಎಸ್.ಟಿ.ಸೋಮಶೇಖರ್ ರಿಂದ ಡೋಲು ಬಡಿತ, ವೀರಗಾಸೆ ಕುಣಿತ
Team Udayavani, Oct 15, 2021, 12:25 PM IST
ಮೈಸೂರು: ವಿಜಯದಶಮಿಯ ಸಂಭ್ರಮದ ದಿನವಾದ ಶುಕ್ರವಾರ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅರಮನೆಗೆ ಬರಮಾಡಿಕೊಳ್ಳುವ ಸಂದರ್ಭದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಡೋಲು ಬಾರಿಸಿ, ಕಂಸಾಳೆಯಾಡಿ, ಕಲಾವಿದರೊಂದಿಗೆ ವೀರಗಾಸೆ ಕುಣಿತ ಮಾಡಿ ಗಮನ ಸೆಳೆದರು.
ಆರಮನೆ ಆವರಣದಲ್ಲಿ ನೆರೆದಿದ್ದ ಕಲಾತಂಡಗಳ ಜೊತೆ ಕಲಾವಿದರಂತೆಯೇ ಡೋಲು ಬಾರಿಸಿದರು. ವೀರಗಾಸೆ ಕುಣಿತ ಮಾಡುವ ಕಲಾವಿದರನ್ನು ಹುರಿದುಂಬಿಸುವುದರ ಜೊತೆಗೆ ತಮ್ಮಲ್ಲಿನ ಜಾನಪದ ಕಲೆಯನ್ನು ಕೂಡ ಪ್ರದರ್ಶಿಸಿದರು.
ಪೂಜಾ ಕುಣಿತ, ಗೊಂಬೆ ಕುಣಿತ ನೋಡಿದ ಸಚಿವರು ಅವರೊಂದಿಗೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು. ಸಚಿವರ ಕುಣಿತ, ಡೋಲು ಬಡಿತವನ್ನು ಕಂಡ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಕೂಡ ತಮಟೆ ಬಾರಿಸಿದರು. ಸಚಿವರೊಂದಿಗೆ ಮೂಡಾ ಅಧ್ಯಕ್ಷ ರಾಜೀವ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಗಳ ಅಧ್ಯಕ್ಷ ಅಪ್ಪಣ್ಣ ಸೇರಿದಂತೆ ಹಲವು ಮುಖಂಡರು ಹಾಕಿದರು.
ಇದೇ ವೇಳೆ ಗ್ರಾಮೀಣ ಕಲಾ ತಂಡಗಳನ್ನು ವೀಕ್ಷಿಸಿ, ಅವರ ಕಲೆಯನ್ನು ಪ್ರೋತ್ಸಾಹಿಸಿದರು. ಬೆಳಗ್ಗೆ 10 ಗಂಟೆಯಿಂದಲೇ ಅರಮನೆ ಆವರಣದಲ್ಲಿ ಸಂಭ್ರಮ ಮನೆ ಮಾಡಿತ್ತು.
ಅರಮನೆ ಆವರಣದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಕಲಾತಂಡಗಳ ಜೊತೆ ಬೆರೆತ ಸಂದರ್ಭ.@DCMysuru @DC_Mysuru pic.twitter.com/bJuuI3hquA
— S T Somashekar Gowda (@STSomashekarMLA) October 15, 2021
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಲಾವಿದರಿಗೆ ಪ್ರೋತ್ಸಾಹ ನೀಡಬೇಕೆಂದು ಕರೆತರಲಾಗಿದೆ. ಅವರೊಂದಿಗೆ ಹೆಜ್ಜೆ ಹಾಕಲು ಸಾಧ್ಯವಿಲ್ಲ ಆದರೆ ಅವರನ್ನು ಪ್ರೋತ್ಸಾಹಿಸಿ ಹುರಿದುಂಬಿಸಲು 1%ನಷ್ಟು ಕುಣಿತ ಮಾಡಲಾಯಿತು ಎಂದರು.
ಚಿನ್ನದ ಅಂಬಾರಿಯಲ್ಲಿ ಮೆರವಣಿಗೆಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಈ ಮೊದಲು ಆಟೋ, ಮೊಬೈಲ್ ವ್ಯಾನ್ ನಲ್ಲಿ ಕರೆತರಲಾಗುತ್ತಿತ್ತು. ಆದರೆ ಈ ರೀತಿ ದೇವಿಯನ್ನು ಕರೆತರುವುದು ಸರಿಯಲ್ಲ ಎಂದು ಇದೇ ಮೊದಲ ಬಾರಿಗೆ ಉತ್ಸವ ಮೂರ್ತಿಯನ್ನು ಅರಮನೆಗೆ ಮೆರವಣಿಗೆಯಲ್ಲಿ ಕರೆತರುತ್ತಿರುವುದು ಇದೇ ಮೊದಲು ಎಂದು ಹೇಳಿದರು.
ಜಂಬೂ ಸವಾರಿ ವೀಕ್ಷಣೆಗೆ 500 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಮುಖ್ಯ ನ್ಯಾಯಮೂರ್ತಿಗಳು, ಮುಖ್ಯಮಂತ್ರಿ ಸೇರಿದಂತೆ ಗಣ್ಯಾತಿಗಣ್ಯರು ಜಂಬೂ ಸವಾರಿ ವೀಕ್ಷಣೆ ಮಾಡಲಿದ್ದಾರೆ ಎಂದರು.
ಈ ಬಾರಿ 6 ಸ್ತಬ್ಧ ಚಿತ್ರಗಳು ಸಾಗಲಿವೆ. ಜಂಬೂ ಸವಾರಿಯನ್ನು ದೂರದರ್ಶನ ನೇರಪ್ರಸಾರ ಮಾಡಲಿದೆ. ಇದರ ಜೊತೆಗೆ ಫೇಸ್ ಬುಕ್, ಯೂಟ್ಯೂಬ್, ವರ್ಚ್ಯುವಲ್ ಮೂಲಕ ಕೂಡ ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ಹೇಳಿದರು.
ಕೋವಿಡ್ ನಿಯಮ ಉಲ್ಲಂಘನೆ ಮಾಡದೆ ಸರಳ, ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗಿದೆ. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಲಿ, ನಾಡು ಸಮೃದ್ಧವಾಗಲಿ ಎಂದು ವಿಜಯದಶಮಿಯ ಈ ದಿನದಂದು ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.