ಯುಗಾದಿ ಧಾರ್ಮಿಕ ದಿನ ಆಚರಣೆ: ಪ್ರಥಮ ಕಾರ್ಯಕ್ರಮಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ
Team Udayavani, Apr 2, 2022, 11:35 AM IST
ಬೆಳಗಾವಿ: ಯುಗಾದಿ ಹಬ್ಬವನ್ನು ಧಾರ್ಮಿಕ ದಿನವನ್ನಾಗಿ ಸರಕಾರ ಘೋಷಿಸಿದ್ದು, ಪ್ರಥಮ ಧಾರ್ಮಿಕ ದಿನದ ರಾಜ್ಯಮಟ್ಟದ ಕಾರ್ಯಕ್ರಮ ನಿಪ್ಪಾಣಿಯ ಶ್ರೀ ವಿರೂಪಾಕ್ಷ ಲಿಂಗ ಸಮಾಧಿ ಮಠದಲ್ಲಿ ಶನಿವಾರ ನಡೆಯಿತು.
ಮುಜರಾಯಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ದಂಪತಿಗಳು ಸಾಂಪ್ರದಾಯಿಕ ಪೂಜೆ-ಪುನಸ್ಕಾರ ಮೂಲಕ, ಗೋ ಪೂಜೆ, ಲಕ್ಷ್ಮೀ ಪೂಜೆ, ಮಾಡಿ, ನೇಗಿಲು ಹಿಡಿದು ಬಿತ್ತನೆ ಮಾಡುವ ಮೂಲಕ ಹಬ್ಬವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಅವರು, ಯುಗಾದಿ ಹಬ್ಬವನ್ನು ಇನ್ನು ಮುಂದೆ ಪ್ರತಿವರ್ಷ ಸರಕಾರದ ವತಿಯಿಂದ ಧಾರ್ಮಿಕ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತದೆ. ಅದರಂತೆ ಇಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಸಮಾಧಿ ಮಠದಲ್ಲಿ ಸರ್ಕಾರದಿಂದಲೇ ಕಾರ್ಯಕ್ರಮ ಆಯೋಜನೆ ಮಾಡಿ ಪ್ರಥಮಬಾರಿಗೆ ಧಾರ್ಮಿಕ ದಿನಾಚರಣೆಯನ್ನು ಆಚರಣೆ ಆರಂಭಿಸಲಾಗಿದೆ ಎಂದು ಹೇಳಿದರು.
ಇದೇ ವೇಳೆ ಸಚಿವೆ ಶಶಿಕಲಾ ಜೊಲ್ಲೆ ಹುಕ್ಕೇರಿಶನ ವಚನ ಗಾಯನ ಹಾಗೂ ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ ಹಾಡು ಹಾಡುವ ಮೂಲಕ ಹಿಂದೂ ಸಂಪ್ರದಾಯದ ಹೊಸ ವರ್ಷಾಚರಣೆಯ ಮಹತ್ವವನ್ನು ತಿಳಿಸಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡರ ಹಾಗೂ ಅನೇಕ ಧರ್ಮಗುರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.