ಮಧುಮೇಹ ಔಷಧ, ಚುಚ್ಚುಮದ್ದು ಒದಗಿಸಲು ಶಾಸಕ ಗುರ್ಮೆ ಮನವಿ
Team Udayavani, Jul 22, 2023, 6:20 AM IST
ಕಾಪು: ಇತ್ತೀಚಿನ ದಿನಗಳಲ್ಲಿ ಅಬಾಲ ವೃದ್ಧರಾದಿಯಾಗಿ ಬಹುತೇಕ ಮಂದಿ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಅವರಿಗೆ ಅಗತ್ಯವಿರುವ ಮಧುಮೇಹ ಚುಚ್ಚುಮದ್ದು / ಔಷಧಗಳು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 2-3 ತಿಂಗಳುಗಳಿಂದ ಸರಿಯಾಗಿ ದೊರಕುತ್ತಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಸಿಗದ ಔಷಧಗಳನ್ನು ದುಬಾರಿ ಬೆಲೆಗೆ ಖಾಸಗಿಯಾಗಿ ಖರೀದಿಸಲು ಬಡವರಿಗೆ ಆಗುತ್ತಿಲ್ಲ. ಆದ್ದರಿಂದ ತುರ್ತಾಗಿ ಬಡವರಿಗೆ ಎಲ್ಲ ಆಸ್ಪತ್ರೆಗಳಲ್ಲೂ ಮಧುಮೇಹ ಚಿಕಿತ್ಸೆಗೆ ಬೇಕಾಗುವ ಔಷಧಗಳು ಲಭ್ಯ ಇರುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸದನದಲ್ಲಿ ಆಗ್ರಹಿಸಿದ್ದಾರೆ.
ಇದಕ್ಕೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಅವರು ಮಧುಮೇಹ ಟೈಪ್- 2ಕ್ಕೆ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಚುಚ್ಚುಮದ್ದುಗಳು ಲಭ್ಯವಿರುತ್ತವೆ. ಮಧುಮೇಹ ಟೈಪ್ -1ಕ್ಕೆ ಸಂಬಂಧಪಟ್ಟ ಚುಚ್ಚುಮದ್ದುಗಳನ್ನು ಎಸೆನ್ಶಿಯಲ್ ಡ್ರಗ್ ಲಿಸ್ಟ್‌ನಲ್ಲಿ ಸೇರ್ಪಡೆಗೊಳಿಸುವಂತೆ 2022ರ ಡಿ. 3ರಂದು ನಡೆದಿದ್ದ ಥೆರಪೇಟಿಕ್ ಕಮಿಟಿ ಸಭೆಯಲ್ಲಿ ನಿರ್ಣಯಿಸಲಾಗಿದ್ದು, 2023-24 ನೇ ಸಾಲಿನಲ್ಲಿ ಸೇರಿಸಲು ಅನುಮೋದನೆ ನೀಡಲಾಗಿದೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಇ-ಪ್ರೊಕ್ಯುಟ್‌ಮೆಂಟ್ ಕೈಗೊಳ್ಳಲಾಗುವುದು. ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳ ವೈದ್ಯಾಧಿಕಾರಿಗಳಿಂದ ಇ-ಔಷಧ ಮೂಲಕ ಬೇಡಿಕೆ ಬಂದಲ್ಲಿ ಕೆಎಸ್‌ಎಂಎಸ್‌ಸಿಎಲ್ ಮುಖಾಂತರ ಖರೀದಿಸಿ ಸರಬರಾಜು ಮಾಡುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.