ಸೂಕ್ಷ್ಮ ಮತಗಟ್ಟೆಗಳ ಮೇಲೆ ನಿಗಾ: ಆಯೋಗ
Team Udayavani, Apr 28, 2023, 7:04 AM IST
ಬೆಂಗಳೂರು: ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳ ಮೇಲೆ ತೀವ್ರತರವಾದ ನಿಗಾವಿಟ್ಟು ಪ್ರಜಾಸತ್ತಾತ್ಮಕ ಪ್ರಕ್ರಿಯೆಯಾದ ಮತದಾನವನ್ನು ಸುರಕ್ಷಿತವಾಗಿ ನಡೆಸಲು ಕಟಿಬದ್ಧವಾಗಿರು ವುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಬಿಜೆಪಿ ಮುಖಂಡರೊಬ್ಬರು ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಮಾಹಿತಿ ನೀಡಿ ಎಂದು ಎಂದು ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿ ಆಯೋಗ ಈ ಸ್ಪಷ್ಟನೆ ನೀಡಿದೆ. ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸ್ ಅಧೀಕ್ಷರು (ಎಸ್‌ಪಿ) ಜಂಟಿಯಾಗಿ ಗುರುತಿಸಿರುತ್ತಾರೆ. ಹಾಗೆಯೇ ಇಂತಹ ಮತ್ತಗಟ್ಟೆಗಳನ್ನು ನಿರ್ವಹಿಸಲು ಆಯೋಗ ತನ್ನದೇ ಅದ ಮಾರ್ಗದರ್ಶಿ ನಿಯಮಗಳನ್ನು ಹೊಂದಿದ್ದು ಅದನ್ನು ಚಾಚು ತಪ್ಪದೆ ಪಾಲಿಸಲಾಗುತ್ತದೆ ಎಂದು ಆಯೋಗ ಹೇಳಿದೆ.
ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ಮೇಲೆ ವೆಬ್‌ಕಾಸ್ಟ್ ಮೂಲಕ ನಿಗಾ ಇಡಲಾಗುತ್ತದೆ. ಈ ಮತಗಟ್ಟೆಗಳಿಗೆ ಕೇಂದ್ರಿಯ ಪಡೆಗಳನ್ನು ನಿಯೋಜಿಸಲಾಗುತ್ತದೆ. ವೀಡಿಯೋಗ್ರಾಫಿ ಮಾಡಲಾಗುತ್ತದೆ. ಆಯೋಗ ನೇಮಿಸಿರುವ ವೀಕ್ಷಕರು ಈ ಕೇಂದ್ರಗಳ ಮೇಲೆ ಹೆಚ್ಚಿನ ನಿಗಾ ಇಟ್ಟಿರುತ್ತಾರೆ. ಯಾವುದೇ ರಾಜಕೀಯ ಪಕ್ಷಕ್ಕೆ ಏನಾದರೂ ಸಲಹೆ ನೀಡಲಿದ್ದರೆ ಅಥವಾ ಆತಂಕವಿದ್ದರೆ ರಿಟರ್ನಿಂಗ್ ಅಫಿಸರ್ ಅಥವಾ ಜಿಲ್ಲಾ ಚುನಾವಣಾ ಅಧಿಕಾರಿಯ ಗಮನಕ್ಕೆ ತರಬಹುದು. ಸುರಕ್ಷಿತ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗ ಳನ್ನು ಆಯೋಗ ತೆಗೆದುಕೊಳ್ಳುತ್ತದೆ ಆಯೋಗ ಭರವಸೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.