ಮಂಕಿಪಾಕ್ಸ್ ಪ್ರಕರಣ: ರಾಜ್ಯದಲ್ಲಿ ಮುಂಜಾಗ್ರತೆ ಕೈಗೊಳ್ಳಲು ಸಿಎಂ ಸೂಚನೆ
Team Udayavani, Aug 2, 2022, 7:52 PM IST
ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಹರಡದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಮಂಕಿಪಾಕ್ಸ್ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ, ಮಾತನಾಡಿದ ಅವರು, ದೇಶದಲ್ಲಿ ಆರು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಸೋಂಕಿತರ ಪರೀಕ್ಷೆಗೆ ಸೂಕ್ತ ಕ್ರಮ ವಹಿಸಬೇಕು. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಂತೆ ಸೋಂಕು ಧೃಢಪಟ್ಟ ವ್ಯಕ್ತಿಗಳನ್ನು 21 ದಿನಗಳ ಕ್ವಾರಂಟೈನ್ ಮಾಡುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸೋಂಕಿಗೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಬಹುದಾದ ಖಾಸಗಿ ಸಂಸ್ಥೆಗಳನ್ನು ಗುರುತಿಸಬೇಕು. ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕು. ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವ್ಯಾಪಕವಾಗಿ ಪ್ರಚಾರ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.
ರಾಜ್ಯದ ಮೂವರು ವ್ಯಕ್ತಿಗಳ ಪೈಕಿ ಇಬ್ಬರು ವ್ಯಕ್ತಿಗಳ ಪರೀಕ್ಷಾ ವರದಿ ನೆಗೆಟಿವ್ ಇದೆ. ಬೆಲ್ಜಿಯಂ ನಿಂದ ಪ್ರಯಾಣ ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ವ್ಯಕ್ತಿಯ ಪರೀಕ್ಷಾ ವರದಿ ಇನ್ನೂ ಬರಬೇಕಿದೆ. ಬೆಂಗಳೂರಿನ ಇಡಿ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಕ್ವಾರಂಟೈನ್ ಗಾಗಿ ಗುರುತಿಸಲಾಗಿದೆ ಈ ವೇಳೆ ಅಧಿಕಾರಿಗಳು ಸಿಎಂ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದರು.
ಇದನ್ನೂ ಓದಿ: ಮಂಡ್ಯ: ಕುಂಭದ್ರೋಣ ಮಳೆಗೆ ಮುಳುಗಿದ ವಿವೇಕಾನಂದನಗರ, ಬೀಡಿ ಕಾರ್ಮಿಕರ ಕಾಲೋನಿ
ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ.ಅರುಂಧತಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಮುಖ್ಯ ಮಂತ್ರಿಗಳ ಕಾರ್ಯದರ್ಶಿ ಶ್ರೀಕರ್, ಆರೋಗ್ಯ ಟಾಸ್ಕ್ ಫೋರ್ಸ್ ಅಧ್ಯಕ್ಷ ಡಾ. ಸುದರ್ಶನ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ
U. T. Khader: ಹೆಬ್ಟಾಳ್ಕರ್-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.