ಕೇರಳದಲ್ಲಿ ಮಂಕಿಪಾಕ್ಸ್ 5ನೇ ಪ್ರಕರಣ ಪತ್ತೆ; ದೇಶಾದ್ಯಂತ ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆ
ಪ್ರಕರಣ ಪತ್ತೆಯಾಗಿರುವುದನ್ನು ಆರೋಗ್ಯ ಸಚಿವೆ ವೀಣಾ ಜಾರ್ಜ್ ಖಚಿತಪಡಿಸಿದ್ದಾರೆ
Team Udayavani, Aug 2, 2022, 2:49 PM IST
ನವದೆಹಲಿ: ಮಂಕಿಪಾಕ್ಸ್ ಸೋಂಕಿನ ಲಕ್ಷಣದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆಯ ನಂತರ ಯುಎಇನಿಂದ ಕೇರಳಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ 5ನೇ ಪ್ರಕರಣ ಪತ್ತೆಯಾದಂತಾಗಿದೆ. ಅಲ್ಲದೇ ಭಾರತದಲ್ಲಿ ಈವರೆಗೆ 7 ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ.
ಇದನ್ನೂ ಓದಿ:ಧಾರಾಕಾರ ಮಳೆಗೆ ರೈತರ ಜಮೀನು, ಶಾಲೆಗಳು ಜಾಲವೃತ : ಸೇತುವೆ ಮುಳುಗಡೆಯಾಗಿ ಸಂಚಾರ ಸ್ಥಗಿತ!
ಕೇರಳದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿರುವುದನ್ನು ಆರೋಗ್ಯ ಸಚಿವೆ ವೀಣಾ ಜಾರ್ಜ್ ಖಚಿತಪಡಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. 30 ವರ್ಷದ ರೋಗಿ ಮಲಪ್ಪುರಂನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಸಚಿವೆ ಜಾರ್ಜ್ ಮಾಹಿತಿ ನೀಡಿದ್ದಾರೆ.
ಜುಲೈ 27ರಂದು ಯುಎಎಇನಿಂದ ಕೋಝಿಕೋಡ್ ವಿಮಾನನಿಲ್ದಾಣಕ್ಕೆ ಆಗಮಿಸಿದ್ದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದ್ದು, ಈಗ ಮಲಪ್ಪುರಂ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್
Mahakumbh Mela: ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ ಸಾಧು ಸಂತರ ಶಾಹಿ ಸ್ನಾನ
V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್ ಅಧಿಕಾರ ಸ್ವೀಕಾರ
Lok Sabha result:ಜುಕರ್ಬರ್ಗ್ ಸುಳ್ಳು ಬಯಲು ಮಾಡಿದ ಅಶ್ವಿನಿ ವೈಷ್ಣವ್
Mahakumbh; ಕುಂಭದಲ್ಲಿ ಒಂದೇ ದಿನ 1.5 ಕೋಟಿ ಜನ ಪುಣ್ಯ ಸ್ನಾನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.