ಲಾಕ್ ಡೌನ್ ನಿಂದಾಗಿ ಊರಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚುವರಿ ಬಸ್ಸಿನ ವ್ಯವಸ್ಥೆ: ಸವದಿ
Team Udayavani, Jul 13, 2020, 4:08 PM IST
ಬೆಂಗಳೂರು : ಬೆಂಗಳೂರಿನಲ್ಲಿ ಲಾಕ್ ಡೌನ್ ವಿಧಿಸಲಾಗುತ್ತಿರುವುದರಿಂದ ಬೆಂಗಳೂರಿನಿಂದ ಇತರ ಕಡೆಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ಪ್ರತಿದಿನ 800 ಹೆಚ್ಚುವರಿ ಬಸ್ಸುಗಳನ್ನು ಅಂದರೆ ಒಟ್ಟು 1600 ಬಸ್ಸುಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಕಾರ್ಯಾಚರಣೆಗೊಳಿಸಲಾಗುತ್ತಿದೆ. ಇದಲ್ಲದೇ ಅಗತ್ಯವಿದ್ದರೆ ಮತ್ತಷ್ಟು (200) ಬಸ್ಸುಗಳನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಈಗಾಗಲೇ ಇಂದು ಮಧ್ಯಾಹ್ನ 1 ಗಂಟೆಯವರೆಗೆ ಒಟ್ಟು 440 ಬಸ್ಸುಗಳನ್ನು ವಿವಿಧ ಜಿಲ್ಲೆಗಳಿಗೆ ಮತ್ತು ಕೆಲವು ರಾಜ್ಯಗಳಿಗೆ ಬೆಂಗಳೂರಿನಿಂದ ಕಾರ್ಯಾಚರಣೆಗೊಳಿಸಲಾಗಿರುತ್ತದೆ. ಒಟ್ಟು 11466 ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಸಕಲ ವ್ಯವಸ್ಥೆಯನ್ನು ಸೂಕ್ತವಾಗಿ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಜೊತೆಗೆ ಪ್ರಯಾಣಿಕರ ಹಿತದೃಷ್ಟಿಯಿಂದ ಇತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಲಾಕ್ಡೌನ್ ಘೋಷಣೆಯಿಂದ ಯಾರೂ ಆತಂಕಕ್ಕೆ ಒಳಗಾಗಬಾರದು. ನಮ್ಮ ಸರಕಾರ ಸಾರ್ವಜನಿಕರ ಹಿತ ರಕ್ಷಣೆಗೆ ಕೈಗೊಳ್ಳುತ್ತಿರುವ ಕ್ರಮಗಳಿಗೆ ಸೂಕ್ತ ಸಹಕಾರ ನೀಡಬೇಕೆಂದು ಉಪಮುಖ್ಯಮಂತ್ರಿಗಳು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್ ಆಗಲಿ: ವಿ.ಸೋಮಣ್ಣ
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.