ಸಿಖ್ ವಿರೋಧಿ ಕ್ಯಾಬಿನೆಟ್ ಸಭೆ: ಮಾರ್ಫ್ ವಿಡಿಯೋದ ಮೂಲ ಪಾಕ್; ಪೊಲೀಸ್
ದ್ವೇಷವನ್ನು ಉತ್ತೇಜಿಸಿ, ಕೋಮು ಸೌಹಾರ್ದತೆ ಹಾಳು ಮಾಡುವ ದುರುದ್ದೇಶ
Team Udayavani, Jan 8, 2022, 8:03 PM IST
ಹೊಸದಿಲ್ಲಿ: ಸಿಖ್ ಸಮುದಾಯದ ವಿರುದ್ಧ ಕ್ಯಾಬಿನೆಟ್ ಸಮಿತಿಯ ಸಭೆ ವಿಡಿಯೋ ಎಂದು ಬಿಂಬಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ ಮರುದಿನವೇ, ಈ ದೃಶ್ಯಾವಳಿಗಳು ಪಾಕಿಸ್ಥಾನದಿಂದ ಬಂದಿರುವುದು ಎಂದು ದೆಹಲಿ ಪೊಲೀಸರು ಶನಿವಾರ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಮಾನಿಟರ್ ಮಾಡಿದ ಸಮಯದಲ್ಲಿ, ನಕಲಿ ಮಾರ್ಫ್ ಮಾಡಿದ ವೀಡಿಯೊವನ್ನು ಕೆಲವು ಟ್ವಿಟರ್ ಖಾತೆಗಳು ಹಂಚಿಕೊಂಡಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಸ್ತವವಾಗಿ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರ ನಿಧನದ ನಂತರ ಡಿಸೆಂಬರ್ 9, 2021 ರಂದು ನಡೆದ ಕ್ಯಾಬಿನೆಟ್ ಸಮಿತಿಯ ಸಭೆಯ ವೀಡಿಯೊ ಇದಾಗಿದ್ದು, ವಿವಿಧ ಸುದ್ದಿ ಪೋರ್ಟಲ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಸುಲಭವಾಗಿ ಲಭ್ಯವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದ್ವೇಷವನ್ನು ಉತ್ತೇಜಿಸಿ, ಕೋಮು ಸೌಹಾರ್ದತೆ ಹಾಳು ಮಾಡುವ ದುರುದ್ದೇಶದಿಂದ, ವಿಡಿಯೋವನ್ನು ಮಾರ್ಫ್ ಮಾಡಲಾಗಿದೆ. ಹೊಸ ವಾಯ್ಸ್‌ಓವರ್ ನೀಡಿ ಸಭೆಯು ಸಿಖ್ ಸಮುದಾಯದ ವಿರುದ್ಧವಾಗಿದೆ ಎಂದು ತೋರಿಸಲು ಪ್ರಯತ್ನಿಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ಕೆ.ಪಿ.ಎಸ್. ಮಲ್ಹೋತ್ರಾ ಹೇಳಿದ್ದಾರೆ.
ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ದೆಹಲಿ ಪೊಲೀಸರು ಟ್ವಿಟರ್ ನಲ್ಲಿ ವದಂತಿಗಳನ್ನು ಹರಡಬೇಡಿ ಮತ್ತು ಇಂತಹ ಫೇಕ್ ವೀಡಿಯೊಗಳನ್ನು ಫಾರ್ವರ್ಡ್ ಮಾಡಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ. ಅಧಿಕೃತವಲ್ಲದ ವದಂತಿಗಳನ್ನು ಮತ್ತು ಫಾರ್ವರ್ಡ್ ವೀಡಿಯೊಗಳನ್ನು ಹರಡದಂತೆ ದೆಹಲಿ ಪೋಲೀಸ್ ಇಲಾಖೆ ನಿಮ್ಮನ್ನು ಒತ್ತಾಯಿಸುತ್ತದೆ. ಸುಳ್ಳನ್ನು ಸೃಷ್ಟಿಸುವ ಯಾವುದೇ ಪ್ರಯತ್ನವು ಕಾನೂನಿನ ಪ್ರಕಾರ ಕ್ರಮವನ್ನು ಎದುರಿಸಬೇಕಾಗುತ್ತದೆ, ”ಎಂದು ಟ್ವೀಟ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.