ಮೊವಾಡಿ: ಸೇತುವೆ ಪೂರ್ಣಗೊಂಡರೂ ಆರಂಭವಾಗಿಲ್ಲ ಸಂಚಾರ
Team Udayavani, Mar 27, 2021, 1:05 PM IST
ತ್ರಾಸಿ: ತ್ರಾಸಿ ಹಾಗೂ ನಾಡ ಗ್ರಾಮಗಳನ್ನು ಸಂಪರ್ಕಿಸುವ ಮೊವಾಡಿ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ, ಇನ್ನೂ ಎರಡೂ ಕಡೆಗಳ ಸಂಪರ್ಕ ರಸ್ತೆ ಕಾಮಗಾರಿ ವಿಳಂಬದಿಂದಾಗಿ ಸಂಚಾರ ಆರಂಭ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ.
ನಾಡದಿಂದ ತ್ರಾಸಿಗೆ ಸಂಪರ್ಕಿಸುವ ಮೊವಾಡಿ ಬಳಿ ಸೌಪರ್ಣಿಕಾ ನದಿಗೆ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ ಮಂಜೂರಾದ 9.28 ಕೋ. ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೇತುವೆ ಇದಾಗಿದೆ. ಕಾಮ ಗಾರಿಗೆ 2018ರಲ್ಲಿ ಶಿಲಾನ್ಯಾಸ ನೆರವೇರಿಸಲಾಗಿದ್ದರೂ ಕಾಮಗಾರಿ ಆರಂಭವಾಗಿದ್ದು 2019ರ ಮಾರ್ಚ್‌ನಲ್ಲಿ. 2020ರ ಮೇಯೊಳಗೆ ಕಾಮಗಾರಿ ಪೂರ್ಣಕ್ಕೆ ಗಡುವು ನೀಡಲಾಗಿತ್ತು. ಆದರೆ ಕೊರೊನಾ, ಲಾಕ್‌ಡೌನ್‌ನಿಂದಾಗಿ ವಿಳಂಬಗೊಂಡಿತ್ತು.
ಈಗ ಸೇತುವೆಯ ಕಾಮಗಾರಿ ಬಹುತೇಕ ಮುಗಿದಿದೆ. ಆದರೆ ಎರಡೂ ಕಡೆಗಳಿಂದ ರಸ್ತೆಗೆ ಬೇಕಾದ ಭೂಸ್ವಾಧೀನ ಪ್ರಕ್ರಿಯೆ ಸ್ವಲ್ಪ ಮಟ್ಟಿಗೆ ತೊಡಕಾಗಿದ್ದರಿಂದ ಸಂಪರ್ಕ ರಸ್ತೆ ಕಾಮಗಾರಿ ವಿಳಂಬಗೊಂಡಿತ್ತು. ಇದಲ್ಲದೆ ರಸ್ತೆ ನಿರ್ಮಾಣಕ್ಕೆ ಬೇಕಾದ ಜಲ್ಲಿ, ಕ್ರಷರ್ ಸಾಗಾಟ ನಿರ್ಬಂಧದಿಂದಾಗಿಯೂ ತೊಂದರೆಯಾಗಿದೆ ಎನ್ನುವುದು ಅಧಿಕಾರಿಗಳ ವಾದ.
ತಲಾ 100 ಮೀ. ವಿಸ್ತರಣೆ
ಈ ಸೇತುವೆಯನ್ನು ಮೊವಾಡಿ ಹಾಗೂ ನಾಡ ಕಡೆಯಿಂದ ಸಂಪರ್ಕಿಸುವ ಕಡೆಗಳಲ್ಲಿ ತಲಾ 35 ಮೀ. ರಸ್ತೆ ನಿರ್ಮಾಣಕ್ಕೆ ಈ ಮೊದಲು ತಯಾರಿಸಿದ ಕರಡು ನಕ್ಷೆಯಲ್ಲಿ ಯೋಜನೆ ರೂಪಿಸಲಾಗಿತ್ತು. ಆದರೆ ಇದರಿಂದ ಅಷ್ಟೇನು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಊರವರ ಬೇಡಿಕೆ ಮೇರೆಗೆ ರಸ್ತೆ ವಿಸ್ತರಣೆಗೆ ತಾಂತ್ರಿಕ ಒಪ್ಪಿಗೆ ಸಿಕ್ಕಿ, ಭೂಸ್ವಾಧೀನ ಪ್ರಕ್ರಿಯೆಯೂ ಆಗಿದೆ. ಮೊವಾಡಿ ಕಡೆಯಿಂದ 103 ಮೀ. ಹಾಗೂ ನಾಡ ಕಡೆಯಿಂದ 100 ಮೀ. ರಸ್ತೆ ವಿಸ್ತರಣೆಯಾಗಲಿದೆ.
ಆದಷ್ಟು ಬೇಗ ಪೂರ್ಣ
ರಸ್ತೆ ವಿಸ್ತರಣೆಗೆ ತಾಂತ್ರಿಕ ಒಪ್ಪಿಗೆ ಪ್ರಕ್ರಿಯೆ ಎಲ್ಲ ಪೂರ್ಣಗೊಂಡು, ಕಾಮಗಾರಿ ಆರಂಭಗೊಂಡಿತ್ತು. ಆದರೆ ಕಾಮಗಾರಿಗೆ ಜಲ್ಲಿ, ಕ್ರಷರ್ ಸಮಸ್ಯೆಯಿಂದಾಗಿ ಕೆಲವು ದಿನ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಆರಂಭಿಸಲಾಗಿದೆ. ಆದಷ್ಟು ಬೇಗ ಎರಡೂ ಕಡೆಗಳ ಸಂಪರ್ಕ ರಸ್ತೆ ಕಾಮಗಾರಿ ಪೂರ್ಣಗೊಳಿಸಿ, ಸಂಚಾರಕ್ಕೆ ಮುಕ್ತಗೊಳಿಸಲಾಗುವುದು.
– ಸಂಗಮೇಶ್, ಎಕ್ಸಿಕ್ಯೂಟಿವ್ ಎಂಜಿನಿಯರ್, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಇನ್ನೆಷ್ಟು ದಿನ?
ಮೊವಾಡಿ ಸೇತುವೆಯನ್ನು ಸಂಪರ್ಕಿಸುವ ರಸ್ತೆಗಾಗಿ ಇಲ್ಲಿನ ನಿವಾಸಿಗರು ಜಾಗ ಬಿಟ್ಟುಕೊಟ್ಟಿದ್ದು, ಆದರೆ ಸೇತುವೆಯಿಂದ ಮೊವಾಡಿ ಶಾಲೆಯವರೆಗೆ 18 ಅಡಿ ರಸ್ತೆ ನಿರ್ಮಿಸಿದರೆ ಅನುಕೂಲವಾಗಲಿದೆ. ಇಲ್ಲಿ ಸರಕಾರಿ ಜಾಗವಿದ್ದು, ಅದನ್ನು ಸ್ವಾಧೀನಪಡಿಸಿಕೊಂಡು ಕಾಮಗಾರಿ ಮಾಡಿದರೆ ಒಳ್ಳೆಯದು. ಇದಲ್ಲದೆ ಹೆದ್ದಾರಿಯಿಂದ ಮೊವಾಡಿಗೆ ಡೈವರ್ಶನ್ ಇಲ್ಲದೇ ಸಮಸ್ಯೆಯಾಗಿದೆ. ಇನ್ನು ಎಷ್ಟು ದಿನ ಬೇಕೋ ಗೊತ್ತಿಲ್ಲ ಕಾಮಗಾರಿಗೆ. ಈ ಬಗ್ಗೆ ಶಾಸಕರ ಗಮನಕ್ಕೂ ತರಲಾಗಿದೆ.
– ರೆನ್ಸಮ್ ಪಿರೇರಾ, ಸ್ಥಳೀಯ ಗ್ರಾ.ಪಂ. ಸದಸ್ಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.