MUDA Case: 14 ನಿವೇಶನ ಹಿಂದಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಸಿಎಂ ಪತ್ನಿ ಪತ್ರ!

'ಇಷ್ಟು ವರ್ಷ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ': ಪಾರ್ವತಿ

Team Udayavani, Sep 30, 2024, 11:14 PM IST

CM-Wife-Letter

ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾದ ಬಳಿಕ ದೂರುದಾರ ಸ್ನೇಹಮಯಿ ಕೃಷ್ಣ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ದೂರು ನೀಡಿದ್ದ ಬೆನ್ನಲ್ಲೇ ಪ್ರಕರಣ ದಾಖಲಿಸಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳ ಹಿಂದಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಮುಡಾ ಆಯುಕ್ತರಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯನವರಿಗೆ ರಾಜಕೀಯವಾಗಿ ಆಗುತ್ತಿರುವ ಸಂಕಷ್ಟ ನೋಡಲಾಗದೇ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಈ ಮೂಲಕ ಈ ಮುಡಾ ಹಗರಣ ಪ್ರಕರಣ ಹೊಸ ತಿರುವು ಪಡೆದಿದೆ. ಇನ್ನು ಸಿಎಂ ಪತ್ನಿ ಮುಡಾಗೆ ಬರೆದ ಪತ್ರದಲ್ಲೇನಿದೆ ಎನ್ನುವುದು ಈ ಕೆಳಗಿನಂತಿದೆ..

ಸಿಎಂ ಪತ್ನಿ ಬರೆದಿರುವ ಪತ್ರದಲ್ಲೇನಿದೆ?
ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ನನಗೆ ಮಂಜೂರು ಮಾಡಲಾದ 14 ನಿವೇಶನಗಳ ಹಿಂದಿರುಗಿಸುವ ಕುರಿತು.

ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು.

ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿ ಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ.

ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ.

ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Krishna-Byregowda

Work Pressure: ಗ್ರಾಮ ಆಡಳಿತಾಧಿಕಾರಿಗಳ ಕೆಲಸದ ಒತ್ತಡ ಕಡಿಮೆಗೆ ಕ್ರಮ: ಕೃಷ್ಣ ಬೈರೇಗೌಡ

DK-Shiva-Kumar

Gandhi Jayanthi: ನಾಳೆ ಕಾಂಗ್ರೆಸ್‌ನಿಂದ ರಾಜ್ಯಾದ್ಯಂತ ಗಾಂಧಿ ನಡಿಗೆ

yogi

Rahul Gandhi ಆಕಸ್ಮಿಕ ಹಿಂದೂ: ಸಿಎಂ ಯೋಗಿ ಆದಿತ್ಯನಾಥ್‌

Amit Shah

PM ಮೋದಿ ವಿರುದ್ಧ ಖರ್ಗೆ ಆಡಿದ ಮಾತು ಅಸಹ್ಯಕರ: ಅಮಿತ್‌ ಶಾ

SSLLC

SSLC Exam: ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆಯೂ ಸೋರಿಕೆ

1-siddi

Ra*e case: ನಟ ಸಿದ್ಧಿಕ್‌ಗೆ ಸುಪ್ರೀಂನಿಂದ ನಿರೀಕ್ಷಣ ಜಾಮೀನು

Udupi: ಗೀತಾರ್ಥ ಚಿಂತನೆ-51: ಧೃತರಾಷ್ಟ್ರ, ದುರ್ಯೋಧನ, ಅರ್ಜುನರ ಮನಃಸ್ಥಿತಿ

Udupi: ಗೀತಾರ್ಥ ಚಿಂತನೆ-51: ಧೃತರಾಷ್ಟ್ರ, ದುರ್ಯೋಧನ, ಅರ್ಜುನರ ಮನಃಸ್ಥಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krishna-Byregowda

Work Pressure: ಗ್ರಾಮ ಆಡಳಿತಾಧಿಕಾರಿಗಳ ಕೆಲಸದ ಒತ್ತಡ ಕಡಿಮೆಗೆ ಕ್ರಮ: ಕೃಷ್ಣ ಬೈರೇಗೌಡ

DK-Shiva-Kumar

Gandhi Jayanthi: ನಾಳೆ ಕಾಂಗ್ರೆಸ್‌ನಿಂದ ರಾಜ್ಯಾದ್ಯಂತ ಗಾಂಧಿ ನಡಿಗೆ

SSLLC

SSLC Exam: ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆಯೂ ಸೋರಿಕೆ

Aravind-Bellad

Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್‌ ಭವಿಷ್ಯ

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Stock-market-Exchange

Stock market; ಸೆನ್ಸೆಕ್ಸ್‌ 1272, ನಿಫ್ಟಿ 368 ಅಂಕ ಕುಸಿತ: 3.57 ಲಕ್ಷ ಕೋಟಿ ನಷ್ಟ

Krishna-Byregowda

Work Pressure: ಗ್ರಾಮ ಆಡಳಿತಾಧಿಕಾರಿಗಳ ಕೆಲಸದ ಒತ್ತಡ ಕಡಿಮೆಗೆ ಕ್ರಮ: ಕೃಷ್ಣ ಬೈರೇಗೌಡ

DK-Shiva-Kumar

Gandhi Jayanthi: ನಾಳೆ ಕಾಂಗ್ರೆಸ್‌ನಿಂದ ರಾಜ್ಯಾದ್ಯಂತ ಗಾಂಧಿ ನಡಿಗೆ

yogi

Rahul Gandhi ಆಕಸ್ಮಿಕ ಹಿಂದೂ: ಸಿಎಂ ಯೋಗಿ ಆದಿತ್ಯನಾಥ್‌

Amit Shah

PM ಮೋದಿ ವಿರುದ್ಧ ಖರ್ಗೆ ಆಡಿದ ಮಾತು ಅಸಹ್ಯಕರ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.