Muda Case: ಮುಡಾ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ
ಆದೇಶ ಏನು ಬರುತ್ತದೆಯೋ ಕಾದು ನೋಡಬೇಕಿದೆ
Team Udayavani, Sep 3, 2024, 1:45 PM IST
ರಾಯಚೂರು: ಮುಡಾ ಪ್ರಕರಣ ನಾವು ತಿಳಿದುಕೊಂಡ ಮಟ್ಟದಲ್ಲಿಲ್ಲ. ಬಹಳ ಆಳವಾಗಿದೆ. ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಈಗ ಚರ್ಚೆ ಮಾಡುವುದು ಅನಾವಶ್ಯಕ. ಆದರೆ, ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.
ನಗರದಲ್ಲಿ ಮಂಗಳವಾರ(ಸೆ.03) ಸುದ್ದಿಗಾರರ ಜತೆ ಮಾತನಾಡಿ, ಯಾರೇ ಆಗಲಿ ತುಂಬಾ ದಿನ ಎಲ್ಲರಿಗೂ ಮೋಸ ಮಾಡಲು ಆಗುವುದಿಲ್ಲ. ನಾನು ಮೈಸೂರು ಉಸ್ತುವಾರಿ ಮಂತ್ರಿಯಾಗಿದ್ದಾಗ 7,900 ಸೈಟ್ ಗಳನ್ನು ಎರಡೂವರೆ ವರ್ಷದಲ್ಲಿ ಸಿದ್ಧ ಮಾಡಿಸಿದ್ದೆ. ಕೋವಿಡ್ ಮುಗಿದ ಮೇಲೆ ಹರಾಜು ಹಾಕಿಸುವ ಉದ್ದೇಶವಿತ್ತು. ಇದರಿಂದ 15 ಸಾವಿರ ಕೋಟಿ ರೂ. ಬರಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ರಾತ್ರಿ ಒಂದು ಗಂಟೆಗೆ ನನಗೆ ಮೈಸೂರಿನಿಂದಲೇ ನನ್ನನ್ನು ಎತ್ತಂಗಡಿ ಮಾಡಲಾಯಿತು ಎಂದು ವಿವರಿಸಿದರು.
ಇದನ್ನೂ ಓದಿ:Uttar Pradesh: ಪ್ರೇಮಸಂಬಂಧ-ಪುತ್ರಿಯ ಗಂಟಲು ಸೀಳಿ, ತಲೆ ಕಡಿದು ಹ*ತ್ಯೆಗೈದ ತಂದೆ!
ನನ್ನ 45 ವರ್ಷದ ರಾಜಕಾರಣದಲ್ಲಿ ಕಂಡಂತೆ ಸಿಎಂ ಸಿದ್ದರಾಮಯ್ಯ ಒಬ್ಬ ಮುತ್ಸದ್ದಿ. ಅಂಥವರ ಮೇಲೆ ಆರೋಪ ಬಂದಿದೆ. ಅವರು ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ ನಮಗೆ. ಆದರೆ ಆರೋಪದ ಬಗ್ಗೆ ಕೂಗು ಬಂದಿದೆ. ತನಿಖೆಗೆ ಗವರ್ನರ್ ಆದೇಶ ಮಾಡಿದ್ದಾರೆ. ಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಆದೇಶ ಏನು ಬರುತ್ತದೆಯೋ ಕಾದು ನೋಡಬೇಕಿದೆ. ಆಮೇಲೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದರು.
ರಾಜ್ಯದಲ್ಲಿ ಸದ್ಯ ಪರಸ್ಥಿತಿ ಕುದಿತಾ ಇದೆ. ಇಂಥ ವೇಳೆ ಕಾಂಗ್ರೆಸ್ ವರು ಇನ್ನೊಂದು ಮತ್ತೊಂದು ಹೇಳುವುದು ಸಮಂಜಸ ಅಲ್ಲ. ನಾವು ಎಷ್ಟೇ ದೊಡ್ಡವರಾದರೂ ಕಾನೂನಿನ ಎದುರು ಎಲ್ಲರೂ ಸಮಾನರು. ಡಾ.ಅಂಬೇಡ್ಕರ್ ಎಲ್ಲರಿಗೂ ಸಮಾನ ಕಾನೂನು ಮಾಡಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಅಭಿವೃದ್ಧಿ ಚಿಂತಕರಲ್ಲಿ ಒಬ್ಬರು. ಯಾರು ಯೂಟರ್ನ್ ಹೊಡೆದಿಲ್ಲ. ಮೂರು ನಾಲ್ಕು ದಿನಗಳಲ್ಲಿ ಎಲ್ಲವೂ ಹೊರಗೆ ಬರುತ್ತದೆ. ರಾಜ್ಯಪಾಲರ ಹುದ್ದೆ ಆಯಾ ರಾಜ್ಯಗಳಿಗೆ ಗೌರವಿಸುವ ಹುದ್ದೆ. ಕಾನೂನು ಸಂರಕ್ಷಣೆ ಮಾಡುವುದು ರಾಜ್ಯಪಾಲರ ಕರ್ತವ್ಯ. ರಾಜ್ಯಪಾಲರ ತೀರ್ಮಾನ ಸರಿಯಾಗಿದೆ. ಕಾಂಗ್ರೆಸ್ ನವರು ಬರೀ ಹುಲಿ ಬಂತು ಹುಲಿ ಎನ್ನುವ ಜಾಯಮಾನದವರು. ಎಷ್ಟು ಜನರಿಗೆ ಕಿವಿಯಲ್ಲಿ ಹೂ ಇಡುತ್ತಾರೆ. ಕೋವಿಡ್ ತನಿಖೆ ಅಗತ್ಯ ಇದೆಯಾ? ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.