MUDA Scam: ಹೈಕೋರ್ಟ್ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ
ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ, ಕಾನೂನಿನ ಅಡಿ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುವೆ: ಸಿದ್ದರಾಮಯ್ಯ
Team Udayavani, Sep 24, 2024, 6:03 PM IST
ಬೆಂಗಳೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿ ರಾಜ್ಯಪಾಲರು ತಮ್ಮ ವಿರುದ್ಧ ಅಭಿಯೋಜನೆ (ಪ್ರಾಸಿಕ್ಯೂಷನ್)ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸೆಕ್ಷನ್ 218ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯ ಹೈಕೋರ್ಟ್ (High Court) ಸಂಪೂರ್ಣ ತಿರಸ್ಕರಿಸಿ, ಆದೇಶದಲ್ಲಿನ ಸೆಕ್ಷನ್ 17ಎ ಪಿಸಿ ಕಾಯಿದೆಗೆ ಮಾತ್ರ ಸೀಮಿತಗೊಳಿಸಿ ನ್ಯಾಯಮೂರ್ತಿಗಳು ಪ್ರಾಥಮಿಕ ತನಿಖೆಗೆ ತೀರ್ಪು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನ್ಯಾಯಾಲಯದ ಆದೇಶವನ್ನು ವಿಶ್ಲೇಷಿಸಿದರು.
ಹೈಕೋರ್ಟ್ ಮಂಗಳವಾರ ನೀಡಿದ ಆದೇಶದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿ ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರು, ಸಂಪುಟದ ಸಹದ್ಯೋಗಿಗಳು, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಹೇಳಿದರು.
ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು. ಈ ದಿನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯ ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡರು.
ಬಿಜೆಪಿ-ಜೆಡಿಎಸ್‌ನಿಂದ ರಾಜಕೀಯ ಪಿತೂರಿ:
ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಆದರೆ ಬಿಜೆಪಿ-ಜೆಡಿಎಸ್ ಪಕ್ಷಗಳು ರಾಜ್ಯದ ಜನರಿಂದ ಸಂಪೂರ್ಣ ಬಹುಮತದಿಂದ ಈ ವರೆಗೆ ಅಧಿಕಾರಕ್ಕೆ ಬಂದಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನ ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರ ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ.
ಬಿಜೆಪಿ – ಜೆಡಿಎಸ್ ನಾಯಕರ ಸಂಚು, ಒಳಸಂಚು, ರಾಜಭವನ ದುರುಪಯೋಗ – ದುರ್ಬಳಕೆ ಈ ಯಾವುದಕ್ಕೂ ನಾನು ಹೆದರುವವನಲ್ಲ. ಕಾರಣ ಕರ್ನಾಟಕದ ಜನ ನನ್ನ ಮತ್ತು ನಮ್ಮ ಸರ್ಕಾರದ ಜೊತೆಗಿದ್ದಾರೆ.
– ಮುಖ್ಯಮಂತ್ರಿ @siddaramaiah #MudaCase #KarnatakaHighCourt pic.twitter.com/hImBe5JG4l— CM of Karnataka (@CMofKarnataka) September 24, 2024
ಕೇಂದ್ರ ಸರಕಾರದಿಂದ ಸೇಡಿನ ರಾಜಕಾರಣ:
ಇದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ನನ್ನ ವಿರುದ್ದ ಮಾತ್ರ ಸೇಡಿನ ರಾಜಕೀಯ ಮಾಡುತ್ತಿಲ್ಲ. ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರ ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯ ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ ಎಂದು ಹೇಳಿದರು.
ಪಕ್ಷದ ಹೈಕಮಾಂಡ್, ಸಚಿವರು, ಶಾಸಕರ ಬೆಂಬಲವಿದೆ:
ಡಿಸಿಎಂ ಸೇರಿದಂತೆ ಸಚಿವರು, ಕಾಂಗ್ರೆಸ್ ಪಕ್ಷದ ಹೈಕಮಾಂಡ್, ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತೀಕಾರಕ್ಕೆ ಇಳಿದಿದೆ ಎಂದು ಹೇಳಿದರು.
ರಾಜೀನಾಮೆ ಕೊಡಲ್ಲ:
17ಎ ಪಿಸಿ ಕಾಯಿದೆಯಡಿ ತನಿಖೆಗೆ ಅನುಮತಿ ಕೊಟ್ಟ ತಕ್ಷಣ ತಪ್ಪು ಮಾಡಿದ್ದೇನೆ ಅಂತ ಅರ್ಥವಲ್ಲ, ಹಾಗಾಗಿ ರಾಜೀನಾಮೆ ಕೊಡುವ ಪ್ರಶ್ನೆ ಬರುವುದಿಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.