ಕಾರಿನಲ್ಲಿ ಸ್ಪೋಟಕ ಪತ್ತೆ ಪ್ರಕರಣ : ತಿಹಾರ್ ಜೈಲಿಗೆ ಮುಂಬಯಿ ಪೊಲೀಸ್ ಭೇಟಿ
Team Udayavani, Mar 14, 2021, 6:30 AM IST
ಮುಂಬಯಿ: ಅಂಬಾನಿ ನಿವಾಸದ ಬಳಿ ಸ್ಫೋಟಕವಿದ್ದ ಕಾರನ್ನು ತಾವೇ ನಿಲ್ಲಿಸಿದ್ದು ಎಂದು “ಜೈಶ್-ಉಲ್-ಹಿಂದ್’ ಸಂಘಟನೆಯ ಹೆಸರಿನಲ್ಲಿ ಟೆಲಿಗ್ರಾಂ ಆ್ಯಪ್ ಸಂದೇಶದ ಹಿನ್ನೆಲೆಯಲ್ಲಿ ಮುಂಬಯಿ ಪೊಲೀಸರು, ಶನಿವಾರ ತಿಹಾರ್ ಜೈಲಿಗೆ ಭೇಟಿ ನೀಡಿ, ಅಲ್ಲಿ ಸೆಂಟ್ರಲ್ ಜೈಲ್ ಸಂಖ್ಯೆ 8ರಲ್ಲಿ ಬಂಧಿತನಾಗಿರುವ ತಹ್ಸಿನ್ ಅಖ್ತರ್ ಎಂಬಾತನನ್ನು ವಿಚಾರಣೆ ಗೊಳಪಡಿಸಿದರು. ಭಾರತದಲ್ಲಿ ಇಂಡಿಯನ್ ಮುಜಾಹಿದ್ದೀನ್ ಗುಂಪುಗಳನ್ನು ನಿರ್ವಹಿಸುತ್ತಿದ್ದ ಆರೋಪದಡಿ 2014ರಲ್ಲಿ ಈತ ಬಂಧನಕ್ಕೊಳಗಾಗಿದ್ದ.
ವೇಝ್ ಅರ್ಜಿ ವಜಾ: ಇದೇ ಪ್ರಕರಣದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದ ಮನ್ಸುಖ್ ಹಿರಾನ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸ್ ಅಧಿಕಾರಿ ಸಚಿನ್ ವೇಝ್, ಮುಂಬಯಿಯ ಸ್ಥಳೀಯ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿ ವಜಾಗೊಂಡಿದೆ.
ವಿಚಾರಣೆಗೆ ಹಾಜರು: ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿನ್ ವೇಝ್ ಅವರು ಶನಿವಾರ ಮುಂಬಯಿಯಲ್ಲಿ ಇರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು.
ಮತ್ತೂಂದೆಡೆ, ಇದೇ ಪ್ರಕರಣದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದ ಮನ್ಸುಖ್ ಹಿರಾನ್ ಅವರನ್ನು ದುಷ್ಕರ್ಮಿ ಗಳು ಹತ್ಯೆ ಮಾಡಿರಬಹುದೆಂದು, ಈ ಪ್ರಕರಣದ ತನಿಖೆ ನಡೆಸುತ್ತಿರುವ ಮಹಾ ರಾಷ್ಟ್ರ ಉಗ್ರ ನಿಗ್ರಹ ಪಡೆ ಸಂಶಯ ವ್ಯಕ್ತ ಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.