ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು
Team Udayavani, Feb 9, 2021, 11:00 PM IST
ಮೈಸೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಕೊಳ್ಳಲು ಯತ್ನಿಸಿದ ಹಲ್ಲೆಕೋರರ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗುಂಡಿನ ದಾಳಿ ನಡೆಸಿದ್ದಾರೆ.
ಹುಣಸೂರು ತಾಲೂಕಿನ ಹಂದನಹಳ್ಳಿ ಗೇಟ್ ಬಳಿಯ ಗುಡ್ಡೇ ಬಸವೇಶ್ವರ ದೇವಸ್ಥಾನದ ಬಳಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ.
ಪೊಲೀಸ್ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಜಯಂತ್ ಎಂಬಾತನ ಕಾಲಿಗೆ ಗುಂಡೇಟು ತಗಲಿದ್ದು, ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯ ಹಲ್ಲೆಯಿಂದ ಗಾಯಗೊಂಡ ಇಬ್ಬರು ಪೊಲೀಸರನ್ನು ಹುಣಸೂರು ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಳಿಕೆರೆ ಪೊಲೀಸ್ ಠಾಣೆಯ ಎಸ್‌ಐ ಜಯ ಪ್ರಕಾಶ್ ಅವರು, ಹಲ್ಲೆಕೋರ ಜಯಂತ್‌ನ ಕಾಲಿಗೆ ರಿವಾಲ್ವಾರ್‌ನಿಂದ ಗುಂಡು ಹಾರಿಸಿದ್ದಾರೆ.
ಇದನ್ನೂ ಓದಿ:ಇನ್ನು ವಾರದಲ್ಲಿ 4 ದಿನ ಕೆಲಸ, 3 ರಜೆ? ಕಾರ್ಮಿಕ ನಿಯಮಾವಳಿ ಬದಲಾವಣೆಗೆ ಮುಂದಾದ ಕೇಂದ್ರ
ಘಟನೆ ಹಿನ್ನೆಲೆ:
ಜ.22 ರಂದು ಕೆ.ಆರ್. ನಗರದಿಂದ ಮೈಸೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬಿಳಿಕೆರೆ ಬಳಿಯ ಹೊಸ ರಾಮನಹಳ್ಳಿಯ ರಸ್ತೆಯಲ್ಲಿ ಬೈಕ್ ಸಂಚಾರಕ್ಕೆ ಜಾಗ ಬಿಡಲಿಲ್ಲ ಎಂದು ಆಕ್ರೊಶಗೊಂಡ ಮೂವರು, ಬಸ್ ಅನ್ನು ಅಡ್ಡ ಗಟ್ಟಿ ಚಾಲಕ ವೆಂಕಟೇಶ್ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬಿಳಿಕೆರೆ ಪೊಲೀಸರು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದರು. ಮೂವರು ಆರೋಪಿಗಳು ಮೊಳಕಾಲ್ಮೂರಿನ ಲಾಡ್ಜ್ ನಲ್ಲಿ ಇರುವ ಬಗ್ಗೆ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಜಯಂತ್, ವಿಘ್ನೆಶ್ ಮತ್ತು ದೀಪಕ್‌ನನ್ನು ವಶಕ್ಕೆ ಪಡೆದು, ಬಿಳಿಕೆರೆ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರವಿ ಕುಮಾರ್ ಮತ್ತುಎಸ್‌ಐ ಜಯ ಪ್ರಕಾಶ್ ಮೈಸೂರಿಗೆ ಕರೆದುಕೊಂಡು ಬರುವಾಗ, ಮಾರ್ಗ ಮಧ್ಯೆ ಮೂತ್ರ ವಿಸರ್ಜನೆ ಮಾಡಬೇಕೆಂದು ಜಯಂತ್ ವಾಹನ ನಿಲ್ಲಿಸುವಂತೆ ಹೇಳಿದ್ದಾನೆ. ಈ ವೇಳೆ ಕಾರನ್ನು ನಿಲ್ಲಿಸಿ, ಇಬ್ಬರು ಪೇದೆಗಳು ಆತನೊಂದಿಗೆ ತೆರಳಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ ಜಯಂತ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಕ್ಷಣ ಸ್ಥಳದಲ್ಲಿದ್ದ ಎಸ್‌ಐ ಜಯ ಪ್ರಕಾಶ್, ತಪ್ಪಿಸಿಕೊಂಡು ಹೋಗುತ್ತಿದ್ದ ಜಯಂತ್‌ನ ಕಾಲಿಗೆ ಗುಂಡು ಹಾರಿಸಿ ಹಿಡಿದಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಪೇದೆಗಳನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಂಡೇಟಿನಿಂದ ಗಾಯಗೊಂಡ ಜಯಂತ್‌ನನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಎಸ್ಪಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.