Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
ಕೆಆರ್ ಎಸ್ ಅಣೆಕಟ್ಟು ಭರ್ತಿಯಾಗಲು ಇನ್ನು 1ಅಡಿಯಷ್ಟೇ ಬಾಕಿ ಇದೆ.
Team Udayavani, Jul 22, 2024, 12:28 PM IST
ಮೈಸೂರು/ಮಂಡ್ಯ : ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಕೆಆರ್ ಎಸ್ ಅಣೆಕಟ್ಟೆಗೆ ಸೋಮವಾರ ಭೇಟಿ ನೀಡಿ ನೀರಿನ ಸಂಗ್ರಹ, ಒಳಹರಿವು, ಹೊರಹರಿವು, ಅಣೆಕಟ್ಟೆ ಭದ್ರತೆ, ಬೃಂದಾವನ ಉದ್ಯಾನವನ ಅಭಿವೃದ್ಧಿ ಮತ್ತಿತರ ವಿಚಾರಗಳ ಬಗ್ಗೆ ಪರಿವೀಕ್ಷಣೆ ನಡೆಸಿ, ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಕದಲೂರು ಉದಯ್, ದರ್ಶನ್ ಪುಟ್ಟಣ್ಣಯ್ಯ, ಎಂಎಲ್ಸಿ ದಿನೇಶ್ ಗೂಳಿಗೌಡ, ಮಾಜಿ ಶಾಸಕ ಚಂದ್ರಶೇಖರ್, ಮಾಜಿ ಎಂಎಲ್ಸಿ ಮರಿತಿಬ್ಬೇಗೌಡ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಜಿಲ್ಲಾಧಿಕಾರಿ ಕುಮಾರ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
ಕೆಆರ್ ಎಸ್ ಅಣೆಕಟ್ಟು ಭರ್ತಿಯಾಗಲು ಇನ್ನು 1ಅಡಿಯಷ್ಟೇ ಬಾಕಿ ಇದೆ. ಸದ್ಯ ಅಣೆಕಟ್ಟೆಗೆ 70 ಸಾವಿರ ಕ್ಯುಸೆಕ್ ಒಳಹರಿವಿದೆ. ಅಲ್ಲದೇ 50 ಸಾವಿರ ಕ್ಯುಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಆರ್ ಎಸ್ ಗೆ ಭೇಟಿ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಆರ್ ಎಸ್ ಗೆ ಭೇಟಿ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಆರ್ ಎಸ್ ಗೆ ಭೇಟಿ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.