Mysuru ಯುವ ಸಂಭ್ರಮ; ರಾಷ್ಟ್ರೀಯ ಭಾವೈಕ್ಯತೆ ಹಾಗೂ ಕನ್ನಡ ವೈಭವಕ್ಕೆ ಸಾಕ್ಷಿ
ದಸರಾ ಮಹೋತ್ಸವದ ಆಕರ್ಷಣಿಯ ಕೇಂದ್ರ...
Team Udayavani, Oct 13, 2023, 9:11 PM IST
ಮೈಸೂರು: ಸಂವಿಧಾನದ ಮಹತ್ವ, ದೇಶದ ಯೋಧರ ಕೆಚ್ಚೆದೆಯ ಹೋರಾಟ, ರಾಷ್ಟ್ರೀಯ ಭಾವೈಕ್ಯತೆ, ಕನ್ನಡದ ವೈಭವಕ್ಕೆ ಸಾಕ್ಷಿಯಾಗಿದ್ದು ದಸರಾ ಮಹೋತ್ಸವದ ಆಕರ್ಷಣಿಯ ಕೇಂದ್ರವಾದ ಯುವ ಸಂಭ್ರಮದಲ್ಲಿ.
ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಶುಕ್ರವಾರ ನಡೆದ ಯುವ ಸಂಭ್ರಮ ರಾಷ್ಟ್ರೀಯ ಭಾವೈಕ್ಯತೆಗೆ ಸಾಕ್ಷಿಯಾಯಿತು.
ಅಂಬೇಡ್ಕರ್ ಅವರ ಹೋರಾಟದ ಬದುಕು, ಭಗತ್ ಸಿಂಗ್ ಹಾಗೂ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಮತ್ತು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕರ್ನಾಟಕದ ಏಕೀಕರಣದ ಬಗ್ಗೆ ಮೈಸೂರಿನ ಕೌಟಿಲ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಅಮೋಘ ನೃತ್ಯದ ಮೂಲಕ ಯುವ ಸಮೂಹಗಳ ಮುಂದೆ ಪ್ರದರ್ಶಿಸಿ ಸೈ ಎನಿಸಿಕೊಂಡರು.
ಕೊಡಗಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದೇಶಕ್ಕೆ ರಕ್ಷಾಕವಚವಾಗಿರುವ ಯೋಧರ ಸಾಹಸ ಮತ್ತು ಅವರ ನಿಸ್ವಾರ್ಥ ಸೇವೆಯ ಬಗ್ಗೆ ಜೇಮ್ಸ್ ಚಿತ್ರದ ಸಲಾಂ ಸೋಲ್ಜರ್ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಯೋಧರ ತ್ಯಾಗವನ್ನು ತಿಳಿಸಿದರು.
ಬೆಂಗಳೂರಿನ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಅಂಡ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಕನ್ನಡಿಗರ ಸಾಹಸ, ಶೌರ್ಯ ಹಾಗೂ ವೈಭವವನ್ನು ಸಿಂಹಾದ್ರಿಯ ಸಿಂಹ ಚಿತ್ರದ ಹಾಡಿಗೆ ಹೆಜ್ಜೆ ಹಾಕಿ ರಂಜಿಸಿದರೆ, ರಾಯಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹಿಳಾ ಸಬಲೀಕರಣದ ಬಗ್ಗೆ ಅದ್ಬುತವಾಗಿ ಪ್ರದರ್ಶನ ನೀಡಿದರು.
ಬೆಂಗಳೂರಿನ ಶ್ರೀ ದಕ್ಷ ಅಕಾಡೆಮಿ ಹಾಗೂ ಬಳ್ಳಾರಿ ಎಸ್.ಜಿ.ಟಿ ಕಾಲೇಜಿನ ವಿದ್ಯಾರ್ಥಿಗಳ ಸಮೂಹವು ಚೆಲ್ಲಿದರೂ ಮಲ್ಲಿಗೆಯಾ, ಜೋಗಿ ಚಿತ್ರದ ಹಾಡಿಗೆ ಕುಣಿಯುವುದರ ಮೂಲಕ ಕರ್ನಾಟಕದ ಜನಪದ ಪರಂಪರೆ ಹಾಗೂ ದೇಶೀಯ ಸಂಸ್ಕೃತಿಯನ್ನು ನೃತ್ಯದ ಮೂಲಕ ಹೇಳಿ ಯುವ ಸಮೂಹ ಕುಣಿಯುವಂತೆ ಮಾಡಿದರು.
ಹೊಳೆ ನರಸೀಪುರದ ಬಾಲಕಿಯರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಾರಮ್ಮ ಮತ್ತು ಮಾದಪ್ಪ ಬಗ್ಗೆ ಕಂಸಾಳೆ ನೃತ್ಯದ ಮೂಲಕ ರಂಜಿಸಿದರು. ಮೈಸೂರಿನ ಮಾತೃಮಂಡಳಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಗ್ರಪೂಜಿತ ಗಣೇಶನನ್ನು ಸ್ಮರಣೆ ಮಾಡುತ್ತ ಅಗ್ನಿಪಥ್ ಚಿತ್ರದ ದೇವಾ ಶ್ರೀ ಗಣೇಶ ಹಾಡಿಗೆ ಮನಮೋಹಕವಾಗಿ ಹೆಜ್ಜೆ ಹಾಕಿದರು.
ಗುಂಡ್ಲುಪೇಟೆಯ ಬೇಗೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಕೆಚ್ಚೆದೆಯ ಕನ್ನಡಿಗರ ಮಿಂಚಿನ ದಸರಾ ಸಂಭ್ರಮೋತ್ಸವವನ್ನು ಪಲ್ಲಕ್ಕಿ ಹಾಗೂ ವೀರಕನ್ನಡಿಗ ಚಿತ್ರದ ಹಾಡುಗಳಿಗೆ ಪುನೀತ್ ರಾಜ್ ಕುಮಾರ್ ಭಾವಚಿತ್ರ ಹಿಡಿದು ತಮ್ಮ ಅಮೋಘ ನೃತ್ಯದ ಮೂಲಕ ಪ್ರಸ್ತುತ ಪಡಿಸಿದರು.
ವೀರ ಕನ್ನಡಿಗ ಚಿತ್ರದ ಜೀವ ಕನ್ನಡ ದೇಹ ಕನ್ನಡ, ಮಲ್ಲ ಚಿತ್ರದ ಕರುನಾಡೆ ಕೈ ಚಾಚಿದೆ ನೋಡೆ ಹಾಗೂ ಸಮರ ಚಿತ್ರದ ಕನ್ನಡದ ಮಾತು ಚೆನ್ನ ಹಾಡುಗಳಿಗೆ ಹೆಜ್ಜೆ ಹಾಕುವ ಮೂಲಕ ಕನ್ನಡ ನಾಡಿನ ಸಂಭ್ರಮವನ್ನು ತೋರಿಸಿದ ಮೈಸೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಯುವ ಸಮೂಹ ಹೆಜ್ಜೆ ಹಾಕುವಂತೆ ಮಾಡಿದರು.
ಮೈಸೂರಿನ ಬೆಟ್ಟದಪುರದ ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರ ರಕ್ಷಣೆ ಮಾಡುತ್ತಿರುವ ದೇಶದ ಹೆಮ್ಮೆಯ ಯೋಧರ ಬಗ್ಗೆ ಕೆ.ಜಿ.ಎಫ್ ಹಾಗೂ ಜೆಮ್ಸ್ ಚಿತ್ರದ ಹಾಡುಗಳಿಗೆ ಮನೋಜ್ಞ ನೃತ್ಯದ ಮೂಲಕ ರಂಜಿಸಿದರು.
ರಾಮನಗರದ ಜ್ಞಾನವಿಕಾಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಮತ್ತು ಕಾಮಸ್೯ ಕಾಲೇಜಿನ ವಿದ್ಯಾರ್ಥಿಗಳು ಸಂಗೊಳ್ಳಿ ರಾಯಣ್ಣನ ಸಾಹಸ ಮತ್ತು ಹೋರಾಟದ ಬಗ್ಗೆ ತಮ್ಮ ಅದ್ಬುತ ನೃತ್ಯ ಸಂಯೋಜನೆ ಮೂಲಕ ಯುವ ಸಮೂಹಗಳ ಮುಂದೆ ಪ್ರದರ್ಶಿಸಿದರು.
ಕವಿರತ್ನ ಕಾಳಿದಾಸ ಚಿತ್ರದ ಹಾಡಿನೊಂದಿಗೆ ಬಂದ ಬೆಂಗಳೂರಿನ ಶಾಂತಿಧಾಮ ಕಾಲೇಜಿನ ವಿದ್ಯಾರ್ಥಿಗಳು ನವದುರ್ಗೆಯರ ದರ್ಶನದ ಮೂಲಕ ಸಭಿಕರು ಭಕ್ತಿಯ ಕಡಲಲ್ಲಿ ತೇಲುವಂತೆ ನರ್ತಿಸಿದರೆ, ಬೆಂಗಳೂರಿನ ಆಕ್ಸ್ ಬ್ರಿಡ್ಜ್ ಬಿಜಿನೆಸ್ ಶಾಲೆಯ ವಿದ್ಯಾರ್ಥಿಗಳ ತಂಡವು ನಾನಿ ಚಿತ್ರದ ಗೀತೆಗೆ ನಯನ ಮನೋಹರವಾಗಿ ಹೆಜ್ಜೆ ಹಾಕಿದರು.
ಮೈಸೂರಿನ ಜೆ.ಎಸ್.ಎಸ್.ವಾಕ್ ಶ್ರವಣ ಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಇತ್ತೀಚೆಗೆ ಯುವ ಸಮೂಹ ಪಾಲ್ಗೊಂಡು ಸಾಧನೆ ಮಾಡುತ್ತಿರುವ ಬಗ್ಗೆ ಹೆಜ್ಜೆ ಹಾಕಿ ಕ್ರೀಡೆಯ ಬಗ್ಗೆ ಅರಿವು ಮೂಡಿಸಿದರು.
ಮೈಸೂರಿನ ಮಿಮಿಕ್ರಿ ಶ್ಯಾಂ ಅವರು ಪುನೀತ್ ರಾಜ್ ಕುಮಾರ್, ದರ್ಶನ್ ಹಾಗೂ ಶಿವರಾಜ್ ಕುಮಾರ್ ಅವರ ಧ್ವನಿಯನ್ನು ಮಿಮಿಕ್ರಿ ಮಾಡುವುದರ ಮೂಲಕ ಯುವ ಸಮೂಹವನ್ನು ರಂಜಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.