ಕೆಲಗೇರಿ ಹೊಲದಲ್ಲಿ ಇಂದು ಸಂಜೆ ಕವಿ ಕಣವಿ ಅಂತ್ಯಕ್ರಿಯೆ
Team Udayavani, Feb 16, 2022, 11:55 AM IST
ಧಾರವಾಡ: ನಾಡೋಜ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ಕರ್ನಾಟಕ ಕಾಲೇಜಿನಲ್ಲಿ ಜಿಲ್ಲಾಡಳಿತ ವ್ಯವಸ್ಥೆ ಮಾಡಿದ್ದು, ಇಂದು ಬುಧವಾರ ಸಂಜೆಯೇ ಅಂತ್ಯಕ್ರಿಯೆ ನಡೆಸಲಾಗುತ್ತಿದೆ.
ಎಸ್ ಡಿ ಎಂ ಆಸ್ಪತ್ರೆ ಯಿಂದ ಕವಿ ಕಣವಿ ಅವರ ಪಾರ್ಥಿವ ಶರೀರವನ್ನು ಧಾರವಾಡದ ಕಲ್ಯಾಣ ನಗರದಲ್ಲಿ ಇರುವ ಅವರ ನಿವಾಸಕ್ಕೆ ತರಲಾಗುತ್ತಿದ್ದು, ಅಲ್ಲಿ ಲಿಂಗಾಯತ ಧರ್ಮ ವಿಧಿ ವಿಧಾನದಂತೆ ಪೂಜೆ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.
ಅಲ್ಲಿಂದ ಕೆಸಿಡಿ ಕಾಲೇಜ್ ನಲ್ಲಿ ಮಧ್ಯಾನ್ಹ ೧-೩ಗಂಟೆ ವರೆಗೆ ಸಾರ್ವಜನಿಕ ಅಂತಿಮ ದರ್ಶನ ಕ್ಕೆ ವ್ಯವಸ್ಥೆ ಮಾಡಲಾಗಿದ್ದು,ಅಲ್ಲಿಂದ ಕೆಲಗೇರಿ ಬಳಿ ಇರುವ ಕಣವಿ ಅವರ ಹೊಲದಲ್ಲಿಯೇ ಅಂತ್ಯಕ್ರಿಯೆ ನಡೆಸಲು ಅವರ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ.ಅದಕ್ಕಾಗಿ ಸಿದ್ದತೆ ಮಾಡಲಾಗಿದೆ. ಸಕಲ ಸರ್ಕಾರಿ ಪೊಲೀಸ್ ಗೌರವ ಗಳೊಂದಿಗೆ ಕವಿ ಕಣವಿ ಅವರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ತಿಳಿಸಿದ್ದಾರೆ.
ನಳಿನ್‍ಕುಮಾರ್ ಕಟೀಲ್ ಸಂತಾಪ
ಕಣವಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕಣವಿ ಅವರು ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್ ಎಂದು ಪ್ರಸಿದ್ಧರಾಗಿದ್ದರು. ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು ಎಂದು ಹೇಳಿದ್ದಾರೆ.
ಅಬಕಾರಿ ಸಚಿವ ಕೆ.ಗೋಪಾಲಯ್ಯ,ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸೇರಿ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.