ಭಯೋತ್ಪಾದಕರ ಮೇಲಿನ ಕಾಂಗ್ರೆಸ್ ಪ್ರೇಮ ಜಗಜ್ಜಾಹೀರು ಮಾಡಿದ ಡಿಕೆಶಿ: ನಳಿನ್‍ ಕುಮಾರ್


Team Udayavani, Dec 16, 2022, 12:42 PM IST

ನಳಿನ್‍ ಕುಮಾರ್

ಬೆಂಗಳೂರು: ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬೈಯ್ಯುವ ಭರದಲ್ಲಿ ಭಯೋತ್ಪಾದಕರ ಮೇಲಿನ ತಮ್ಮ ಪ್ರೇಮವನ್ನು ಜಗಜ್ಜಾಹೀರು ಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ದೇಶದ ಭದ್ರತೆ, ಏಕತೆ ವಿಚಾರದಲ್ಲಿ ಕಾಂಗ್ರೆಸ್ ಕಣ್ಣಾಮುಚ್ಚಾಲೆ ಆಡುತ್ತಿರುವುದು ಇದೇ ಮೊದಲಲ್ಲ. ಮಂಗಳೂರಿನ ಕುಕ್ಕರ್ ಬಾಂಬ್ ವಿಚಾರ ಭಯೋತ್ಪಾದನೆಗೆ ಸಮಾನವಲ್ಲ ಎಂದು ಮಾತನಾಡುವ ಇವರು ಅಧಿಕಾರಕ್ಕೆ ಬರದಂತೆ ಜನತೆ ತಕ್ಕ ಪಾಠ ಕಲಿಸುತ್ತಾರೆ; ಅಲ್ಲದೆ ಪೂರ್ಣಪ್ರಮಾಣದಲ್ಲಿ ಮೂಲೆಗುಂಪು ಮಾಡುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಾಟ್ಲಾ ಹೌಸ್ ಪ್ರಕರಣದಲ್ಲಿ ಕಾಂಗ್ರೆಸ್‍ನ ಅಂದಿನ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿಯವರು ಉಗ್ರರನ್ನು ಎನ್‍ಕೌಂಟರ್ ಮಾಡಿದ್ದಕ್ಕಾಗಿ ಅತ್ತಿದ್ದುದು ನೆನಪಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಹಿಂದೊಮ್ಮೆ ನೆಹರೂ ಮತದ ಲಾಭಕ್ಕಾಗಿ ಉರ್ದುವಿನಲ್ಲಿ ತನ್ನ ಮದುವೆ ಆಮಂತ್ರಣ ಪತ್ರವನ್ನು ಮುದ್ರಿಸಿದ್ದರು. ರಾಜೀವ್ ಗಾಂಧಿ ಕೂಡ ಭಿಂದ್ರನ್‍ವಾಲೆಯನ್ನು ಒಬ್ಬ ಸಂತ ಎಂದು ಕರೆದಿದ್ದರು ಎಂದು ನೆನಪಿಸಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದನೆ ಉತ್ತುಂಗ ಸ್ಥಿತಿಯಲ್ಲಿತ್ತು. ಕಾಂಗ್ರೆಸ್ ಪಕ್ಷ ಭಯೋತ್ಪಾದಕರಿಗೆ ಬೆಂಬಲ ಕೊಡುವ ಮೂಲಕ ಮತಬ್ಯಾಂಕ್ ರಾಜಕೀಯ ಮಾಡುತ್ತಿದೆ. ಇದನ್ನು ಜನರು ಅರ್ಥ ಮಾಡಿಕೊಂಡಿದ್ದು, ಎಲ್ಲೆಡೆ ಅವರ ವಿರುದ್ಧ ಜನಾಭಿಪ್ರಾಯ ಮೂಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಜೈಲು ಸೇರುವಂತೆ ಮಾಡಿದ ಪ್ರೇಯಸಿಯ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ

ದೇಶದ ಭದ್ರತೆ ಮತ್ತು ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸೇರಿದಂತೆ ಪಂಚ ರಾಜ್ಯ ಚುನಾವಣೆ, ಗುಜರಾತ್ ಚುನಾವಣೆಯಲ್ಲಿ ಜನರು ಬಿಜೆಪಿ ಪರ ನಿಂತಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೇರುವ ಹಗಲುಗನಸು ಕಾಣುತ್ತಿರುವ ಕಾಂಗ್ರೆಸ್ ಅಧ್ಯಕ್ಷರಿಗೆ ಅದು ತಿರುಕನ ಕನಸು ಎಂಬುದರ ಅರಿವಾಗಿದೆ. ಆದ್ದರಿಂದಲೇ ಅವರು ಭಯೋತ್ಪಾದಕರ ಪರ ನಿಂತು ತಮ್ಮ ತುಷ್ಟೀಕರಣ ನೀತಿಯನ್ನು ಮುಂದುವರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಮ್ಮ ದೇಶದ ಸೈನಿಕರ ಪರ ನಿಲ್ಲದೆ, ರಕ್ಷಣಾ ವಿಚಾರದಲ್ಲೂ ಸಾಕ್ಷಿ ಕೇಳುವ ಮಟ್ಟಕ್ಕೆ ಕಾಂಗ್ರೆಸ್ ತಲುಪಿದೆ. ಇದೀಗ ಭಯೋತ್ಪಾದಕರ ಪರ ನಿಂತು ತನ್ನ ಲಜ್ಜೆಗೇಡಿ ವರ್ತನೆಯನ್ನು ಮುಂದುವರಿಸಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಭಯೋತ್ಪಾದನೆಯಂಥ ವಿಚಾರದಲ್ಲೂ ರಾಜಕೀಯದ ಬೇಳೆ ಬೇಯಿಸಿಕೊಳ್ಳುವ ಕಾಂಗ್ರೆಸ್ಸಿಗರ ಹೇಯ ಮನಸ್ಥಿತಿಯನ್ನು ಖಂಡಿಸುವುದಾಗಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

bike

Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.