ಡಿ.31ರ ರಾತ್ರಿ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧ
Team Udayavani, Dec 23, 2020, 11:21 PM IST
ಚಿಕ್ಕಬಳ್ಳಾಪುರ: ಕರ್ನಾಟಕದ ಊಟಿಯೆಂದು ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಡಿ.31ರ ರಾತ್ರಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಲಾಗಿದೆ.
ಜಿಲ್ಲೆಯ ಪ್ರವಾಸ ತಾಣಗಳಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಪ್ರವಾಸಿಗರ ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗಿದ್ದು ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಬಳಸಲು ನಿರ್ದೇಶನ ನೀಡಲಾಗಿದೆ.
ಡಿ.31 ರ ರಾತ್ರಿ ಯಾವುದೇ ಪ್ರವಾಸಿಗರನ್ನು ನಂದಿ ಗಿರಿಧಾಮದಲ್ಲಿ ಉಳಿದುಕೊಳ್ಳಲು ನಿಷೇಧಿಸಲಾಗಿದೆ. ಜೊತೆಗೆ ಆನ್‌ಲೈನ್ ಬುಕ್ಕಿಂಗ್ ಸಹ ಸ್ಥಗಿತಗೊಳಿಸಲಾಗಿದೆ ಎಂದು ನಂದಿ ಗಿರಿಧಾಮದ ವಿಶೇಷ ಅಧಿಕಾರಿ ಗೋಪಾಲ್ ತಿಳಿಸಿದ್ದಾರೆ.
ಇದನ್ನೂ ಓದಿ:ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಯೋಜನೆಗೆ ಸಂಪುಟ ಅಸ್ತು
ಕ್ರಿಸ್‌ಮಸ್ ಮತ್ತು ಹೊಸವರ್ಷದ ಅಂಗವಾಗಿ ನಂದಿ ಗಿರಿಧಾಮ ಸಹಿತ ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಯಾವುದೇ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ. ಆದರೆ ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗಿದೆ. ಈಗಾಗಲೇ ನಂದಿ ಗಿರಿಧಾಮದಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ನಿರ್ಲಕ್ಷ ವಹಿಸಿದ ಪ್ರವಾಸಿಗರಿಗೆ ದಂಡ ವಿಧಿಸುವ ಮೂಲಕ ಶಾಕ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.