ಮಾಹಿತಿ ಸೋರಿಕೆ ಪ್ರಕರಣ: ಬಂಧಿತ ನೌಕಾಪಡೆ ಅಧಿಕಾರಿಗೆ ಜಾಮೀನು
Team Udayavani, Nov 22, 2021, 1:37 PM IST
ನವದೆಹಲಿ: ನೌಕಾಪಡೆಯ ಉಪಕರಣಗಳ ನಿರ್ವಹಣೆ ಮತ್ತು ಖರೀದಿಯ ಗೌಪ್ಯ ಮಾಹಿತಿ ಸೋರಿಕೆ ಆರೋಪದಲ್ಲಿ ಸಿಬಿಐನಿಂದ ಬಂಧಿತರಾಗಿರುವ ನೌಕಾಪಡೆಯ ಕಮಾಂಡರ್ ಅಜಿತ್ ಕುಮಾರ್ ಪಾಂಡೆ ಅವರಿಗೆ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.
ಸಿಬಿಐ ಅಧಿಕೃತ ರಹಸ್ಯ ಕಾಯಿದೆಯ ಅಡಿಯಲ್ಲಿ ತನಿಖೆಗೆ ಸಂಬಂಧಿಸಿದಂತೆ ಪಾಂಡೆ ಮತ್ತು ಇತರರ ವಿರುದ್ಧ “ಅಪೂರ್ಣ ಚಾರ್ಜ್ ಶೀಟ್” ಅನ್ನು ಸಲ್ಲಿಸಿದ ಹಿನ್ನಲೆಯಲ್ಲಿ ಜಾಮೀನು ದೊರಕಿದೆ. ಪಾಂಡೆ ಸೆಪ್ಟೆಂಬರ್ 3 ರಂದು ಬಂಧನಕ್ಕೊಳಗಾಗಿದ್ದರು.
ನ್ಯಾಯಾಲಯದ ಮುಂದೆ ಸಲ್ಲಿಸಲಾದ ಚಾರ್ಜ್ ಶೀಟ್ ಅಪೂರ್ಣವಾಗಿದ್ದು, ಅಧಿಕೃತ ರಹಸ್ಯ ಕಾಯಿದೆ (ಒಎಸ್‌ಎ) ಅಡಿಯಲ್ಲಿ ನಡೆಸಲಾಗುತ್ತಿರುವ ತನಿಖೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ, ಆದರೆ ಈ ಪ್ರಕರಣದಲ್ಲಿಯೇ ತನಿಖೆ ನಡೆಸಲಾಗುತ್ತಿದೆ ಎಂದು ವಿಶೇಷ ನ್ಯಾಯಾಧೀಶ ಅನುರಾಧಾ ಶುಕ್ಲಾ ಭಾರದ್ವಾಜ್ ಆದೇಶದಲ್ಲಿ ಹೇಳಿದ್ದಾರೆ.
ಇದೇ ಆಧಾರದ ಮೇಲೆ ನೌಕಾಪಡೆಯ ನಿವೃತ್ತ ಅಧಿಕಾರಿಗಳಾದ ಕಮಾಂಡರ್ ರಣದೀಪ್ ಸಿಂಗ್ ಮತ್ತು ಕಮಾಂಡರ್ ಸತ್ವಿಂದರ್ ಜೀತ್ ಸಿಂಗ್ ಸೇರಿದಂತೆ ಇತರ ಆರೋಪಿಗಳನ್ನು ನ್ಯಾಯಾಲಯ ಈಗಾಗಲೇ ಬಿಡುಗಡೆ ಮಾಡಿದೆ.
ತನಿಖಾ ಸಂಸ್ಥೆಯು 60 ದಿನಗಳು ಅಥವಾ 90 ದಿನಗಳ ಅವಧಿಯೊಳಗೆ ಆರೋಪ ಪಟ್ಟಿಯನ್ನು ಸಲ್ಲಿಸದಿದ್ದಲ್ಲಿ ಆರೋಪಿಯು ಡೀಫಾಲ್ಟ್ ಜಾಮೀನಿಗೆ ಅರ್ಹನಾಗುತ್ತಾನೆ.
ನೌಕಾಪಡೆಯ ನಿವೃತ್ತ ಅಧಿಕಾರಿಗಳಾದ ಕಮೋಡೋರ್ ರಣದೀಪ್ ಸಿಂಗ್ ಮತ್ತು ಕಮಾಂಡರ್ ಸತ್ವಿಂದರ್ ಜೀತ್ ಸಿಂಗ್ ಅವರು ಸೆಪ್ಟೆಂಬರ್ 2 ರಂದು ನೌಕಾಪಡೆಯಲ್ಲಿ ನಡೆದ ಸಭೆಗೆ ಸಂಬಂಧಿಸಿದ ನಿರ್ಣಾಯಕ ವಿವರಗಳನ್ನು ಹಂಚಿಕೊಳ್ಳಲು ಹೊರಟಿದ್ದಾರೆ ಎಂಬ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಸಿಬಿಐ ಇಬ್ಬರನ್ನೂ ಒಂದೇ ದಿನ ಬಂಧಿಸಿತ್ತು.
ಹೈದರಾಬಾದ್ ಮೂಲದ ಕಂಪನಿ ಅಲೆನ್ ರೀನ್‌ಫೋರ್ಸ್ಡ್ ಪ್ಲಾಸ್ಟಿಕ್ ಲಿಮಿಟೆಡ್‌ನಿಂದ ವ್ಯವಹಾರದಲ್ಲಿ ಲಂಚ ಪಡೆದು ನೌಕಾ ಉಪಕರಣಗಳ ಸಂಗ್ರಹಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಯ ಸೋರಿಕೆಯ ಆರೋಪಗಳ ಬಗ್ಗೆ ಸಂಸ್ಥೆ ತನಿಖೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.