ಅಗತ್ಯ ತೀರ್ಮಾನಗಳನ್ನು ಚಿಂತನ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು: ಸಿಎಂ ಬೊಮ್ಮಾಯಿ
Team Udayavani, Jul 14, 2022, 7:11 PM IST
ಬೆಂಗಳೂರು: ನಾಳೆ ನಡೆಯುವ ಚಿಂತನ ಸಭೆಯಲ್ಲಿ ಸಂಘಟನೆ ವಿಚಾರ, ಪಕ್ಷವನ್ನು ಇನ್ನಷ್ಟು ಬಲಪಡಿಸುವುದು, ಮುಂಬರುವ ಚುನಾವಣೆ ಎದುರಿಸುವ ಕುರಿತು ನಾಳೆ ಚರ್ಚಿಸಿ ಅಗತ್ಯ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 9 ಗಂಟೆಗೆ ಸಭೆ ಪ್ರಾರಂಭವಾಗಲಿದೆ. ಈ ಮೇಲಿನ ವಿಷಯಗಳಲ್ಲದೆ ಬೇರೆ ಬೇರೆ ವಿಷಯಗಳೂ ಚರ್ಚೆಗೆ ಒಳಪಡಬಹುದು. ಮುಕ್ತವಾಗಿ ಚಿಂತನೆಗೆ ನಾವು ಅವಕಾಶ ಮಾಡಿಕೊಟ್ಟಿದ್ದೇವೆ ಎಂದರು.
ನಾಳಿನ ಸಭೆಯ ಕುರಿತು ಇಂದು ಚರ್ಚಿಸಲಾಗಿದೆ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಈ ಚರ್ಚೆ ನಡೆದಿದೆ. ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರು, ಸಚಿವ ಸಂಪುಟದ ಎಲ್ಲ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. 50ಕ್ಕೂ ಹೆಚ್ಚು ಜನ ರಾಜ್ಯ ಪ್ರಮುಖರೂ ಭಾಗವಹಿಸುವ ಸಭೆ ಇದಾಗಿದೆ. ನಾಳೆ ಚರ್ಚೆಯ ಬಳಿಕ ಸಂಪೂರ್ಣ ಚಿತ್ರಣ ಲಭಿಸಲಿದೆ ಎಂದರು.
ಅರುಣ್ ಸಿಂಗ್, ನಳಿನ್‍ಕುಮಾರ್ ಕಟೀಲ್ ಮತ್ತು ಇತರ ಮುಖಂಡರು ಈ ಸಂದರ್ಭದಲ್ಲಿ ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.