ಸುಲಲಿತವಾಗಿ ನಡೆದ ನೀಟ್: 3,843 ಪರೀಕ್ಷಾ ಕೇಂದ್ರಗಳಲ್ಲಿ 90% ವಿದ್ಯಾರ್ಥಿಗಳು ಹಾಜರು
Team Udayavani, Sep 14, 2020, 10:35 AM IST
ಹೊಸದಿಲ್ಲಿ: ಭಾರೀ ಚರ್ಚೆಗೆ ಗ್ರಾಸವಾಗಿದ್ದ ರಾಷ್ಟ್ರಮಟ್ಟದ ವೈದ್ಯಕೀಯ ಕೋರ್ಸ್ ಪ್ರವೇಶ ಪರೀಕ್ಷೆ (ನೀಟ್) ರವಿವಾರ ದೇಶದ 3,843 ಪರೀಕ್ಷಾ ಕೇಂದ್ರಗಳಲ್ಲಿ ಅಪರಾಹ್ನ 2 ಗಂಟೆಯಿಂದ ಸಂಜೆ 5ರ ವರೆಗೆ ಜರಗಿತು. ಪರೀಕ್ಷೆಗಾಗಿ ನೋಂದಾಯಿಸಲ್ಪಟ್ಟಿದ್ದ ಸುಮಾರು 15.97 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ. 85ರಿಂದ 90ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ನಾಲ್ವರು ಆತ್ಮಹತ್ಯೆ: ನೀಟ್ ಪರೀಕ್ಷೆಯ ಒತ್ತಡ ತಾಳಲಾರದೆ ತಮಿಳುನಾಡಿನಲ್ಲಿ ಕಳೆದೊಂದು ವಾರದಲ್ಲಿ ಒಟ್ಟು ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಮಧುರೈನಲ್ಲಿ ಜ್ಯೋತಿಶ್ರೀ ದುರ್ಗಾ, ಧರ್ಮಪುರಿಯಲ್ಲಿ ಆದಿತ್ಯ ಎಂಬ ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ರವಿವಾರ, ತಿರುಚೆಂಗೋಡ್‌ನಲ್ಲಿ ಮೋತಿಲಾಲ್, ಅರಿಯಾಲೂರ್‌ನ ವಿಘ್ನೇಶ್ ಎಂಬ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಆತ್ಮಹತ್ಯೆಯಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳ ಸಮೂಹವೊಂದು ಮಧುರೈನ ನೀಟ್ ಪರೀಕ್ಷಾ ಕೇಂದ್ರವಾದ ಕೇಂದ್ರೀಯ ವಿದ್ಯಾನಿಲಯ ಶಾಲೆಯ ಮುಂದೆ ಬುಧವಾರ ಪ್ರತಿಭಟನೆ ನಡೆಸಿತು. ಪೊಲೀಸರು 23 ಪ್ರತಿಭಟನಕಾರರನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.