Budget;1 ಲಕ್ಷ ಬಡ, ಮಧ್ಯಮ ವರ್ಗದ ನಗರವಾಸಿಗಳಿಗೆ ಸೂರು; 2.2 ಲಕ್ಷ ಕೋ.ರೂ. ಉತ್ತೇಜನ ಘೋಷಣೆ
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3 ಕೋಟಿ ಹೊಸ ಮನೆಗಳ ನಿರ್ಮಾಣ
Team Udayavani, Jul 24, 2024, 6:55 AM IST
ಹೊಸದಿಲ್ಲಿ: ನಗರಗಳ ವಸತಿ ಯೋಜನೆಗೆ ಇನ್ನಷ್ಟು ಆದ್ಯತೆ ನೀಡಿರುವ ಕೇಂದ್ರ ಸರ್ಕಾರ 2.2 ಲಕ್ಷ ಕೋಟಿ ರೂ.ಗಳ ಉತ್ತೇಜನವನ್ನು ಘೋಷಿಸಿದೆ. 10 ಲಕ್ಷ ಕೋಟಿ ರೂ.ಗಳ ಹೂಡಿಕೆಯೊಂದಿಗೆ ನಗರಗಳ 1 ಕೋಟಿ ಬಡ ಮತ್ತು ಮಧ್ಯಮ ವರ್ಗಗಳಿಗೆ ವಸತಿ ಸೌಕರ್ಯ ಕಲ್ಪಿಸಲಾಗುವುದು.
ಜತೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಮೂಲಕ ಯೋಜನೆಯನ್ನು ವಿಸ್ತರಿಸುವುದಾಗಿ ಘೋಷಿಸಿದೆ. 2015ರ ಜೂನ್‌ನಲ್ಲಿ ಪ್ರಾರಂಭವಾದ ಈ ಯೋಜನೆ ಎಲ್ಲ ಅರ್ಹ ನಗರ ಫಲಾನುಭವಿಗಳಿಗೆ ಮೂಲಭೂತ ಸೌಕರ್ಯಗಳೊಂದಿಗೆ ಮನೆಗಳನ್ನು ಒದಗಿಸುವ ಗುರಿ ಹೊಂದಿದೆ. ಕಳೆದ ಫೆಬ್ರವರಿಯಲ್ಲಿ ಮಂಡಿಸಿದ್ದ ಮಧ್ಯಂತರ ಬಜೆಟ್‌ನಲ್ಲೂ ಪಿಎಂಎವೈಗೆ 80,671 ಕೋಟಿ ರೂ. ನಿಗದಿಪಡಿಸಲಾಗಿತ್ತು. ಅದಕ್ಕೂ ಹಿಂದಿನ ಬಜೆಟ್‌ಲ್ಲಿ 54,103 ಕೋಟಿ ರೂ. ಅನುದಾನ ಒದಗಿಸಲಾಗಿತ್ತು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ವಸತಿ ಕೊರತೆ ನೀಗಿಸಲು ಹೆಚ್ಚಿನ ಅನುದಾನ ನೀಡಿರುವುದು ನಗರವಾಸಿಗಳ ಅರ್ಹ ಫಲಾನುಭವಿಗಳಿಗೆ ನೆರವಾಗಲಿದೆ. ಕಳೆದ 10 ವರ್ಷಗಳಲ್ಲಿ 4.21 ಕೋಟಿ ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ.
ಮನೆ ಕಟ್ಟಲು ಬಡ್ಡಿ ಸಬ್ಸಿಡಿ
ನಗರವಾಸಿಗಳು ತಮ್ಮ ಕನಸಿನ ಮನೆಗಳನ್ನು ಕಟ್ಟಿಕೊಳ್ಳಲು ಕೈಗೆಟುಕುವ ದರದಲ್ಲಿ ಸಾಲ ನೀಡಲು ಅನುಕೂಲವಾಗುವಂತೆ ಬಡ್ಡಿ ಸಬ್ಸಿಡಿ ನೀಡಲೂ ಕೇಂದ್ರ ಯೋಜಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.