ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ NET/SLET ಕನಿಷ್ಠ ಅರ್ಹತೆ
Team Udayavani, Jul 6, 2023, 7:28 AM IST
ಹೊಸದಿಲ್ಲಿ: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಎನ್‌ಇಟಿ/ಎಸ್‌ಇಟಿ/ಎಸ್‌ಎಲ್‌ಇಟಿ ಅನ್ನು ಕನಿಷ್ಠ ಅರ್ಹತಾ ಮಾನದಂಡವಾಗಿ ಪರಿಗಣಿಸಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಆದೇಶ ಹೊರಡಿಸಿದೆ. ಈ ನಿಯಮವು 2023ರ ಜು.1ರಿಂದ ಜಾರಿಗೆ ಬಂದಿದೆ.
ಈ ಹಿಂದೆ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಪಿಎಚ್‌ಡಿ ಕಡ್ಡಾಯ ಎಂಬ ಆದೇಶವನ್ನು ಯುಜಿಸಿ ಮಾಡಿತ್ತು. ಆದರೆ ಶೈಕ್ಷಣಿಕ ಪರಿಸ್ಥಿತಿ ಅವಲೋಕಿಸಿ, ಪಿ.ಎಚ್‌ಡಿ ಅರ್ಹತೆ ಕೇವಲ ಐಚ್ಛಿಕವಾಗಿ ಪರಿಗಣಿಸಲಾಗಿದೆ. ಹಾಗಾಗಿ, ವಿಶ್ವ ವಿದ್ಯಾನಿ ಲಯಗಳು ಮತ್ತು ಕಾಲೇಜುಗಳಿಗೆ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಎನ್‌ಇಟಿ/ಎಸ್‌ಇಟಿ/ಎಸ್‌ಎಲ್‌ಇಟಿಯನ್ನು ಕನಿಷ್ಠ ಅರ್ಹತಾ ಮಾನದಂಡವಾಗಿ ಪರಿಗಣಿಸಲಾಗಿದೆ ಎಂದು ಯುಜಿಸಿ ತಿಳಿಸಿದೆ. 2018ರಲ್ಲಿ ಆದೇಶ ಹೊರಡಿಸಿದ್ದ ಯುಜಿಸಿ, ಸಹಾಯಕ ಪ್ರಾಧ್ಯಾ ಪಕರ ಹುದ್ದೆಗಳಿಗೆ ಪಿಎಚ್‌ಡಿ ಕನಿಷ್ಠ ಅರ್ಹತೆ ಎಂದು ಪರಿಗಣಿಸಿತ್ತು.
ಪಿ.ಎಚ್‌ಡಿ ಮಾಡಲು ಅಭ್ಯರ್ಥಿಗಳಿಗೆ ಮೂರು ವರ್ಷಗಳ ಸಮಯವನ್ನು ನೀಡಿತ್ತು. ಅನಂತರ ಪುನಃ ಎರಡು ವರ್ಷ ಗಳ ಕಾಲ ಅಂದರೆ 2023ರ ಜುಲೈವರೆಗೆ ಇದನ್ನು ವಿಸ್ತರಿಸಿತ್ತು. ಈ ಕುರಿತು ಈ ಹಿಂದೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ಪ್ರಸ್ತುತ ಶೈಕ್ಷಣಿಕ ಪರಿ ಸ್ಥಿತಿಯಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಪಿಎಚ್‌ಡಿ ಕಡ್ಡಾಯಗೊಳಿಸುವುದು ಸಮಂಜಸವಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Thrissur: ಹೊಸ ವರ್ಷಕ್ಕೆ ವಿಶ್ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.